ಏಷ್ಯಾ ಕಪ್ | ಭಾರತ-ಶ್ರೀಲಂಕಾ ಸೂಪರ್ 4 ಪಂದ್ಯಕ್ಕೂ ಮಳೆ ಭೀತಿ; ಟಾಸ್‌ ಗೆದ್ದ ಭಾರತ

Date:

Advertisements

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾ ಕಪ್ ಸೂಪರ್ 4 ಸುತ್ತಿನ ನಾಲ್ಕನೇ ಪಂದ್ಯ ಇಂದು (ಸೆ.12) ಕೊಲೊಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಾಕಿಸ್ತಾನ ವಿರುದ್ಧ 228 ರನ್‌ಗಳ ಭರ್ಜರಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಅದೇ ಉತ್ಸಾಹದಲ್ಲಿ ಶ್ರೀಲಂಕಾ ವಿರುದ್ಧ ಕಣಕ್ಕಿಳಿಯಲಿದೆ.

ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

Advertisements

ಏಷ್ಯಾ ಕಪ್ 2023ರ ಸೂಪರ್ ಫೋರ್ ಸುತ್ತಿನ ಭಾರತ-ಪಾಕಿಸ್ತಾನ ನಡುವಿನ ಮೂರನೇ ಪಂದ್ಯವೂ ಕೊಲಂಬೊದ ಪ್ರೇಮದಾಸ ಸ್ಟೇಡಿಯಂನಲ್ಲಿ ಮೀಸಲು ದಿನವಾದ ನಿನ್ನೆ ನಡೆದಿತ್ತು.

ಮೂದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 356 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ದೊಡ್ಡ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ 32 ಓವರ್‌ಗಳಲ್ಲಿ 128 ರನ್ ಗಳಿಸಲಷ್ಟೇ ಶಕ್ತವಾಯಿತು.

ಇಂದಿನ ಪಂದ್ಯದಲ್ಲಿ ಶಾರ್ಧೂಲ್ ಠಾಕೂರ್‌ ಬದಲು ಅಕ್ಸರ್‌ ಪಟೇಲ್‌ಗೆ ಅವಕಾಶ ನೀಡಲಾಗಿದೆ

ತಂಡದಲ್ಲಿ ಅನುಭವಿ ಮೊಹಮ್ಮದ್ ಶಮಿ ವೇಗದ ಬೌಲಿಂಗ್ ವಿಭಾಗದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ಉಳಿದಂತೆ ಭಾರತ ತಂಡದ ಆಡುವ 11ರ ಬಳಗದಲ್ಲಿ ಹೆಚ್ಚಿನ ಬದಲಾವಣೆಯ ನಿರೀಕ್ಷೆ ಇಲ್ಲವಾಗಿದೆ.

ಈ ಸುದ್ದಿ ಓದಿದ್ದೀರಾ? ಏಷ್ಯಾ ಕಪ್ | ಕುಲ್‌ದೀಪ್‌ ಮಾರಕ ದಾಳಿ; ಪಾಕ್‌ ವಿರುದ್ಧ ಭಾರತಕ್ಕೆ 228 ರನ್‌ಗಳ ಭರ್ಜರಿ ಜಯ

ಪ್ರಬಲ ಶ್ರೀಲಂಕಾ ತಂಡ

ಆಲ್‌ರೌಂಡರ್‌ ದಸುನ್‌ ಶನಕ ಸಾರಥ್ಯದ ಶ್ರೀಲಂಕಾ ತಂಡದಲ್ಲಿ ಗಾಯದ ಸಮಸ್ಯೆಗಳ ಕಾರಣ ಕೆಲ ಪ್ರಮುಖ ಆಟಗಾರರು ಅಲಭ್ಯವಾಗಿದ್ದಾರೆ. ಶ್ರೀಲಂಕಾ ಸೂಪರ್‌ 4 ಹಂತದ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು ರೋಚಕ ಜಯ ಗಳಿಸಿತ್ತು. ತಂಡದ ಪ್ರಮುಖ ಸ್ಪಿನ್ನರ್‌ ಮಹೀಶ ತೀಕ್ಷಣ ಅವರ ಪ್ರದರ್ಶನ ಇಲ್ಲಿ ನಿರ್ಣಾಯಕವಾಗುತ್ತದೆ. ಅವರಿಗೆ ದುನಿತ್‌ ವೆಲ್ಲಾಳಗೆ ಜೊತೆ ನೀಡಲಿದ್ದಾರೆ. ಬಲಿಷ್ಠ ಬ್ಯಾಟಿಂಗ್‌ ವಿಭಾಗದ ಎದುರು ಸವಾಲಾಗುವ ವಿಶ್ವಾಸದಲ್ಲಿ ಶ್ರೀಲಂಕಾದ ಸ್ಪಿನ್ನರ್‌ಗಳಿದ್ದಾರೆ.

ಭಾರತ ಮತ್ತು ಶ್ರೀಲಂಕಾ ತಂಡಗಳು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಇಲ್ಲಿಯವರೆಗೂ ಒಟ್ಟು 165 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಟೀಂ ಇಂಡಿಯಾ 96 ಪಂದ್ಯಗಳಲ್ಲಿ ಜಯಗಳಿಸಿದೆ. ಶ್ರೀಲಂಕಾ 57ರಲ್ಲಿ ಗೆಲುವು ಪಡೆದಿದೆ. 11 ಪಂದ್ಯಗಳಲ್ಲಿ ಫಲಿತಾಂಶ ಬಂದಿಲ್ಲ. ಒಂದು ಪಂದ್ಯ ಟೈ ಆಗಿದೆ.

ಕಳೆದ ನಾಲ್ಕೈದು ದಿನಗಳಿಂದ ಕೊಲಂಬೊದ ಆರ್ ಪ್ರೇಮದಾಸ ಸ್ಟೇಡಿಯಂ ಸುತ್ತಮುತ್ತ ಮಳೆಯಾಗುತ್ತಿದೆ. ಇಂದು ಕೂಡ ಶೇಕಡ 95 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇದ್ದು, ಗಾಳಿಯು ಗಂಟೆಗೆ 18 ಕಿಲೋ ಮೀಟರ್ ವೇಗದಲ್ಲಿದೆ.

ಪಂದ್ಯವಾಡುವ 11ರ ಬಳಗ

ಭಾರತ:

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಕುಲ್ದೀಪ್ ಯಾದವ್, ಜಸ್ಪೀತ್‌ ಬೂಮ್ರಾ, ಮೊಹಮ್ಮದ್ ಸಿರಾಜ್

ಶ್ರೀಲಂಕಾ:

ಪಾತುಮ್ ನಿಸಾಂಕ, ದಿಮುತ್ ಕರುಣಾರತ್ನೆ, ಕುಶಾಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ದಸುನ್ ಶನಕ (ನಾಯಕ), ದುನಿತ್ ವೆಲ್ಲಲಾಗೆ, ಮಹೀಶ್ ತೀಕ್ಷಣ, ಕಸುನ್ ರಜಿತ, ಮತೀಶ ಪತಿರಣ

ಪಂದ್ಯದ ಸಮಯ: ಮಧ್ಯಾಹ್ನ 3:00 ಗಂಟೆಗೆ

ನೇರ ಪ್ರಸಾರ

ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್

ಲೈವ್ ಸ್ಟ್ರೀಮಿಂಗ್: ಡಿಸ್ನಿ + ಹಾಟ್ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್ಸೈಟ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯಾಕಪ್​ಗೆ ಅಚ್ಚರಿಯ ಭಾರತ ತಂಡ ಪ್ರಕಟ; ಹಲವರಿಗೆ ಕೊಕ್‌, ಪ್ರಮುಖರ ಆಗಮನ

ಮಹತ್ವದ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ...

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

Download Eedina App Android / iOS

X