ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ತಲೆಮರೆಸಿಕೊಂಡಿರುವ ಅಭಿನವ ಹಾಲಶ್ರೀ ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದೇನೆ ಎಂದು ನನ್ನ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆಗಸ್ಟ್ 11ರಂದು ಬೆಂಗಳೂರಿನ ರಾಜರಾಜೇಶ್ವರಿನಗರದ ಪೊಲೀಸ್ ಠಾಣೆಗೆ ಉದ್ಯಮಿ ಗೋವಿಂದಬಾಬು ಮತ್ತು ಆತನ ಆಪ್ತರ ವಿರುದ್ಧ ಅಭಿನವ ಹಾಲಶ್ರೀ ದೂರು ನೀಡಿದ್ದರು ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹12 ಲಕ್ಷ ಮೌಲ್ಯದ ಅಮೆರಿಕನ್ ಡೈಮಂಡ್ ಗಣಪತಿ ಪ್ರತಿಷ್ಠಾಪನೆಗೆ ಸಿದ್ಧ
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀ ಅವರ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕನನ್ನ ವಿಚಾರಣೆ ನಡೆಸಿದರೆ ಹಾಲಶ್ರೀ ಶ್ರೀಗಳ ಸುಳಿವು ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ