ವಂಚನೆ ಪ್ರಕರಣ | ಒಡಿಶಾದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ ಅಭಿನವ ಹಾಲಶ್ರೀ

Date:

Advertisements

ಉದ್ಯಮಿ ಪೂಜಾರಿ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ₹5 ಕೋಟಿ ವಂಚನೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಬಂಧನವಾಗಿದೆ.

ಸೆ.12 ರಂದು ಪ್ರಕರಣದ ಇನ್ನೋರ್ವ ಪ್ರಮುಖ ಆರೋಪಿಯಾದ ಚೈತ್ರಾ ಕುಂದಾಪುರ ಮತ್ತವರ ಸಂಗಡಿಗರ ಬಂಧನವಾದ ಬಳಿಕ ಅಭಿನವ ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದರು. ಸ್ವಾಮೀಜಿ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಪಡೆಯಲು ಪ್ರಯತ್ನಿಸಿದರು. ಆದರೆ, ಬೆಂಗಳೂರಿನ ಸಿಸಿಹೆಚ್ 57 ನ್ಯಾಯಾಲಯವು ಅವರ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ​ಮುಂದೂಡಿದೆ.

ಒಡಿಶಾ ಪೊಲೀಸರ ಸಹಕಾರದಿಂದ ಸಿಸಿಬಿ ಪೊಲೀಸರು ಸೆ.19 ರಂದು ಸ್ವಾಮೀಜಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisements

ಒಡಿಶಾದ ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧಗಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸೆ.19ರ ರಾತ್ರಿ ಹಾಲಶ್ರೀ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆತರಲಿದ್ದಾರೆ.

ಆರೋಪಿ ಚೈತ್ರಾ ಕುಂದಾಪುರ ಸೇರಿದಂತೆ ಇನ್ನಿತರ ಆರೋಪಿಗಳನ್ನು ಸೆ.23 ರವರೆಗೆ ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಅದರಂತೆ ಗುರುವಾರದಿಂದ ಸಿಸಿಬಿ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚೈತ್ರಾ ವಂಚನೆ ಪ್ರಕರಣ | ದೂರವಾಣಿ ಸಂಭಾಷಣೆಯಲ್ಲಿ ಸುನೀಲ್ ಕುಮಾರ್ ಹೆಸರು ಪ್ರಸ್ತಾಪ

ಸಿಸಿಬಿ ಪೊಲೀಸರು ವಿಚಾರಣೆ ನಡೆಸಲು ಗುರುವಾರ (ಸೆ.14) ಕಚೇರಿಗೆ ಚೈತ್ರಾ ಕುಂದಾಪುರ ಅವರನ್ನು ಕರೆ ತಂದಿದ್ದರು. ಈ ವೇಳೆ ಗಾಡಿಯಿಂದ ಇಳಿಯುವಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಗಡೆ ಬರುತ್ತದೆ. ಆಗ ದೊಡ್ಡ ದೊಡ್ಡವರ ಹೆಸರು ಆಚೆ ಬರುತ್ತೆ. ಇಂದಿರಾ ಕ್ಯಾಂಟೀನ್ ಬಿಲ್ ಬಾಕಿ ಇರುವುದರಿಂದ ಈ ಷಡ್ಯಂತ್ರ ನಡೆದಿದೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದರು.

ಇದೀಗ ಸ್ವಾಮೀಜಿಯ ಬಂಧನವಾಗಿದೆ. ಇನ್ನೂ ಆರೋಪಿ ಚೈತ್ರಾ ಕುಂದಾಪುರ ಅವರು ಹೇಳಿದಂತೆ ವಿಚಾರಣೆ ವೇಳೆ ಸ್ವಾಮೀಜಿ ದೊಡ್ಡ ದೊಡ್ಡವರ ಹೆಸರು ಬಾಯ್ಬಿಡುತ್ತಾರಾ ಎನ್ನುವ ಕುತೂಹಲ ಮೂಡಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X