ಬೀದರ್‌ | ಮಕ್ಕಳ ದೈಹಿಕ ಕ್ರಿಯಾಶೀಲತೆಗೆ ಪೌಷ್ಟಿಕ ಆಹಾರ ಅತ್ಯಗತ್ಯ

Date:

Advertisements
  • ಸಿಂಧನಕೇರಾ ಗ್ರಾಮದಲ್ಲಿ ಜರುಗಿದ ಪೌಷ್ಟಿಕ ಆಹಾರ ಆಚರಣೆ, ಪೋಷಣಾ ಅಭಿಯಾನ ಕಾರ್ಯಕ್ರಮ
  • ಮಕ್ಕಳ ಉಜ್ವಲ ಭವಿಷ್ಯಕ್ಕೆ ಗುಣಮಟ್ಟ ಶಿಕ್ಷಣ ನೀಡುವುದು ತುಂಬಾ ಅಗತ್ಯವಾಗಿದೆ.

ಮಕ್ಕಳ ದೈಹಿಕ ಕ್ಷಮತೆ ಮತ್ತು ಕ್ರಿಯಾಶೀಲತೆಗಳಿಗೆ ಪೌಷ್ಟಿಕತೆ ಆಹಾರ ಅಗತ್ಯವಿದ್ದು, ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಪೌಷ್ಟಿಕ ಆಹಾರ ನೀಡಬೇಕು. ಮಕ್ಕಳ ಉಜ್ವಲ ಭವಿಷ್ಯಕ್ಕೆ ಗುಣಮಟ್ಟ ಶಿಕ್ಷಣ ನೀಡುವುದು ಅಷ್ಟೇ ಅಗತ್ಯವಾಗಿದೆ ಎಂದು ಶಿಕ್ಷಕ ಸಂತೋಷ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಇಲಾಖೆ ಹುಮ್ನಾಬಾದ್ ಇವರುಗಳ ಸಂಯುಕ್ತಾಶ್ರಯದಲ್ಲಿ ಹುಮನಾಬಾದ್‌ ತಾಲೂಕಿನ ಸಿಂಧನಕೇರಾ ಗ್ರಾಮದಲ್ಲಿ ಆಯೋಜಿಸಿದ್ದ ಪೌಷ್ಟಿಕ ಆಹಾರ ಆಚರಣೆ ಪ್ರಧಾನ ಮಂತ್ರಿ ಮಾತ್ರ ವಂದನಾ ಯೋಜನೆ ಸಪಾಹ ಆಚರಣೆ ಹಾಗೂ ರಾಷ್ಟ್ರೀಯ ಪೋಷಣಾ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪೋಷಣಾ ಅಭಿಯಾನದ ಮೇಲ್ವಿಚಾರಕಿ ದೇವತಾ ಮಾತನಾಡಿ, “ತಾಯಂದಿಯರಲ್ಲಿ ರಕ್ತ ಹೀನತೆ ಹೆಚ್ಚು ಕಂಡು ಬರುತ್ತಿದೆ, ಕಾಳು, ಹಸಿ ತರಕಾರಿ, ಹಣ್ಣು, ಹಂಪಲ ಸೇವನೆಯಿಂದ ರಕ್ತಹೀನತೆ ದೂರಮಾಡಬಹುದು. ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳನ್ನು ತಪಾಸಣೆಗೆ ಮಾಡಿಸಬೇಕು” ಎಂದು ಸಲಹೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್‌ | ಸೋರುತ್ತಿದೆ ಸರ್ಕಾರಿ ಶಾಲಾ ಮಾಳಿಗೆ; ಆತಂಕದಲ್ಲಿ ಮಕ್ಕಳು

ಇದೇ ಸಂದರ್ಭದಲ್ಲಿ ಗರ್ಭಿಣಿ ತಾಯಿಂದಿಯರಿಗೆ ಸೀಮಂತ ಕಾರ್ಯಕ್ರವನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ತಿಪ್ಪಮ್ಮ, ಆರೋಗ್ಯ ಇಲಾಖೆಯ ಮನೋರಂಜನೆ, ದತ್ತಾತ್ರೇಯ, ಹಾಗೂ ಅಂಗನವಾಡಿ ಕಾರ್ಯಕರ್ತರಾದ ಸಂಪಾವತಿ, ಪಾರ್ವತಿ, ನಾಗೇಶ್ವರಿ, ಜ್ಯೋತಿ, ಜಗದೇವಿ ಸೇರಿದಂತೆ ತಾಯಂದಿಯರು, ಮಕ್ಕಳು ಉಪಸ್ಥಿತರಿದ್ದರು.

ವರದಿ ಮಾಹಿತಿ: ಸಿಟಿಜನ್‌ ಜರ್ನಲಿಸ್ಟ್‌, ಭೀಮರೆಡ್ಡಿ ಸಿಂಧನಕೇರಾ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X