ಮಂಡ್ಯ | ಅಂಗನವಾಡಿ ಕೇಂದ್ರಕ್ಕೆ ಕಳಪೆ ಆಹಾರ ಪೂರೈಕೆ; ಪೋಷಕರ ಆರೋಪ

Date:

Advertisements
  • ಅಂಗನವಾಡಿ ಕೇಂದ್ರದಲ್ಲಿರುವ ಸುಮಾರು 12 ಮಂದಿ ಮಕ್ಕಳು
  • ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ

ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥ ಪೂರೈಸುತ್ತಿರುವುದು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅಂತೆಯೇ ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ಚಿಕ್ಕಮಸೀದಿ ಬೀದಿಯಲ್ಲಿರುವ ಅಂಗನವಾಡಿಗೆ ಕಳಪೆ ಗುಣಮಟ್ಟದ ಅಕ್ಕಿಯನ್ನು ಪೂರೈಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಚಿಕ್ಕಮಸೀದಿ ಬೀದಿಯಲ್ಲಿರುವ ಅಂಗನವಾಡಿಯಲ್ಲಿ ಸುಮಾರು 12 ಮಂದಿ ಮಕ್ಕಳಿದ್ದಾರೆ. ಆದರೆ, ಕೇಂದ್ರಕ್ಕೆ ಹುಳು ಬಿದ್ದ ಅಕ್ಕಿಯನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪೋಷಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ಇಲಾಖೆಯಿಂದ ಹುಳು ಬಿದ್ದ ಅಕ್ಕಿಯನ್ನು ವಿತರಿಸಿದರೆ, ಇತ್ತ ಅಂಗನವಾಡಿಯ ಸಿಬ್ಬಂದಿ ಕೂಡ ಅದೇ ಅಕ್ಕಿಯನ್ನು ಬಳಸಿ ಆಹಾರ ತಯಾರಿಸುತ್ತಿದ್ದಾರೆ” ಎಂದು ಪೋಷಕರು ಕಿಡಿಕಾರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ವಿತರಣೆ; ತನಿಖೆಗೆ ನ್ಯಾ. ಕೆ ಎನ್‌ ಫಣೀಂದ್ರ ಭರವಸೆ

“ಹುಳು ಬಿದ್ದ ಅಕ್ಕಿಯನ್ನು ಪುಟ್ಟ ಕಂದಮ್ಮಗಳು ಸೇವಿಸಿ ಹೆಚ್ಚು ಕಡಿಮೆ ಆದರೆ ಗತಿ ಏನು? ಸಂಬಂಧಪಟ್ಟ ಅಧಿಕಾರಿಗಳು, ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಬಸವಲಿಂಗ ಪಟ್ಟದ್ದೇವರು ಸುದೈವಿ ಮಕ್ಕಳ ಪೋಷಕರು : ನವೀಲಕುಮಾರ್ ಉತ್ಕಾರ್

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಮ್ಮ ಜೀವನದುದ್ದಕ್ಕೂ ಸಾಮಾಜಿಕ,...

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

Download Eedina App Android / iOS

X