ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ

Date:

Advertisements

ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಸವಾಲಿನ ಕೆಲಸ. ಮಾನವ ಮತ್ತು ವನ್ಯಜೀವಿ ಸಂಘರ್ಷವನ್ನು ತಡೆಯಬೇಕಿದೆ. ಅರಣ್ಯ ರಕ್ಷಕರಿಗೆ ಆರೋಗ್ಯ ಸೇವೆ ಸೇರಿದಂತೆ ಕಲ್ಯಾಣ ಸೇವೆಗಳು ತಲುಪಬೇಕು. ಈ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರು, ತಮ್ಮ ಸುರಕ್ಷತೆ ಜತೆಗೆ ಸಾರ್ವಜನಿಕರ ಸುರಕ್ಷತೆಯ ಕಡೆಗೂ ಗಮನಹರಿಸಬೇಕಿದೆ ಎಂದು ನಿವೃತ್ತ ಏರ್‌ ಮಾರ್ಷಲ್‌ ಜನರಲ್ ಕೆ.ಸಿ ಕಾರ್ಯಪ್ಪ ಹೇಳಿದ್ದಾರೆ.

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಮಾತನಾಡಿ, “ಅರಣ್ಯವಿದ್ದಲ್ಲಿ ಉತ್ತಮ ಪರಿಸರ ಉಳಿಯಲು ಸಾಧ್ಯ. ಒಳ್ಳೆಯ ಪರಿಸರ ಇದ್ದಲ್ಲಿ ಮಳೆ-ಬೆಳೆ ಕಾಣಲು ಸಾಧ್ಯ. ಅರಣ್ಯ ಇಲಾಖೆಯ ಸಿಬ್ಬಂದಿ ದೇಶದ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಮಾಡಿದ ತ್ಯಾಗ ಮತ್ತು ಬಲಿದಾನಗಳ ಸ್ಮರಣೆಗಾಗಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನ ದೇಶಾದ್ಯಂತ ಆಚರಿಸಲಾಗುತ್ತದೆ” ಎಂದರು.

Advertisements

ಅಲ್ಲದೆ, ಅರಣ್ಯ ಹುತಾತ್ಮ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ, ಗೌರವ ಸಲ್ಲಿಸಲಾಯಿತು. ಈ ವೇಳೆ ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ, ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಂ.ಶರಣಬಸಪ್ಪ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್.ಚಂಗಪ್ಪ ಇತರರು  ಉಪಸ್ಥಿತರಿದ್ದರು.

ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಅವರು ಅರಣ್ಯ ಹುತಾತ್ಮರ ದಿನಾಚರಣೆಯ ಪಕ್ಷಿನೋಟ ಮತ್ತು ಅರಣ್ಯ ಹುತಾತ್ಮರ ಸ್ಮರಣೆಯನ್ನು ಓದಿದರು.   ಜೋಧುಪುರ್‍ನ ಮಹಾರಾಜ ಅಭಯ್‍ಸಿಂಗ್‍ನ ಅರಮನೆಗಾಗಿ ಆತನ ಸೈನಿಕರು ಕೇಜರ್ಲಿ ಪ್ರಾಂತ್ಯದಲ್ಲಿ ಬೆಳೆದಿದ್ದ ಮರಗಳನ್ನು ಕಡಿಯಲು ಮುಂದಾದಾಗ, ಬಿಷ್ಣೋಯಿ ಸಮುದಾಯದ ಪುರುಷ, ಮಹಿಳೆ ಮತ್ತು ಮಕ್ಕಳು ಸಹ ವಿರೋಧಿಸಿದ್ದರು. ಈ ವೇಳೆ ವಿರೋಧ ತೋರಿದ 363 ಮಂದಿಯನ್ನು, 1730ರ ಸೆಪ್ಟೆಂಬರ್, 11 ರಂದು ಕೊಲ್ಲಲಾಯಿತು.

ಮರಗಳ ಸಂರಕ್ಷಣೆಗಾಗಿ ಪ್ರಾಣ ಬಿಟ್ಟ ಬಿಷ್ಣೋಯಿಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಲು ಭಾರತ ಸರ್ಕಾರ ಸೆಪ್ಟೆಂಬರ್, 11ನ್ನು ‘ರಾಷ್ಟ್ರೀಯ ಅರಣ್ಯ ಹುತಾತ್ಮ ದಿನʼ ಎಂದು ಘೋಷಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗು | ನಟ ಚೇತನ್, ಪತ್ರಕರ್ತರು ಸೇರಿದಂತೆ ಹೋರಾಟಗಾರರಿಗೆ ಅರಣ್ಯ ಇಲಾಖೆ ನೊಟೀಸ್; ನಾಳೆ ವಿಚಾರಣೆಗೆ ಹಾಜರು

ಕೊಡಗು ಜಿಲ್ಲೆ, ಪೊನ್ನಂಪೇಟೆ ತಾಲ್ಲೂಕು ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಸರಿಸುಮಾರು...

ಕೊಡಗು | ಧರ್ಮಸ್ಥಳ ಅಸಹಜ ಸಾವು ಪ್ರಕರಣ; ಎಸ್ಐಟಿಯಿಂದ ಪಾರದರ್ಶಕ ತನಿಖೆ ನಡೆಯುವಂತೆ ಸಿಪಿಐ ಮಾಸ್ ಲೈನ್ ಮನವಿ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಮಹಿಳೆಯರ ಸರಣಿ ಅತ್ಯಾಚಾರ, ಕೊಲೆಯನ್ನು ಖಂಡಿಸುತ್ತಾ. ಎಸ್ಐಟಿ...

ಕೊಡಗಿನಲ್ಲಿ ಮಳೆ ಅಬ್ಬರಕ್ಕೆ ಮಹಿಳೆ ಬಲಿ; ರಾಜ್ಯದ 6 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ...

ಕೊಡಗು | ಜನ ಜೀವನಕ್ಕೆ ಕಂಟಕರಾದ ಅರಣ್ಯ ಇಲಾಖೆ; ಶಾಸಕ ಡಾ ಮಂತರ್ ಗೌಡ ಆಕ್ರೋಶ

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಕೆ ನಿಡುಗುಣೆ ಗ್ರಾಮದ ವಾಸಿ ಕಿಶೋರ್...

Download Eedina App Android / iOS

X