ಚಿಕ್ಕಮಗಳೂರು ಜಿಲ್ಲೆಯ ಹಿರೇಗೌಜ ಬಳಿ ಸರಣಿ ಅಪಘಾತ ನಡೆದಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ದಂಪತಿ ಮೃತಪಟ್ಟಿದ್ದಾರೆ. ಅವರ 14 ತಿಂಗಳ ಮಗುವಿನ ಪರಿಸ್ಥಿತಿ ಗಂಭೀರವಾಗಿದೆ.
ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ದಂಪತಿ ಮತ್ತು ಮಗು ಕಡೂರು-ಮೂಡಿಗೆರೆ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ, ಅವರ ಬೈಕ್, ಟಿಪ್ಪರ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶಿವಮೊಗ್ಗದ ಆಸೀಫ್(38), ಮಾಜಿನಾ(33) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹12 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆಗೆ ಯತ್ನ; ಮಹಿಳೆ ಬಂಧನ
ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.