ಕೇಂದ್ರ ಸರ್ಕಾರದ ಬರ ಮಾರ್ಗಸೂಚಿಗೆ ಅರ್ಹವಾಗಿರುವ 161 ತಾಲ್ಲೂಕುಗಳನ್ನು ತೀವ್ರ ಮತ್ತು 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ಪ್ರದೇಶ ಎಂದು ರಾಜ್ಯ ಸರ್ಕಾರ ಘೋಷಿಸಿದೆ.
ರಾಜ್ಯದ 161 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದು, ಬರ ಘೋಷಣೆ ಸಂಬಂಧ ಸಚಿವ ಸಂಪುಟ ಉಪಸಮಿತಿ ಬುಧವಾರ ಐದನೇ ಸಭೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರ ಘೋಷಿಸಲು ಶಿಫಾರಸು ಮಾಡಿತ್ತು.
ಬರ ಘೋಷಣೆ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, “ಎನ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು” ಎಂದು ತಿಳಿಸಿದರು.
ಬರ ಪೀಡಿತ ಜಿಲ್ಲೆ ಮತ್ತು ತಾಲ್ಲೂಕುಗಳ ವಿವರ ಈ ಕೆಳಗಿನ ಫೈಲ್‌ನಲ್ಲಿ ನೋಡಬಹುದು...