ವಿಶ್ವಕರ್ಮ ಜಯಂತಿ’ಯಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ‘ಪಿಎಂ ವಿಶ್ವಕರ್ಮ’ ಯೋಜನೆಗೆ ಚಾಲನೆ ನೀಡಿದರು.
ನವದೆಹಲಿಯ ಇಂಡಿಯಾ ಇಂಟರ್‌ನ್ಯಾಷನಲ್ ಕನ್ವೆನ್ಶನ್ ಮತ್ತು ಎಕ್ಸ್‌ಪೋ ಸೆಂಟರ್ (ಐಐಸಿಸಿ) ನಲ್ಲಿ ಅವರು ಯೋಜನೆಗೆ ಚಾಲನೆ ನೀಡಿದರು.
‘ಪಿಎಂ ವಿಶ್ವಕರ್ಮ’ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಯಾವುದೇ ಅಡಮಾನ, ಆಧಾರದ ಅಗತ್ಯವಿಲ್ಲದೆ ಕನಿಷ್ಠ ಬಡ್ಡಿದರದಲ್ಲಿ ಸಾಲದ ನೆರವು ನೀಡಲಾಗುತ್ತದೆ.
ಐದು ವರ್ಷಗಳ ಅವಧಿಗೆ 13,000 ಕೋಟಿ ರೂಪಾಯಿಗಳ ಆರ್ಥಿಕ ವೆಚ್ಚದೊಂದಿಗೆ, ಈ ಯೋಜನೆಯು ನೇಕಾರರು, ಅಕ್ಕಸಾಲಿಗರು, ಕಮ್ಮಾರರು, ಲಾಂಡ್ರಿ ಕಾರ್ಮಿಕರು ಮತ್ತು ಕ್ಷೌರಿಕರು ಸೇರಿದಂತೆ ಸಾಂಪ್ರದಾಯಿಕ ಕುಶಲಕರ್ಮಿಗಳ ಸುಮಾರು 30 ಲಕ್ಷ ಕುಟುಂಬಗಳಿಗೆ ಅನುಕೂಲ ಒದಗಿಸಲಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಸಾಂಪ್ರದಾಯಿಕ ಕುಶಲಕರ್ಮಿಗಳು ರೂಪಿಸುವ ಉತ್ಪನ್ನಗಳು ಮತ್ತು ಅವರ ಸೇವೆಗಳ ಲಭ್ಯತೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವುದು ಯೋಜನೆಯ ಗುರಿಯಾಗಿದೆ.