ಗೌರಿ-ಗಣೇಶ ಹಬ್ಬ | ಮಾರ್ಗಸೂಚಿ ಬಿಡುಗಡೆ ಮಾಡಿದ ಬೆಂಗಳೂರು ಪೊಲೀಸರು

Date:

Advertisements

ಗೌರಿ-ಗಣೇಶ ಹಬ್ಬದ ಸಂಭ್ರಮ ಎಲ್ಲೆಡೆ ಮನೆಮಾಡಿದೆ. ನಗರದ ಹಲವು ಪ್ರದೇಶಗಳಲ್ಲಿ ಗಣೇಶನನ್ನು ಕೂಡಿಸಿ ಪೂಜೆ ಸಲ್ಲಿಸಲಾಗುತ್ತದೆ. ಈ ವೇಳೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬೆಂಗಳೂರು ಪೊಲೀಸರು ಮುಂದಾಗಿದ್ದು, ಜನರು ಪಾಲಿಸಬೇಕಾದ ಕೆಲವು ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಗರದ ಪೊಲೀಸ್‌ ಆಯುಕ್ತ ದಯಾನಂದ್, “ಎಲ್ಲ ಗೌರಿ-ಗಣೇಶ ಸಮಿತಿಗಳಿಗೆ, ಗಣೇಶ ಮೂರ್ತಿಗಳ ಸಾರ್ವಜನಿಕ ಪ್ರತಿಷ್ಠಾಪನೆಗೆ ಸೂಕ್ತ ಪರವಾನಗಿಗಳನ್ನು ಪಡೆಯಬೇಕು. ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಸಾರ್ವಜನಿಕವಾಗಿ ಬಲವಂತದ ಮತ್ತು ಅಕ್ರಮ ಮಾರ್ಗವಾಗಿ ಹಣ ಸಂಗ್ರಹಿಸಬಾರದು” ಎಂದು ಸೂಚನೆ ನೀಡಿದರು.

  • ಸ್ಥಳೀಯ ಪೊಲೀಸ್ ಠಾಣೆಯ ಅನುಮತಿಯೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು ಇದು ಕಡ್ಡಾಯ.
  • ಕಾರ್ಯಕ್ರಮ ನಡೆಸಲು ಚಪ್ಪರ, ಶಾಮಿಯಾನ, ಪೆಂಡಾಲ್‌ ಹಾಕಲು ವಿಶೇಷ ಅನುಮತಿ ಪಡೆಯಬೇಕು.
  • ವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಅವಕಾಶವಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಜಕಾಲುವೆ ಒತ್ತುವರಿ ಗುರುತಿಸಲು ಪಾಲಿಕೆ ಜತೆ ಕೈಜೋಡಿಸಿ

Advertisements
  • ಮೆರವಣಿಗೆ ವೇಳೆ ಅಹಿಕತರ ಘಟನೆ ನಡೆದರೆ ಅದಕ್ಕೆ ಸಂಘಟಕರೇ ಹೊಣೆಯಾಗುತ್ತಾರೆ.
  • ಕಾರ್ಯಕ್ರಮ ನಡೆಯುವ ಜಾಗದಲ್ಲಿ ಆಯೋಜಕರು ಬೆಂಕಿ ನಂದಿಸುವ ಸಾಮಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ವಸ್ತುಗಳನ್ನು ಇಟ್ಟುಕೊಂಡಿರಬೇಕು.
  • ಕಟ್ಟಿಗೆ, ಉರುವಲು, ಸೀಮೆಎಣ್ಣೆ ಸೇರಿದಂತೆ ಬೆಂಕಿ ಅವಘಡಕ್ಕೆ ಸಂಬಂಧಿಸಿದ ಯಾವುದೇ ಸಾಮಗ್ರಿಗಳನ್ನು ಮೂರ್ತಿ ಸ್ಥಾಪನೆ ಮಾಡಿರುವ ಜಾಗದಲ್ಲಿ ಇಡಬಾರದು.
  • ವಿದ್ಯುತ್ ಸಂಪರ್ಕಕ್ಕೆ ಬೆಸ್ಕಾಂ ಮತ್ತು ಅಗ್ನಿ ಶಾಮಕ ಇಲಾಖೆಯಿಂದ ಎನ್‌ಓಸಿ ಕಡ್ಡಾಯ.
  • ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶ.
  • ಡಿಜೆ ಸೌಂಡ್‌ ಬಳಕೆಗೆ ಅವಕಾಶವಿಲ್ಲ.
  • ಮೆರವಣಿಗೆ ಸಮಯದಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನೆ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧ.
  • ಗಣಪನ ವಿಸರ್ಜನೆ ಕಾರ್ಯಕ್ರಮ ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X