ಬೆಳಗಾವಿ | ರಾಯಬಾಗವನ್ನು ಬರಪೀಡಿತ ತಾಲೂಕೆಂದು ಘೋಷಿಸಲು ಆಗ್ರಹ

Date:

Advertisements

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಯಬಾಗ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ರಾಯಭಾಗ ತಾಲೂಕನ್ನು ಬರಗಾಲ ಪೀಡಿತ ಎಂದು ಘೋಷಣೆ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ಕೃಷ್ಣ ಎಡದಂಡೆ ಕಾಲುವೆಗೆ ನೀರು ಹರಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಗಣೇಶ ಇಳಿಗೇರ, “ರಾಯಬಾಗ ತಾಲೂಕಿನ ರೈತರಿಗೆ ಆಗುತ್ತಿರುವ ಅನ್ಯಾಯ ಕೇಳುವರಾರು? ರೈತರ ಕಣ್ಣೀರು ಅಧಿಕಾರಿಗಳಿಗೆ ಕೇಳುತ್ತಿಲ್ಲ. ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಬೆಳಗಾವಿ : ಲಕ್ಷ್ಮಣ ಸವದಿಯಿಂದ ನನ್ನ ಮೇಲೆ ಕೆಸ್ ನಾನು ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸುವೆ : ಮಹೇಶ ಕುಮಠಳ್ಳಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ನಿರ್ದೇಶಕ ಹುದ್ದೆಗೆ ಸಂಬಂಧಿಸಿದ ಪ್ರಕರಣ ರದ್ದಾದರೆ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

Download Eedina App Android / iOS

X