ಚಿಕ್ಕಮಗಳೂರು | ನಿಫಾ ಭೀತಿ; ಕೇರಳದಿಂದ ಬರುವ ಪ್ರವಾಸಿಗರಿಗೆ ನಿರ್ಬಂಧ

Date:

Advertisements

ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ‌ ವೈರಸ್ ಹರಡುವುದನ್ನು ತಡೆಯಲು ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿವೆ.

ಮಲೆನಾಡು ಪ್ರದೇಶವು ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವುದರಿಂದ ನಿಫಾ ವೈರಸ್ ಭೀತಿ ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ಕೇರಳದಿಂದ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧಿಸಿದೆ. ಈ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡದಂತೆ ರೆಸಾರ್ಟ್‌, ಹೋಂಸ್ಟೇಗಳು ಮತ್ತು ಹೋಟೆಲ್‌ ಮಾಲೀಕರಿಗೆ ಸೂಚಿಸಲಾಗಿದೆ.

“ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಬೆಟ್ಟ ಶ್ರೇಣಿಗಳು ಆಕರ್ಷಣೀಯ ಪ್ರದೇಶಗಳಗಿರುವುದರಿಂದ ಹಲವು ರಾಜ್ಯಗಳಿಂದ ಪ್ರವಾಸಿಗರು ಭೇಟಿ ನೀಡುತ್ತಾರೆ. ಪ್ಯಾಕೇಜ್ ಏಜೆನ್ಸಿಗಳ ಮೂಲಕ ಹೆಚ್ಚಿನ ಸಂಖ್ಯೆಯ ಜನರು ಜಿಲ್ಲೆಗೆ ಬರುತ್ತಿದ್ದಾರೆ. ಮತ್ತೊಂದೆಡೆ, ಬಾವಲಿಗಳು ವೈರಸ್‌ನ ವಾಹಕಗಳಾಗಿರುವುದರಿಂದ, ಸ್ಥಳೀಯ ನಿವಾಸಿಗಳು ಮರಗಳಲ್ಲಿ ಗೂಡುಕಟ್ಟುವ ಬಾವಲಿಗಳನ್ನು ಸ್ಥಳಾಂತರಿಸುವಂತೆ ಆಡಳಿತವನ್ನು ಒತ್ತಾಯಿಸಿದ್ದಾರೆ. ಈ ಹಿನ್ನಲೆಯಲ್ಲಿ ನಾಗರಿಕರ ಮನಸ್ಸಿನಲ್ಲಿರುವ ಭಯವನ್ನು ಹೋಗಲಾಡಿಸಿ, ವೈರಸ್‌ ಹರಡುವುದನ್ನು ತಡೆಗಟ್ಟುವ ಕ್ರಮ ತೆಗೆದುಕೊಳ್ಳುವಂತೆ ಸ್ಥಳೀಯರಿಗೆ ಜಾಗೃತಿ ಮೂಡಿಸಬೇಕು” ಎಂದು ಸಾಮಾಜಿಕ ಕಾರ್ಯಕರ್ತ ಸುಂದರೇಶ್ ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ನಿಫಾ ವೈರಸ್‌ ಆತಂಕ; ರೋಗ ಲಕ್ಷಣ, ತಡೆಗಟ್ಟುವ ವಿಧಾನದ ಮಾಹಿತಿ

“ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ವರದಿಯಾಗದ ಕಾರಣ ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ವೆಂಟಿಲೇಟರ್ ಮತ್ತು ಆಮ್ಲಜನಕ ಸೌಲಭ್ಯ ಹೊಂದಿರುವ 6 ಹಾಸಿಗೆಗಳನ್ನು ವಿಶೇಷ ವಾರ್ಡ್‌ ಸಿದ್ಧಪಡಿಸಲಾಗಿದೆ” ಎಂದು ಮಲ್ಲೇಗೌಡ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮೋಹನ್ ಕುಮಾರ್ ತಿಳಿಸಿದ್ದಾರೆ.

ಬಾವಲಿಗಳು ಅರ್ಧ ಕಚ್ಚಿದ ಹಣ್ಣುಗಳನ್ನು ತಿನ್ನದಂತೆ ಸಾರ್ವಜನಿಕರಿಗೆ ಸಲಹೆ ನೀಡಿದ ಅವರು, ಪ್ರಾಥಮಿಕ ಚಿಕಿತ್ಸೆ ತೆಗೆದುಕೊಳ್ಳುವಂತೆ ಸ್ಥಳೀಯರಿಗೆ ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಶಾಲೆಗಳಿಗೆ ಮಾತ್ರ ರಜೆ, ಕಾಲೇಜಿಗೆ ರಜೆ ಯಾಕಿಲ್ಲ; ಕಾಲೇಜ್ ವಿದ್ಯಾರ್ಥಿಗಳು

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ, ಕೊಪ್ಪ, ಕಳಸ, ಮೂಡಿಗೆರೆ, ನರಸಿಂಹರಾಜಪುರ, ತರೀಕೆರೆ ಹಾಗೂ...

ಚಿಕ್ಕಮಗಳೂರು l ಧಾರಾಕಾರ ಮಳೆ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ...

ಚಿಕ್ಕಮಗಳೂರು l ದಲಿತ ಯುವಕ ಸಾವಿನ ಪ್ರಕರಣ: ಆರೋಪಿ ಪೊಲೀಸ್ ಪೇದೆ ಬಂಧನ

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕು ಸಂಸೆ ಗ್ರಾಮದ ಯುವಕ ನಾಗೇಶ್ ಸಾವಿನ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ

ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ...

Download Eedina App Android / iOS

X