ಸಿಡಬ್ಲ್ಯೂಎಂಎ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ್

Date:

Advertisements
  • ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಿಡಬ್ಲ್ಯೂಎಂಎ ಆದೇಶ
  • ‘ನಾವು ನಮ್ಮ ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ’

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಕಾವೇರಿ ನೀರು ಬಿಡುವ ಆದೇಶ ಕುರಿತು ಮಂಗಳವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, “ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ 5,000 ಕ್ಯೂಸೆಕ್ ನೀರು ಬಿಡುವುದನ್ನು ಮುಂದುವರಿಸುವಂತೆ ಸಿಡಬ್ಲ್ಯೂಎಂಎ ಆದೇಶಿಸಿದೆ. ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಮ್ಮ ಸರ್ಕಾರ ನಿರ್ಧರಿಸಿದೆ” ಎಂದರು.

“ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇವೆ. ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ. ಈ ವಿಚಾರವಾಗಿ ನಾವು ನಮ್ಮ ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ತಿಳಿಸಿದರು.

Advertisements

ಬೊಮ್ಮಾಯಿ ಹೇಳಿಕೆಗೆ ತಿರುಗೇಟು

“ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಕಾನೂನು ಹೋರಾಟ ಮಾಡಬೇಕು” ಎಂಬ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ, “ನಾವು ಬಸವರಾಜ ಬೊಮ್ಮಾಯಿ ಅವರ ಸಲಹೆ ಪಡೆದುಕೊಳ್ಳುತ್ತೇವೆ. ಹಾಗಾದರೆ, ಹಿಂದೆ ಅವರದೇ ಸರ್ಕಾರ ಇದ್ದಾಗ ಏನು ಮಾಡಿದ್ರು? ಬೊಮ್ಮಾಯಿಯವರೇ ನೀರಾವರಿ ಸಚಿವರಾಗಿದ್ದರು, ಸಿಎಂ ಆಗಿದ್ದರು, ಅವರ ಸರ್ಕಾರ ನೇಮಕ ಮಾಡಿದ ತಜ್ಞರೇ ಇರೋದು. ಹೀಗಿದ್ದೂ ರಾತ್ರೋ ರಾತ್ರಿ ತಮಿಳುನಾಡಿಗೆ ನೀರು ಬಿಡಲಿಲ್ಲವಾ? ಮೊದಲು ದೆಹಲಿಗೆ ನಡೀರಿ, ನಿಮ್ಮ ಅಧಿಕಾರ ಬಳಸಿ ರಾಜ್ಯದ ಹಿತ ಕಾಪಾಡಿ” ಎಂದು ತಿರುಗೇಟು ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

Download Eedina App Android / iOS

X