ಮಹಿಳಾ ಮೀಸಲಾತಿ | ದೇವೇಗೌಡರ ಕನಸಿಗೆ ಮರುಜೀವ: ಎಚ್‌ ಡಿ ಕುಮಾರಸ್ವಾಮಿ

Date:

Advertisements
  • ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಸಭೆ ಒಪ್ಪಿಗೆ
  • ಪ್ರಧಾನಿ, ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ

ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿರುವುದನ್ನು ನಾನು ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಅವರು ಟ್ವೀಟ್‌ ಮಾಡಿ, “ಮಹಿಳೆಯರಿಗೆ ಸಮಾನ ಹಕ್ಕು, ಅವಕಾಶಗಳನ್ನು ಕಲ್ಪಿಸುವುದು ಇಂದಿನ ತುರ್ತು. ಪ್ರಧಾನಿ ನರೇಂದ್ರ ಮೋದಿ ಅವರು, ಮತ್ತವರ ಸಂಪುಟ ಕೈಗೊಂಡ ನಿರ್ಧಾರ ಶ್ಲಾಘನೀಯ. ರಾಜಕೀಯಕ್ಕೆ ಅತೀತವಾಗಿ ಈ ಮಸೂದೆಯನ್ನು ಎಲ್ಲ ಪಕ್ಷಗಳು ಬೆಂಬಲಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಹೆಚ್‌ ಡಿ ದೇವೇಗೌಡ ಅವರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿಯೇ 1996 ಸೆಪ್ಟೆಂಬರ್ 12ರಂದು ರಾಜ್ಯಸಭೆಯಲ್ಲಿ ಈ ಐತಿಹಾಸಿಕ ಬಿಲ್ ಅನ್ನು ಮಂಡಿಸಲಾಗಿತ್ತು. ಆದರೆ, ಅವರ ಸಂಯುಕ್ತರಂಗ ಸರ್ಕಾರದ ಮೈತ್ರಿಕೂಟದ ಕೆಲ ಮಿತ್ರಪಕ್ಷಗಳೇ ತೀವ್ರ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಆ ಮಸೂದೆ ಅಂಗೀಕಾರ ಆಗಲಿಲ್ಲ. ಇವತ್ತು ಕಾಂಗ್ರೆಸ್ಸಿನ I.N.D.I.A. ಮೈತ್ರಿಕೂಟವನ್ನು ಸೇರಿಕೊಂಡಿರುವ ನಾಯಕರೇ ಅಂದು ಈ ಮಸೂದೆಗೆ ತಡೆ ಒಡ್ಡಿದ್ದರು” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಹಿಳಾ ಮೀಸಲಾತಿ ಮಸೂದೆ: ಕೇಂದ್ರ ಸಚಿವ ಸಂಪುಟ ಅನುಮೋದನೆ

“27 ವರ್ಷಗಳ ನಂತರ ದೇವೇಗೌಡರ ಕನಸಿಗೆ ಮರುಜೀವ ಬಂದಿರುವುದು ನನಗೆ ಸಂತೋಷ ಉಂಟು ಮಾಡಿದೆ. 1995ರಲ್ಲಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿ, ಅಧಿಕಾರ ನಡೆಸುವ ಹಕ್ಕು ಕಲ್ಪಿಸಿ ಮಹಿಳಾ ಸಬಲೀಕರಣದ ಸುವರ್ಣ ಅಧ್ಯಾಯಕ್ಕೆ ನಾಂದಿ ಹಾಡಿದ್ದರು. ಅಂದು ನಮ್ಮ ರಾಜ್ಯದಲ್ಲಿ ಘಟಿಸಿದ ಈ ಕ್ರಾಂತಿಕಾರಿ ವಿದ್ಯಮಾನವನ್ನು ಇಡೀ ದೇಶವೇ ಬೆರಗು ಕಂಗಳಿಂದ ನೋಡಿತ್ತು” ಎಂದು ಸ್ಮರಿಸಿದ್ದಾರೆ.

“ಇಂದು ಮಹಿಳಾ ಮೀಸಲು ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಆಗುವುದು ಖಚಿತವಾಗಿದ್ದು, ಈ ಮೂಲಕ ಮಾಜಿ ಪ್ರಧಾನಿಗಳ ಕನಸು ನನಸಾಗುತ್ತಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X