ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರ ಜಿ20 ಬೆಂಗಾವಲು ಪಡೆಯಲ್ಲಿದ್ದ ಚಾಲಕನನ್ನು ಪ್ರೋಟೋಕಾಲ್ ಉಲ್ಲಂಘನೆಗಾಗಿ ಶನಿವಾರ ದೆಹಲಿಯಲ್ಲಿ ಬಂಧಿಸಲಾಯಿತು.
ನಿರ್ಲಕ್ಷ್ಯದ ಚಾಲನೆಯ ಮೇಲೆ ಬಂಧಿಸಿ ವಿಚಾರಣೆಗೊಳಪಡಿಸಿದ ನಂತರ ಬಿಡುಗಡೆ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.
ನವದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯುತ್ತಿರುವುದರಿಂದ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ತಂಗಿದ್ದ ತಾಜ್ ಹೋಟೆಲ್‌ಗೆ ಅಮೆರಿಕ ಅಧ್ಯಕ್ಷರ ಬೆಂಗಾವಲು ಪಡೆಯಿಂದ ಬಂದ ಕಾರು ಪ್ರವೇಶಿಸಿದ ನಂತರ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಕಾರಿನಲ್ಲಿ ಹಲವು ಸ್ಟಿಕ್ಕರ್‌ಗಳು ಇದ್ದ ಕಾರಣ ಸ್ಥಳದಲ್ಲಿದ್ದ ಭದ್ರತಾ ಅಧಿಕಾರಿಗಳು ಪರಿಶೀಲನೆ ನಡೆಸಿ ವಿಚಾರಿಸಿದಾಗ, ಬೈಡನ್ ತಂಗಿದ್ದ ಐಟಿಸಿ ಮೌರ್ಯ ಹೊಟೇಲಿಗೆ ಇಂದು ಬೆಳಗ್ಗೆ 9.30ಕ್ಕೆ ಬರಬೇಕಿತ್ತು. ಆದರೆ ಚಾಲಕ ಲೋಧಿ ಎಸ್ಟೇಟ್ ಪ್ರದೇಶದಿಂದ ಬಂದ ಉದ್ಯಮಿಯೊಬ್ಬರನ್ನು ತಾಜ್‌ಗೆ ಬಿಡಬೇಕಾಗಿದ್ದರಿಂದ ತಾಜ್ ಹೋಟೆಲ್‌ಗೆ ಆಗಮಿಸಿದರು. ಚಾಲಕನಿಗೆ ಪ್ರೋಟೋಕಾಲ್ ಬಗ್ಗೆ ತಿಳಿದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಿಸಿಸಿಐ ಹಾಳು ಮಾಡಲು ಭ್ರಷ್ಟ ಜಯ್ ಶಾ ಸಾಕು ಎಂದಿದ್ದ ಮಾಜಿ ಕ್ರಿಕೆಟಿಗ ವೆಂಕಿ: ಕೆಲವೇ ನಿಮಿಷದಲ್ಲಿ ಪೋಸ್ಟ್ ಡಿಲೀಟ್!
ಬೆಂಗಾವಲು ಪಡೆಯಿಂದ ಕಾರನ್ನು ಭದ್ರತಾ ಅಧಿಕಾರಿಗಳು ವಿಚಾರಣೆ ನಡೆಸಿದ ನಂತರ ಚಾಲಕನನ್ನು ಬಿಡುಗಡೆ ಮಾಡಲಾಯಿತು.
ವಿಯೆಟ್ನಾಂಗೆ ಹೊರಟ ಬೈಡನ್
ಅಮೆರಿಕದ ಅಧ್ಯಕ್ಷ ಜೋ ಬೈಡನ್ ಜಿ 20 ಶೃಂಗ ಸಭೆ ಮುಗಿಸಿ ವಾಪಸ್ ಆದರು. ಭಾನುವಾರ ಅವರು ದೆಹಲಿಯಿಂದ ವಿಯೆಟ್ನಾಂಗೆ ಪ್ರಯಾಣ ಬೆಳೆಸಿದರು. ಶುಕ್ರವಾರ ಸಂಜೆ ಅವರು ನವದೆಹಲಿಗೆ ಆಗಮಿಸಿದ್ದರು.
ಜೋ ಬೈಡಲ್ ಅಮೆರಿಕದ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದರು. ಎರಡು ದಿನದ ಪ್ರವಾಸದಲ್ಲಿ ಅವರು ಹಲವು ಸಭೆಗಳಲ್ಲಿ ಪಾಲ್ಗೊಂಡಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಹಲವು ನಾಯಕರನ್ನು ಭೇಟಿಯಾದರು.
ನವದೆಹಲಿಯಲ್ಲಿ ಶನಿವಾರ ಮತ್ತು ಭಾನುವಾರ ಜಿ20 ಶೃಂಗಸಭೆ ನಡೆಯುತ್ತಿದೆ. ಶೃಂಗಸಭೆಗೆ 12.30ಕ್ಕೆ ತೆರೆ ಬೀಳಲಿದೆ. ಇದಕ್ಕೂ ಮೊದಲೇ ಅಮೆರಿಕ ಅಧ್ಯಕ್ಷರು ತಮ್ಮ ಎಲ್ಲ ಕಾರ್ಯಕ್ರಮ ಮುಗಿಸಿ, ವಿಯೆಟ್ನಾಂಗೆ ತೆರಳಿದರು.
ದೆಹಲಿಯಲ್ಲಿ ವಿಮಾನ ಹತ್ತುವ ಮೊದಲು ಜೋ ಬೈಡನ್ ವಿಮಾನ ನಿಲ್ದಾಣದಲ್ಲಿ ಭಾರತದಲ್ಲಿ ನೆಲೆಸಿರುವ ಅಮೆರಿಕದ ಪ್ರಜೆಗಳೊಂದಿಗೆ ಮಾತುಕತೆ ನಡೆಸಿದರು. ಶುಕ್ರವಾರ ಸಂಜೆ ಭಾರತಕ್ಕೆ ಆಗಮಿಸಿದ್ದ ಬೈಡನ್ ಶೃಂಗ ಸಭೆ ಮುಗಿಸಿ ವಾಪಸ್ ಆದರು.