ಹೈದರಾಬಾದ್‌ನಲ್ಲಿ ಇಂದು ಕಾಂಗ್ರೆಸ್ ಉನ್ನತ ಸಮಿತಿ ಸಭೆ: 5 ರಾಜ್ಯಗಳ ಚುನಾವಣೆಯ ಬಗ್ಗೆ ಚರ್ಚೆ

Date:

Advertisements

ಇಂದು(ಸೆಪ್ಟೆಂಬರ್‌ 16) ಹೈದರಾಬಾದ್‌ನಲ್ಲಿ ನಡೆಯಲಿರುವ ಪುನರ್ರಚಿಸಲಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಮೊದಲ ಸಭೆಯು ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಮೇಲೆ ಕೇಂದ್ರೀಕರಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸಭೆಗೆ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದಾರೆ ಎಂದು ಖರ್ಗೆ ಖಚಿತಪಡಿಸಿದರು.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ನಾನು ಪಕ್ಷದ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಮೊದಲ ಸಿಡಬ್ಲ್ಯೂಸಿ ಸಭೆಯಾಗಿದ್ದು, ನಾಳೆ ವಿಸ್ತೃತ ಕಾರ್ಯಕಾರಿ ಸಮಿತಿಯ ಸಭೆಯೂ ನಡೆಯಲಿದ್ದು, ಅಲ್ಲಿ ಪಕ್ಷಕ್ಕೆ ಸಂಬಂಧಿಸಿದ ಚರ್ಚೆಗಳನ್ನು ಮಾಡಲಾಗುತ್ತದೆ” ಎಂದು ಹೇಳಿದರು.

Advertisements

“ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಎಲ್ಲ ಹಿರಿಯ ನಾಯಕರು ಸಭೆಯಲ್ಲಿ ಉಪಸ್ಥಿತರಿರುತ್ತಾರೆ ಮತ್ತು ಐದು ರಾಜ್ಯಗಳ ಮುಂಬರುವ ಚುನಾವಣೆಗಳ ಬಗ್ಗೆ ಚರ್ಚೆ ನಡೆಸಲಿದ್ದು, ಅದಕ್ಕೆ ಅನುಗುಣವಾಗಿ ಯೋಜನೆ ಹಮ್ಮಿಕೊಳ್ಳಲಾಗುತ್ತದೆ. ನಮ್ಮ ಮೈತ್ರಿಕೂಟದ ‘ಇಂಡಿಯಾ’ದ ಪಾಲುದಾರರೊಂದಿಗೆ ಮುಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು” ಎಂದು ಖರ್ಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಏಕದಿನ ಕ್ರಿಕೆಟ್: ಭಾರತದ ದಾಖಲೆ ಸರಿಗಟ್ಟಿ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ದಕ್ಷಿಣ ಆಫ್ರಿಕಾ

ಸಿಡಬ್ಲ್ಯುಸಿ ಸಭೆಯ ವಿವರವಾದ ಯೋಜನೆಯನ್ನು ಶುಕ್ರವಾರ ಪ್ರಕಟಿಸಿದ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್, ಹಲವು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯು ದೆಹಲಿಯ ಹೊರಗೆ ಮೂರು ದಿನಗಳ ಕಾಲ ಚರ್ಚೆ ನಡೆಸಲಿದೆ ಎಂದು ಹೇಳಿದರು.

ಭಾನುವಾರ(ಸೆ.17) ವಿಸ್ತೃತ ಸಿಡಬ್ಲ್ಯೂಸಿಯ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಎಲ್ಲ ರಾಜ್ಯಗಳ ಪಕ್ಷದ ಮುಖ್ಯಸ್ಥರು ಮತ್ತು ಸಿಎಲ್‌ಪಿ ನಾಯಕರು, ಸಂಸದೀಯ ಪಕ್ಷದ ಪದಾಧಿಕಾರಿಗಳು, ಕೇಂದ್ರ ಚುನಾವಣಾ ಸಮಿತಿ ಸದಸ್ಯರನ್ನು ಆಹ್ವಾನಿಸಲಾಗಿದೆ.

ಅದೇ ದಿನ, ‘ತೆಲಂಗಾಣ ರಾಷ್ಟ್ರೀಯ ಏಕೀಕರಣ ದಿನ’ ಎಂದು ಆಚರಿಸಲಾಗುತ್ತದೆ, ಕಾಂಗ್ರೆಸ್ ಹೈದರಾಬಾದ್ ಬಳಿ “ಮೆಗಾ ರ‍್ಯಾಲಿ” ನಡೆಸಲಿದೆ. ಅಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆಗೆ ಆರು ಭರವಸೆಗಳನ್ನು ಘೋಷಿಸಲಾಗುತ್ತದೆ.

ಸಿಡಬ್ಲ್ಯುಸಿ 39 ಸಾಮಾನ್ಯ ಸದಸ್ಯರು, 32 ಖಾಯಂ ಆಹ್ವಾನಿತರು ಮತ್ತು 13 ವಿಶೇಷ ಆಹ್ವಾನಿತರನ್ನು ಹೊಂದಿದೆ. ಇವರಲ್ಲಿ 15 ಮಹಿಳೆಯರು ಮತ್ತು ಹಲವಾರು ಹೊಸ ಮುಖಗಳಾದ ಶಶಿ ತರೂರ್, ಸಚಿನ್ ಪೈಲಟ್ ಮತ್ತು ಗೌರವ್ ಗೊಗೋಯ್ ಸಾಮಾನ್ಯ ಸದಸ್ಯರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X