ಬೆಂಗಳೂರು | ಆರ್‌ಟಿಒ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

Date:

Advertisements

ಬೆಂಗಳೂರಿನಲ್ಲಿರುವ ಹಲವು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಒ) ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಆರ್‌ಟಿಒ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಏಕಕಾಲದಲ್ಲಿ ಕಚೇರಿಗಳ ಮೇಲೆ ದಾಳಿ ನಡೆದಿದೆ.

ಕಚೇರಿಗಳನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಅಧಿಕಾರಿಗಳು ಕಚೇರಿಯಲ್ಲಿರುವ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದು, ಅಧಿಕಾರಗಳನ್ನು ಪ್ರಶ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಒತ್ತುವರಿ ತೆರವು ವಿಫಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ: ತುಷಾರ್ ಗಿರಿನಾಥ್

ಜಯನಗರ ಮತ್ತು ರಾಜಾಜಿನಗರ ಆರ್‌ಟಿಒ ಕಚೇರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಲಹಂಕ ಮತ್ತು ಯಶವಂತಪುರ ಆರ್‌ಟಿಒ ಕಚೇರಿಗಳಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಲೋಕಾಯುಕ್ತದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

Download Eedina App Android / iOS

X