ಧಾರವಾಡ | ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟ ಆಯೋಜನೆ

Date:

Advertisements

ಅಂತರಾಷ್ಟ್ರೀಯ ಟೆನ್ನಿಸ್ ಫೆಡರೇಷನ್ ಮತ್ತು ಕರ್ನಾಟಕ ರಾಜ್ಯ ಲಾನ್ ಟೆನ್ನಿಸ್ ಅಸೋಸಿಯೇಷನ್ ಜಂಟಿಯಾಗಿ ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಅಕ್ಟೋಬರ್‌ನಲ್ಲಿ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಟೆನ್ನಿಸ್ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಇದರಲ್ಲಿ ವಿಶ್ವದ ಹಲವು ದೇಶಗಳ ಶ್ರೇಯಾಂಕಿತ ಟೆನ್ನಿಸ್ ಆಟಗಾರರು ಭಾಗವಹಿಸಲಿದ್ದಾರೆ.

ಟೆನ್ನಿಸ್ ಕ್ರೀಡಾ ಆಸಕ್ತರಿಗೆ ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್‍ನ ಆಜೀವ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಧಾರವಾಡ ಟೆನ್ನಿಸ್ ಕೋರ್ಟ್ ಸುಮಾರು 96 ವರ್ಷಗಳ ಐತಿಹಾಸಕತೆಯನ್ನು ಹೊಂದಿದೆ. ಐದು ಸಿಂಥೆಟಿಕ್ ಯುಎಸ್‍ಟಿಎ ಶ್ರೇಣಿಯ ಟೆನ್ನಿಸ್ ಕೋರ್ಟ್ ಹೊಂದಿದೆ. ಅತ್ಯಾಧುನಿಕ ಸೌಲಭ್ಯವುಳ್ಳ ಸುಸಜ್ಜಿತ ಜಿಮ್ ಹಾಗೂ ಟೆನ್ನಿಸ್ ಉತ್ತಮ ತರಬೇತಿದಾರರನ್ನು ಹೊಂದಿದೆ. ಇಲ್ಲಿನ ಟೆನ್ನಿಸ್ ಕೋರ್ಟ್ ಅಂತರಾಷ್ಟ್ರೀಯ ಗುಣಮಟ್ಟದ್ದಾಗಿದೆ.

ಈ ಸುದ್ದಿ ಓದಿದ್ದೀರಾ? ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು: ಮುಖ್ಯಮಂತ್ರಿ ಚಂದ್ರು

Advertisements

ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್‍ದ ಆಜೀವ ಸದಸ್ಯತ್ವ ಪಡೆಯಲು ಸೆಪ್ಟೆಂಬರ್ 15 ರಿಂದ 22ರವರೆಗೆ ಸೀಮಿತ ಕಾಲಾವಕಾಶ ನೀಡಲಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಸದಸ್ಯತ್ವ ಶುಲ್ಕದೊಂದಿಗೆ ಆಸಕ್ತರು ಸದಸ್ಯತ್ವ ಪಡೆಯಬಹುದು. ಸಂಪರ್ಕಕ್ಕಾಗಿ ಕಾರ್ಯದರ್ಶಿ ಸಂದೀಪ ಬಣವಿ, ಧಾರವಾಡ ಜಿಲ್ಲಾ ಲಾನ್ ಟೆನ್ನಿಸ್ ಅಸೋಸಿಯೇಷನ್ ಡಿ ಸಿ ಕಾಂಪೌಂಡ್‌, ಮೊ.ಸಂ: 9448460955, 6361398510 ಗೆ ಸಂಪರ್ಕಿಸಬಹುದು. ಟೆನ್ನಿಸ್ ಕಚೇರಿಗೆ ಬೆಳಿಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದೆಂದು ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಗೃಹಿಣಿ ಅಸಹಜ ಸಾವು: ಕೊಲೆ ಶಂಕೆ

ಇತ್ತೀಚಿಗಷ್ಟೇ ವಿವಾಹವಾಗಿದ್ದ ಗೃಹಿಣಿಯೊಬ್ಬರ ಅಸಹಜ ಸಾವು ಸಂಭವಿಸಿರುವ ಘಟನೆ ಹುಬ್ಬಳ್ಳಿ ನಗರದ...

ಧಾರವಾಡ | ಆ. 15 ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವ, ಏಕತೆ ರೂಢಿಸಿಕೊಳ್ಳುವ ದಿನ: ಸಚಿವ ಸಂತೋಷ್ ಲಾಡ್

ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ...

ಹುಬ್ಬಳ್ಳಿ | ಜಾತಿ ನಿಂದನೆ; ಸೂಕ್ತ ಕಾನೂನು‌ ಕ್ರಮಕ್ಕೆ ಕುರುಬ ಸಮಾಜ ಒತ್ತಾಯ

ಸಾರ್ವಜನಿಕವಾಗಿ ಕುರುಬ ಸಮಾಜವನ್ನು ನಿಂದನೆ ಮಾಡಿ ಹಾಗೂ ಕುರುಬ ಸಮುದಾಯದ ಮುಖ್ಯಮಂತ್ರಿ...

Download Eedina App Android / iOS

X