ಇಂದಿನಿಂದ ಸಂಸತ್ತಿನ ವಿಶೇಷ ಅಧಿವೇಶನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Date:

Advertisements
  • ಸೆ.17ರಂದು ನಡೆದ ಸರ್ವಪಕ್ಷ ಸಭೆಯ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ
  • ಸೆಪ್ಟೆಂಬರ್ 19ರಂದು ಹೊಸ ಸಂಸತ್ ಭವನದಲ್ಲಿ ಸಂಸತ್ತಿನ ಅಧಿವೇಶನ

ಇಂದಿನಿಂದ(ಸೆ.18) ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಇದಕ್ಕಾಗಿ ಒಟ್ಟು 8 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

ಇಂದು ಸಂಸತ್ತಿನಲ್ಲಿ ನಡೆದ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, “ಕಾಶ್ಮೀರದಲ್ಲಿ ಹುತಾತ್ಮರಾದ ಸೇನೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಾಳೆಯಿಂದ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದೆ. ಇದಕ್ಕಾಗಿ ಒಟ್ಟು 8 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ. ಮೊದಲ ದಿನ ಹಳೆ ಸಂಸತ್ ಭವನದಲ್ಲಿ ಅಧಿವೇಶನ ನಡೆಯಲಿದೆ. ಮರುದಿನ ಅಂದರೆ ಸೆ.19ರಂದು ಹಳೆ ಸಂಸತ್ ಭವನದಲ್ಲಿ ಫೋಟೋ ಸೆಷನ್, ನಂತರ ಬೆಳಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್‌ನಲ್ಲಿ ಕಾರ್ಯಕ್ರಮ ನಡೆಯಲಿದೆ. ಅದರ ನಂತರ ನಾವು ಹೊಸ ಸಂಸತ್ತಿಗೆ ಪ್ರವೇಶಿಸುತ್ತೇವೆ” ಎಂದು ಮಾಹಿತಿ ನೀಡಿದರು.

ಸೆ.18ರಂದು ಹಳೆಯ ಸಂಸತ್ತಿನಲ್ಲಿ ಅಧಿವೇಶನ ನಡೆದರೆ, ಸೆ.19 ರಂದು ಹೊಸ ಸಂಸತ್ ಭವನದಲ್ಲಿ ನಡೆಯಲಿದೆ. 20ರಿಂದ ಸಾಮಾನ್ಯ ಸರ್ಕಾರಿ ಕೆಲಸಗಳು ಹೊಸ ಸಂಸತ್ ಭವನದಲ್ಲಿ ಪ್ರಾರಂಭವಾಗುತ್ತವೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು.

Advertisements

ಸೋಮವಾರದಿಂದ ಐದು ದಿನಗಳ ಕಾಲ ಕೇಂದ್ರ ಸರ್ಕಾರ ಕರೆದಿರುವ ಸಂಸತ್ ವಿಶೇಷ ಅಧಿವೇಶನ ತೀವ್ರ ಕುತೂಹಲ ಕೆರಳಿಸಿರುವಂತೆಯೇ, ಎಲ್ಲ ಪಕ್ಷಗಳಿಂದ ಅಭಿಪ್ರಾಯ, ಸಲಹೆಗಳನ್ನು ಪಡೆಯಲು ಭಾನುವಾರ ಸಂಜೆ ಸರ್ವ ಪಕ್ಷ ನಾಯಕರೊಂದಿಗೆ ಸಭೆಯನ್ನು ಆಯೋಜಿಸಲಾಗಿತ್ತು.

‘ಸಂವಿಧಾನ ಸಭೆ’ಯಿಂದ ಆರಂಭಿಸಿ ಸಂಸತ್ತಿನ 75 ವರ್ಷಗಳ ಪಯಣ ಕುರಿತ ವಿಶೇಷ ಚರ್ಚೆಯೇ ಸರ್ಕಾರ ಪಟ್ಟಿ ಮಾಡಲಾದ ಪ್ರಮುಖ ಅಜೆಂಡಾವಾದರೂ ಸಾಮಾನ್ಯವಾಗಿ ಅಧಿವೇಶನ ಇಲ್ಲದೆ ಬೇರೆ ಸಂದರ್ಭದಲ್ಲಿ ನಡೆಯುತ್ತಿರುವ ವಿಶೇಷ ಅಧಿವೇಶನ ಅಚ್ಚರಿಗೆ ಕಾರಣವಾಗಿದೆ.

ವಿಶೇಷ ಅಧಿವೇಶನದ ಮುನ್ನಾದಿನವಾದ ಭಾನುವಾರದಂದು ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್ ಧ್ವಜಾರೋಹಣ ಮಾಡಿದ್ದಾರೆ. ಅಲ್ಲದೇ, ವಿಶೇಷ ಅಧಿವೇಶನಕ್ಕಾಗಿ ಸಂಸತ್ತಿನ ಉಭಯ ಸದನಗಳ ಸಿಬ್ಬಂದಿಗೆ ಹೊಸ ಸಮವಸ್ತ್ರವನ್ನು ಈಗಾಗಲೇ ವಿತರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್...

Download Eedina App Android / iOS

X