ಬಿಜೆಪಿಯಲ್ಲಿ ಟಿಕೆಟ್ ಹೇಗೆ ಕೊಡುತ್ತಾರೆ ಎಂಬುದು ಶೆಟ್ಟರಗೆ ಗೊತ್ತಿಲ್ಲವೇ?: ಶಾಸಕ ಟೆಂಗಿನಕಾಯಿ ಕಿಡಿ

Date:

Advertisements
  • ‘ಬಿಜೆಪಿಯಲ್ಲಿ ಟಿಕೆಟ್ ಮಾರಾಟದ ಪದ್ಧತಿಯಿಲ್ಲ’
  • ‘ಚೈತ್ರಾ ಕೇಸ್​ಗೂ ಬಿಜೆಪಿಗೂ ಸಂಬಂಧ ಇಲ್ಲ’

ಬಿಜೆಪಿಯಲ್ಲಿ ಟಿಕೆಟ್ ಮಾರಾಟದ ಪದ್ಧತಿಯಿಲ್ಲ. ನಮ್ಮ ಪಕ್ಷದಲ್ಲಿದ್ದ ಜಗದೀಶ ಶೆಟ್ಟರ ಅವರು ಹೇಗೆ ಟಿಕೆಟ್​ ತೆಗೆದುಕೊಂಡಿದ್ದರು, ಹೇಗೆ ಟಿಕೆಟ್ ಕೊಟ್ಟಿದ್ದರು ಎಂಬುದು ಗೊತ್ತಿಲ್ಲವೇ? ಎಂದು ಶೆಟ್ಟರ ವಿರುದ್ಧ ಬಿಜೆಪಿ ಶಾಸಕ ಮಹೇಶ​ ಟೆಂಗಿನಕಾಯಿ ಹರಿಹಾಯ್ದರು.

‘ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು’ ಎಂದು ಹೇಳಿದ್ದ ಶೆಟ್ಟರ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದರು.

‘ಕಾಂಗ್ರೆಸ್​ನಲ್ಲಿ ಜಗದೀಶ​ ಶೆಟ್ಟರ ಅವರನ್ನು ಗುರುತಿಸುತ್ತಿಲ್ಲ. ಅದಕ್ಕೆ ಅವರಿಗೆ ಕಷ್ಟ ಆಗಿದೆ. ಹೀಗಾಗಿ ಅವರು ಮಾಧ್ಯಮಗಳಿಗೆ ಇಂತಹ ಹೇಳಿಕೆ ನೀಡುತ್ತಿದ್ದಾರೆ’ ಎಂದು ಕುಟುಕಿದರು.

Advertisements

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ನಿದ್ದೆಯಿಂದ ಎದ್ದಿರುವ ನ್ಯೂಸ್ ಚಾನೆಲ್ ಒಕ್ಕೂಟ ಮರ್ಯಾದೆ ಉಳಿಸಿಕೊಳ್ಳಲಿ

ಬಿಜೆಪಿಯಲ್ಲಿ ಲಿಂಗಾಯತ ಸಮುದಾಯದ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ​ಶೆಟ್ಟರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಬಿಜೆಪಿ ಅತಿ ಹೆಚ್ಚು ಬಾರಿ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದೆ. ಶೆಟ್ಟರ​ ಅವರಿಗೆ 30 ವರ್ಷ ಬಿಜೆಪಿ ಎಲ್ಲ ಕೊಟ್ಟಿದೆ. ನಿಮಗೆ ಅನ್ಯಾಯವಾಗಿದ್ದರೆ, ತಾಕತ್ ಇದ್ದರೆ ನೀವು ಸರಿಮಾಡಿಕೊಳ್ಳಿ. ರಾಜಕೀಯಕ್ಕೆ ಸಮುದಾಯವನ್ನು ಎಳೆದು ತರಬೇಡಿ’ ಎಂದು ಎಚ್ಚರಿಸಿದರು.

ಚೈತ್ರಾ ಕುಂದಾಪುರ ವಿಚಾರಕ್ಕೆ ಹೇಳಿಕೆ ನೀಡಿದ ಟೆಂಗಿನಕಾಯಿ, ‘ಬಿಜೆಪಿಯಲ್ಲಿ ಟಿಕೆಟ್​ ಮಾರಾಟ ಪದ್ಧತಿ ಇಲ್ಲ. ಚೈತ್ರಾ ಕುಂದಾಪುರ ಕೇಸ್​ಗೂ ಬಿಜೆಪಿಗೂ ಯಾವ ಸಂಬಂಧ ಇಲ್ಲ. ಕೆಲವರು ತಮ್ಮ ಚಟಕ್ಕೆ ಈ ರೀತಿ ಮಾಡಿದರೆ ಅದಕ್ಕೆ ಬಿಜೆಪಿ ಉತ್ತರ ನೀಡುವುದಿಲ್ಲ. ಈ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ’ ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X