ಇಂಜಿನಿಯರ್‌ಗಳು ದೇಶದ, ಸಮಾಜದ ನಿರ್ಮಾತೃಗಳು: ಸಿದ್ದರಾಮಯ್ಯ ಬಣ್ಣನೆ

Date:

Advertisements
  • ‘ಇಂಜಿನಿಯರ್‌ಗಳಿಗೆ ವಿಶ್ವೇಶ್ವರಯ್ಯ ಅವರಿಗಿದ್ದ ದೂರದರ್ಶಿತ್ವ ಇರಬೇಕು’
  • ‘ಮೈಸೂರಿನ‌ ಅಭಿವೃದ್ಧಿಯಲ್ಲಿ ಹೆಜ್ಜೆ ಗುರುತು ಉಳಿಸಿದ ಹೋದ ವಿಶ್ವೇಶ್ವರಯ್ಯ’

ಇಂಜಿನಿಯರ್‌ಗಳು ದೇಶದ, ಸಮಾಜದ ನಿರ್ಮಾತೃಗಳು. ಸಮಾಜವನ್ನು- ದೇಶವನ್ನು ಪ್ರಗತಿಯ ದಿಕ್ಕಿನಲ್ಲಿ ರೂಪಿಸುವವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.

ಕರ್ನಾಟಕ ರಾಜ್ಯ ಇನ್ಸ್‌ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಆಯೋಜಿಸಿದ್ದ 56ನೇ ಇಂಜಿನಿಯರಿಂಗ್ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಇಂದು ಇಂಜಿನಿಯರ್ಸ್ ದಿನ ಕೂಡ ಹೌದು. ವಿಶ್ವ ಪ್ರಜಾಪ್ರಭುತ್ವ ದಿನವೂ ಹೌದು. ಈ ಎರಡರ ಉದ್ದೇಶವೂ ಕೂಡ ಉತ್ತಮ ಸಮಾಜದ ನಿರ್ಮಾಣವೇ ಆಗಿದೆ. ಸರ್. ಎಂ. ವಿಶ್ವೇಶ್ವರಯ್ಯ ಬಹಳ ದೊಡ್ಡ ಇಂಜಿನಿಯರ್. ಇವರು ಮೈಸೂರು ರಾಜರ ಬಳಿ ದಿವಾನರಾಗಿದ್ದ ಕಾರಣದಿಂದಲೇ ಮೈಸೂರಿನ‌ ಅಭಿವೃದ್ಧಿಯಲ್ಲಿ ತಮ್ಮ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ” ಎಂದು ಸ್ಮರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

“ವಿಶ್ವೇಶ್ವರಯ್ಯ ಅವರು ಮುಂದಿನ ಸಮಾಜ ಹೇಗಿರಬೇಕು ಎನ್ನುವ ಗ್ರಹಿಕೆ ಮತ್ತು ದೂರದರ್ಶಿತ್ವವನ್ನು ಹೊಂದಿದ್ದರು. ಈ ಕಾರಣಕ್ಕೇ ಭಾರತ ರತ್ನಕ್ಕೆ ಅರ್ಹರಾದರು” ಎಂದು ಮೆಚ್ವುಗೆ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ಸಚಿವ ಎಂ ಸಿ‌ ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕರ್ನಾಟಕ ರಾಜ್ಯ ಇನ್ಸ್ ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಂಸ್ಥೆಯ ಅಧ್ಯಕ್ಷ ಲಕ್ಷ್ಮಣ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

Download Eedina App Android / iOS

X