ಸಣ್ಣ ಸಮಸ್ಯೆಗೂ ಜನ ನನ್ನ ಬಳಿಗೆ ಬರುತ್ತಾರೆ ಎಂದರೆ ಡಿಸಿಗಳಿದ್ದು ಏನು ಪ್ರಯೋಜನ?: ಸಿದ್ದರಾಮಯ್ಯ ತರಾಟೆ

Date:

Advertisements
  • ‘ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ಅಧಿಕಾರಿಗಳು ಕೆಲಸ ಮಾಡಬೇಕು’
  • ‘ಡಿಸಿಗಳು, ಸಿಇಒಗಳು ಹಾಗೂ ತಹಶೀಲ್ದಾರರು ಜನ ಸಂಪರ್ಕ ಸಭೆ ನಡೆಸಲಿ’

ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, “ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ” ಎಂದು ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸಿದರು.

“ಮುಖ್ಯಮಂತ್ರಿಯಾದ ಬಳಿಕ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಆ ವೇಳೆ ಜನ ಸಾಮಾನ್ಯರು ನೂರಾರು ರೀತಿಯ ಮನವಿಗಳನ್ನು ನನಗೆ ನೀಡುತ್ತಿದ್ದಾರೆ. ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳನ್ನು ಹೊತ್ತುಕೊಂಡು ಜನ ನನ್ನ ಬಳಿ ಬರುತ್ತಿದ್ದಾರೆ. ನೀವು ಸ್ಥಳೀಯವಾಗಿ ಜನ ಸಂಪರ್ಕ ಸಭೆ ನಡೆಸಿ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ಕೊಟ್ಟಿದ್ದರೆ ಹೀಗೆ ಆಗುತ್ತಿರಲಿಲ್ಲ. ಕೆಲವೊಂದು ಸಮಸ್ಯೆಗಳಿಗೆ ವಾರದ ಕಾಲ ಮಿತಿಯಲ್ಲಿ ಪರಿಹಾರ ಒದಗಿಸಿ ಕೊಡಿ. ಕೆಲಸ ಆಗಿದೆಯಾ, ಇಲ್ಲವಾ ಎನ್ನುವುದನ್ನು ಮರು ಪರೀಕ್ಷಿಸಿ. ಆಗ ಸ್ಥಳೀಯ ಸಮಸ್ಯೆಗಳಿಗಾಗಿ ಜನತೆ ಬಸ್ ಚಾರ್ಜ್ ಖರ್ಚು ಮಾಡಿಕೊಂಡು ನನ್ನ ತನಕ ಬರುವ ಅಗತ್ಯವೇ ಬೀಳುವುದಿಲ್ಲ” ಎಂದರು.

Advertisements

“ಕೇವಲ ಬದಲಾವಣೆಗಾಗಿ ನಾಡಿನ ಜನತೆ ಸರ್ಕಾರವನ್ನು ಬದಲಾಯಿಸಿಲ್ಲ. ಬಹಳ ನಿರೀಕ್ಷೆಗಳನ್ನು ಇಟ್ಟುಕೊಂಡು ಹಿಂದಿನ ಸರ್ಕಾರವನ್ನು ಬದಲಾಯಿಸಿ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ. ಅಭಿವೃದ್ಧಿಯ ಆಶೋತ್ತರಗಳನ್ನು ಇಟ್ಟುಕೊಂಡ ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಶಾಸಕರು, ಮಂತ್ರಿಗಳು, ಅಧಿಕಾರಿಗಳು ಜನ ಸೇವಕರು. ಈ ಸಾಮಾನ್ಯ ತಿಳಿವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ನಾವ್ಯಾರು ರಾಜರುಗಳಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

ನ್ಯಾಯ ವಿಳಂಬ ಸುತಾರಾಂ ಸಹಿಸಲ್ಲ

“ತಹಸೀಲ್ದಾರ್‌, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬರುವ ಅರ್ಜಿಗಳು 5 ವರ್ಷಕ್ಕೂ ಹೆಚ್ಚು ಅವಧಿಗೆ ಬಾಕಿ ಉಳಿದಿರುವುದನ್ನು ಗಮನಿಸಲಾಗಿದೆ. 5 ವರ್ಷವಾದರೂ ಪ್ರಕರಣ ಇತ್ಯರ್ಥಪಡಿಸದೆ ಇದ್ದರೆ, ನೀವು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅರ್ಥ. Justice delayed is justice denied – ವಿಳಂಬ ಜಾಸ್ತಿಯಾದಷ್ಟು ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ. ವಿಳಂಬವೂ ಭ್ರಷ್ಟಾಚಾರವೇ” ಎಂದು ಅಭಿಪ್ರಾಯಪಟ್ಟರು.

“ತಹಸೀಲ್ದಾರರು ಒಂದು ಅರ್ಜಿಯನ್ನು ಸ್ವೀಕರಿಸಿದರೆ, ಮೂರು ತಿಂಗಳಲ್ಲಿ ಇತ್ಯರ್ಥವಾಗಬೇಕು. ಉಪವಿಭಾಗಾಧಿಕಾರಿಗಳ ಬಳಿ ಬರುವ ಮನವಿಗಳ ಇತ್ಯರ್ಥಕ್ಕೆ ಬಹಳ ವಿಳಂಬ ಮಾಡ್ತಾರೆ. ಇದನ್ನು ಕನಿಷ್ಠ ಆರು ತಿಂಗಳಲ್ಲಿ ಹಾಗೂ ಜಿಲ್ಲಾಧಿಕಾರಿಗಳು ಒಂದು ವರ್ಷದಲ್ಲಿ ಇತ್ಯರ್ಥ ಮಾಡಬೇಕು. ಜಿಲ್ಲಾಧಿಕಾರಿಗಳು ಅನಗತ್ಯವಾಗಿ ಪ್ರಕರಣ ಮುಂದೂಡುವುದು, ಕಕ್ಷಿದಾರರನ್ನು ಕಾಯಿಸುವುದು, ವಾದ-ವಿವಾದಗಳನ್ನು ಆಲಿಸಿದ ನಂತರ ತೀರ್ಪು ಬರೆಯಲು ವಿಳಂಬ ಮಾಡುವುದು ತರವಲ್ಲ. ಪ್ರಕರಣ ಇತ್ಯರ್ಥಗೊಳಿಸಲು ವಿಳಂಬ ಮಾಡಿದರೆ ನಮ್ಮ ಸರ್ಕಾರ ಸಹಿಸಲ್ಲ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X