ಆಡಳಿತ ಪಕ್ಷದ ವಿರುದ್ಧ ಹೋರಾಡಲು ಜೆಡಿಎಸ್ ಜೊತೆಗೆ ಮೈತ್ರಿ: ಮಾಜಿ ಸಿಎಂ ಬೊಮ್ಮಾಯಿ

Date:

Advertisements
  • ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ
  • ರಾಜ್ಯ ಅಧೋಗತಿ ಮುಟ್ಟಿದ್ದು, ಇದರ ವಿರುದ್ಧ ಜೊತೆಯಾಗಿ ಹೋರಾಟ

ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ಧ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ” ಎನ್ನುವ ಮೂಲಕ ಜೆಡಿಎಸ್‌ ಬಿಜೆಪಿ ಮೈತ್ರಿಯನ್ನು ಸಮರ್ಥಿಸಿಕೊಂಡರು.

“ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ಮತ್ತೊಂದು ಕಡೆ ಸಚಿವರುಗಳು ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ರಾಜ್ಯದಲ್ಲಿ ರಸ್ತೆಗೆ ಒಂದು ಹಿಡಿ ಮಣ್ಣನ್ನು ಹಾಕಲಾರದ ಸ್ಥಿತಿ ನಿರ್ಮಾಣವಾಗಿದೆ. ಈ ರೀತಿ ಆದರೆ ಇಡೀ ರಾಜ್ಯ ಅಧೋಗತಿಗೆ ಹೋಗುತ್ತದೆ. ಇದನ್ನು ನಿಲ್ಲಿಸುವ ಉದ್ದೇಶದಿಂದ ನಾವಂತೂ ಹೋರಾಟ ಮಾಡುತ್ತಿದ್ದೇವೆ. ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡುವುದು ವಿರೋಧ ಪಕ್ಷದ ಜವಾಬ್ದಾರಿ. ಈ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹತ್ತಿರ ಬರುತ್ತಿವೆ” ಎಂದರು.

Advertisements

ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಹಿಂದೆ ಕಾಂಗ್ರೆಸ್ ನವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಲ್ಲವೇ? ಆಗ ಇಬ್ಬರೂ ಅಸಹಾಯಕರಿದ್ದರಾ? ಜೆಡಿಎಸ್ ಗೆ ಎಷ್ಟು ಸ್ಥಾನ ಕೊಡಬೇಕು ಅನ್ನುವುದನ್ನು ವಸ್ತುಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ನಿರ್ಧರಿಸುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

ಬರ ಘೋಷಣೆಗೆ ನೆಪ

“ರಾಜ್ಯದಲ್ಲಿ ಬರ ಘೋಷಣೆಗೆ ಕೇಂದ್ರ ಸರ್ಕಾರದ ಮಾನದಂಡಗಳು ಅಡ್ಡಿಯಾಗುತ್ತಿವೆ ಎಂದು ರಾಜ್ಯ ಸರ್ಕಾರ ಕುಂಟು ನೆಪ ಹೇಳುತ್ತಿದೆ. ಈ ಹಿಂದೆಯೂ ಇದೇ ನಿಯಮಗಳಿದ್ದವು. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬರ ಘೋಷಣೆ ಮಾಡಲಿಲ್ಲವೇ? ನಾವು ಸಹ ಕೇಂದ್ರ ಸರ್ಕಾರ ಕೊಡುವುದಕ್ಕಿಂತ ಹೆಚ್ಚಿನ ಹಣ ಕೊಟ್ಟಿದ್ದೆವು. ನಿಯಮ ಬದಲಾವಣೆಗಾಗಿ ನಾವು ಕಾದುಕೊಂಡು ಕುಳಿತಿದ್ದೆವೇ” ಎಂದು ಪ್ರಶ್ನಿಸಿದರು.‌

“ನಾವು ಬರ ಪರಿಹಾರದ ಎರಡು ಪಟ್ಟು ಮೊತ್ತ ಕೊಟ್ಟಿದ್ದೆವು. ರಾಜ್ಯ ಸರ್ಕಾರಕ್ಕೆ ಜನರಿಗೆ ಸಹಾಯ ಮಾಡಬೇಕೆಂಬ ಮನಸ್ಸಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣೆಯ ಮೊದಲನೇ ಕಂತು ಈಗಾಗಲೇ ಬಂದಿದೆ. ಇವರಿಗೆ ರೈತರ ಸಂಕಷ್ಟ ಪರಿಹಾರ ಮಾಡೋ ಮನಸ್ಸಿಲ್ಲ. ರಾಜ್ಯ ಸರ್ಕಾರ ತನ್ನ ಅಧಿಕಾರ ಬಳಸಿ ಕೂಡಲೇ ಬರ ಘೋಷಣೆ ಮಾಡಬೇಕು” ಎಂದರು.

ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು

“ರಾಜ್ಯ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದಿರುವುದರಿಂದ ಖಾಸಗಿ ವಾಹನಗಳ ಮಾಲೀಕರು ಸಮಸ್ಯೆಗೆ ಸಿಲುಕಿದ್ದಾರೆ. ಸರ್ಕಾರ ಖಾಸಗಿ ಬಸ್ ಮಾಲೀಕರ ಸಮಸ್ಯೆ ಬಗೆಹರಿಸುತ್ತೇವೆ ಅಂತ ಹೇಳುತ್ತಲೇ ಬಂದಿದ್ದಾರೆ. ಸುಮ್ಮನೆ ಸಭೆ ಮಾಡಿದರು, ಈಗ ಖಾಸಗಿ ಬಸ್ ಮಾಲೀಕರ ವಿಶ್ವಾಸ ಕಳೆದುಕೊಂಡಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತು ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಸಬೇಕು” ಎಂದು ಆಗ್ರಹಿಸಿದರು.

“ಹಾವೇರಿಯ ಹೊಸರಿತ್ತಿ ಲಾಕಪ್ ಡೆತ್ ಪ್ರಕರಣ ಕುರಿತು ಮಾಹಿತಿ ತೆಗೆದುಕೊಳ್ಳುತ್ತೇನೆ. ಈ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರೆ ಖಂಡಿತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X