ಬೆಂ-ಮೈ ಹೆದ್ದಾರಿ | ದಂಪತಿಯಿಂದ ಹಣ ದೋಚಿದ ನಕಲಿ ಪೊಲೀಸರು

Date:

Advertisements

ಒಂದೆರೆಡು ತಿಂಗಳ ಹಿಂದೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೊಡಗಿನ ವ್ಯಕ್ತಿಯೊಬ್ಬರು ದರೋಡೆಗೆ ಒಳಗಾಗಿ ಚಿನ್ನದ ಸರವನ್ನು ಕಳೆದುಕೊಂಡ ಪ್ರಕರಣ ಇನ್ನೂ ಕಣ್ಣಮುಂದೆ ಇರುವಾಗಲೇ ಮತ್ತೊಂದು ದರೋಡೆ ಕೃತ್ಯ ಇದೇ ಹೆದ್ದಾರಿಯಲ್ಲಿ ನಡೆದಿದೆ.

ಪೊಲೀಸರ ಸೋಗಿನಲ್ಲಿ ಬಂದ ದರೋಡೆಕೋರರಿಬ್ಬರು ಕೊಡಗಿನ ದಂಪತಿಯನ್ನು ಸುಲಿಗೆ ಮಾಡಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಪೊನ್ನಂಪೇಟೆ ತಾಲೂಕು ಟಿ. ಶೆಟ್ಟಿಗೇರಿಯ ವರ್ತಕ ಚಲನ್ ಹಾಗೂ ಅವರ ಪತ್ನಿ ಸೋಮವಾರ ಮುಂಜಾನೆ ಬೆಂಗಳೂರಿನಿಂದ ಕಾರಿನಲ್ಲಿ ಹಿಂತಿರುಗಿ ಬರುತ್ತಿದ್ದಾಗ ಶ್ರೀರಂಗಪಟ್ಟಣದ ಗಂಜಮ್ ಬಳಿ ನಂಬರ್ ಪ್ಲೇಟ್ ಇಲ್ಲದ ಸ್ಕೂಟಿಯಲ್ಲಿ ಪೊಲೀಸರ ಸೋಗಿನಲ್ಲಿದ್ದ ದರೋಡೆಕೊರರಿಬ್ಬರು ವಾಹನ ತಡೆದು ನಿಲ್ಲಿಸಿದ್ದಾರೆ.

ತಾವು ಪೊಲೀಸರೆಂದು ಹೇಳಿಕೊಂಡ ಇವರ ಪೈಕಿ ಓರ್ವ ಡ್ರೈವರ್ ಸೀಟ್‌ನಲ್ಲಿ ಕುಳಿತಿದ್ದ ಚಲನ್ ಅವರನ್ನು ಪಕ್ಕಕ್ಕೆ ಸರಿಸಿ ತಾನೇ ಕುಳಿತುಕೊಂಡಿದ್ದಾನೆ. ನಂತರ ದಾಖಲಾತಿಗಳನ್ನು ಪರಿಶೀಲನೆ ಮಾಡುವ ನಾಟಕ ವಾಡಿದ್ದಾನೆ. ಈ ಸಂದರ್ಭದಲ್ಲಿ ಮತ್ತೋರ್ವ ತಲ್ವಾರ್ ತೋರಿಸಿ ಚಿನ್ನ ಹಣವನ್ನೆಲ್ಲ ಕೊಡುವಂತೆ ಬೆದರಿಸಿದ್ದಾನೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತ್ನಿಯ ನಂಬರ್ ಕೇಳಿದ ಸ್ನೇಹಿತನಿಗೆ ಥಳಿಸಿದ ರೌಡಿಶೀಟರ್‌; 10 ಮಂದಿಯಿಂದ ಮನೆಗೆ ದಾಳಿ

ಇವರಿಬ್ಬರು 30 ಗ್ರಾಂ ತೂಕ ಹಾಗೂ 2 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಅಪಹರಿಸಿ, ಚಲನ್ ಅವರ ಪತ್ನಿಯ ಕೊರಳಲ್ಲಿದ್ದ ತಾಳಿಯನ್ನು ಬಿಚ್ಚಿಕೊಡುವಂತೆ ತಾಕೀತು ಮಾಡಿದ್ದಾರೆ. ಆದರೆ ತಾಳಿ ಕೊಡಲು ಸುತರಾಮ್ ಒಪ್ಪದ ಚಲನ್ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದು ಪಾರಾಗಿದ್ದಾರೆ. ಈ ಸಂಬಂಧ ದರೋಡೆಗೊಳಗಾದ ದಂಪತಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿರಬೇಕಾಗಿದೆ: ನ್ಯಾ. ಬಿ ಟಿ ವಿಶ್ವನಾಥ್

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ದೇಶದ ಮಕ್ಕಳನ್ನು ನಾವು ಗುಡಿ, ಮಸೀದಿ,...

ಮಂಡ್ಯ | ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ: 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಜಿಲ್ಲಾಧಿಕಾರಿ – ಆರೋಪ

ಬೋರ್ಡಿಂಗ್‌ ಮತ್ತು ಲಾಡ್ಜಿಂಗ್‌ ತೆರೆಯಲು 'ಸಿಎಲ್‌7' ಪರವಾನಗಿ ನೀಡಲು ಮಂಡ್ಯ ಅಬಕಾರಿ...

ಮಂಡ್ಯ | ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದಿದೆ: ಸಚಿವ ಎನ್ ಚಲುವರಾಯಸ್ವಾಮಿ

ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದು. ಕಿತ್ತೂರು ರಣಿ ಚೆನ್ನಮ್ಮ, ಸಂಗೊಳ್ಳಿ...

ಮಳವಳ್ಳಿ | ತಳಗವಾದಿ ಗ್ರಾಮಕ್ಕೆ ಮೂಲಸೌಕರ್ಯ ಮರೀಚಿಕೆ: ಜನಪ್ರತಿನಿಧಿಗಳ ನಿರ್ಲಕ್ಷ್ಯ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮ, ತಾಲೂಕು ಕೇಂದ್ರದಿಂದ ಕೇವಲ...

Download Eedina App Android / iOS

X