ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ದಿನಾಂಕ 13-9-2023 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 12:30 ಕ್ಕೆ ವಿಶೇಷ ತುರ್ತು ಸಭೆ ನಡೆಯಲಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ಪ್ರಾಧಿಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮುಂದಿನ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಸಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಚಲುವರಾಯ ಸ್ವಾಮಿ, ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ, ನಾಗೇಂದ್ರ, ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಎಸಿಎಸ್ ರಜನೀಶ್ ಗೋಯಲ್, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಸೇರಿ ಸಂಬಂಧಪಟ್ಟ ಹಲವು ಅಧಿಕಾರಿಗಳು ಸಭೆಯಲ್ಲಿದ್ದರು.
ಸಭೆಯ ತೀರ್ಮಾನದಂತೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರುಗಳು ಇಂದಿನ ತುರ್ತು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಲೇಖಕ, ಪತ್ರಕರ್ತ