ಅನಿಷ್ಟ ಸರ್ಕಾರದ ವಿರುದ್ಧ ಹೋರಾಟ, ಜೆಡಿಎಸ್‌ ಜೊತೆ ಮೈತ್ರಿ ಅನಿವಾರ್ಯ: ಬೊಮ್ಮಾಯಿ ಸ್ಪಷ್ಟನೆ

Date:

Advertisements
  • ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ
  • ಐಎನ್‌ಡಿಐಎ ಒಕ್ಕೂಟ ಒಗ್ಗಟ್ಟಾಗಿದ್ದು ಕೂಡ ಅಸಹಾಯಕರಾ?

ರಾಜ್ಯದ ಅನಿಷ್ಟ ಸರ್ಕಾರದ ವಿರುದ್ಧ ಹೋರಾಟ ಅವಶ್ಯಕತೆ ಇದೆ. ಹಾಗಾಗಿ ಜೆಡಿಎಸ್ ಜೊತೆ ಮೈತ್ರಿ ಅನಿವಾರ್ಯವಾಗಿದೆ. ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದ್ದು, ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಎರಡೂ ಪಕ್ಷಗಳು ಅಸಹಾಯಕವಾಗಿವೆ ಎಂದು ಕಾಂಗ್ರೆಸ್ ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, “ಈಗ ಐಎನ್‌ಡಿಐಎ ಒಕ್ಕೂಟ ಒಗ್ಗಟ್ಟಾಗಿದ್ದಾರೆ. ಒಬ್ಬರಿಗೊಬ್ಬರು ಆಗದ ಮಮತಾ ಬ್ಯಾನರ್ಜಿ, ಸಿಪಿಐ, ಸಿಪಿಎಂ, ಅರವಿಂದ ಕೇಜ್ರಿವಾಲ್, ಕಾಂಗ್ರೆಸ್ ಎಲ್ಲರೂ ಒಟ್ಟಾಗಿದ್ದಾರೆ. ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿವೆ, ಹಾಗಾದರೆ ಅವು ಅಸಹಾಯಕರಾ? ರಾಜಕಾರಣದ ಇತಿಹಾಸದಲ್ಲಿ ಅನೇಕ ಬದಲಾವಣೆ ಆಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

Advertisements

ಸಿಎಂ ಸಿದ್ದರಾಮಯ್ಯ ಅಡ್ವಾಣಿ ಅವರನ್ನು ಭೇಟಿ ಆಗಿದ್ದರು ಎಂಬ ಬಿ.ಕೆ ಹರಿಪ್ರಸಾದ್ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಈಗಾಗಲೇ ಸಿದ್ದರಾಮಯ್ಯನವರೇ ಉತ್ತರ ನೀಡಿದ್ದಾರೆ. ನಾಯಕರ ಭೇಟಿ ಮಾಡಿದರೆ ಸಿದ್ಧಾಂತ ಬದಲಾಗುವುದಿಲ್ಲ ಎಂದು ಹೇಳಿದ್ದಾರೆ. ಅದರ ಅರ್ಥ ಏನು” ಎಂದು ಪ್ರಶ್ನಿಸಿದರು‌.

“ಇಂದಿನಿಂದ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಅಂತ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ. ಸರ್ಕಾರ ತನ್ನ ಮಾತಿಗೆ ಎಷ್ಟು ಗಟ್ಟಿಯಾಗಿ ನಿಲ್ಲುತ್ತಾರೆ ಎಂದು ನೋಡೋಣ ಎಂದರು. ಸಚಿವ ಡಿ. ಸುಧಾಕರ್ ಮೇಲೆ ವಿರುದ್ಧ ಎಫ್‌ಐಆರ್ ಆಗಿದ್ದು ಈ ಬಗ್ಗೆ ತನಿಖೆ ಆಗಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X