ಕಾವೇರಿ ವಿಚಾರದಲ್ಲಿ ಮಾತು ಬದಲಾಯಿಸುತ್ತಿರುವ ಊಸರವಳ್ಳಿ ಸರ್ಕಾರ: ಬೊಮ್ಮಾಯಿ ವಾಗ್ದಾಳಿ

Date:

Advertisements
  • ‘ಧಮ್ಮು, ತಾಕತ್ತು ಇದ್ದರೆ, ನೀರು ಬಿಡದೇ ಕೋರ್ಟ್‌ನಲ್ಲಿ ವಾದ ಮಾಡಲಿ’
  • ‘ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಮ್ಮ ಪಕ್ಷ ತೀವ್ರ ಪ್ರತಿಭಟನೆ ನಡೆಸಲಿದೆ’

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೊಟ್ಟ ಮಾತು ಬದಲಾಯಿಸುತ್ತಿದ್ದು, ಇದೊಂದು ಊಸರವಳ್ಳಿ ಸರ್ಕಾರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ಮೇಲೆ ತಮಿಳುನಾಡಿನ ಪ್ರಭಾವ ವಿಪರೀತ ಇದ್ದ ಹಾಗಿದೆ. ಸುಪ್ರೀಂ ಕೊರ್ಟ್ ಆದೇಶ ಆಗಿಲ್ಲ. ಸಿಡಬ್ಲುಎಂಎ ಸಭೆ ಆಗಿಲ್ಲ. ಆದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಮಾಡಿ ರಾಜ್ಯದ ಜನತೆಗೆ ಧೋಖಾ ಮಾಡಿದೆ” ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಮ್ಮ ಪಕ್ಷದ ವತಿಯಿಂದ ತೀವ್ರವಾದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ಆರಂಭದಲ್ಲಿ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಅವರು ಹೇಳಿದ ಮಾರನೇ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ನೀರು ಬಿಡುತ್ತಾರೆ. ಸರ್ಕಾರ ನೀರು ಬಿಡಲು ತೀರ್ಮಾನ ಮಾಡುವುದಾದರೆ ಸರ್ವ ಪಕ್ಷದ ಸಭೆ ಕರೆಯುವ ಅಗತ್ಯ ಏನಿತ್ತು” ಎಂದು ಪ್ರಶ್ನಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ

ಧಮ್ ಇದ್ರೆ ನೀರು ಬಿಡದೇ ವಾದ ಮಾಡಲಿ

ಬಿಜೆಪಿಯವರಿಗೆ ಪ್ರಧಾನಿ ಭೇಟಿ ಮಾಡಿ ಮಾತನಾಡುವ ಧಮ್ ಇಲ್ಲ ಎಂಬ ಡಿಸಿಎಂ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಈ ಸರ್ಕಾರಕ್ಕೆ ನಿಜವಾದ ತಾಕತ್ತು ದಮ್ಮು ಇದ್ದರೆ ನೀರು ಬಿಡುತ್ತಿರಲಿಲ್ಲ. ನೀರು ಬಿಟ್ಟು ತಾಕತ್ತು ದಮ್ಮಿನ ಬಗ್ಗೆ ಮಾತನಾಡುತ್ತಾರೆ‌. ನಿಮಗೆ ತಾಕತ್ತು ದಮ್ ಇದ್ದರೆ ತಮಿಳುನಾಡಿಗೆ ನೀರು ಬಿಡದೇ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಿ ರಾಜ್ಯದ ಹಿತ ಕಾಪಾಡಿ” ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದ ಮಧ್ಯಸ್ಥಿಕೆ ವಹಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಯಾವುದೇ ರಾಜ್ಯದ ಎಂಪಿಗಳು ಪ್ರಧಾನಿಯನ್ನು ಭೇಟಿ ಮಾಡಿದರೂ ಏನೂ ಪ್ರಯೋಜನ ಇಲ್ಲ. ಇವರಿಗೆ ಓಟ್ ಹಾಕಿದ ಕಾವೇರಿ ಕೊಳ್ಳದ ಮಕ್ಕಳು ಪಶ್ಚಾತ್ತಾಪ ಪಡುತ್ತಿದ್ದಾರೆ‌. ಸುಪ್ರೀಂ ಕೋರ್ಟ್ ಮತ್ತು ತಮಿಳುನಾಡಿನ ಸಿಎಂ ಜೊತೆ ಮಾತುಕತೆ ಮಾಡುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು” ಎಂದು ಅಭಿಪ್ರಾಯಪಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಚಪಾತಿ ರೊಟ್ಟಿ ಕಾಯಿಸಿದಂತೆ ಎಫ್‌ಐಆರ್ ಮಾಡ್ತಿದ್ದಾರೆ: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X