ನಟ ಪ್ರಕಾಶ್ ರಾಜ್‌ಗೆ ಜೀವ ಬೆದರಿಕೆ: ಟಿವಿ ವಿಕ್ರಮ ಯೂಟ್ಯೂಬ್ ಚಾನೆಲ್ ವಿರುದ್ಧ ಎಫ್‌ಐಆರ್

Date:

Advertisements
  • ಬಲಪಂಥೀಯ ವಿಚಾರಧಾರೆಯನ್ನು ಹರಡುತ್ತಿರುವ ಯೂಟ್ಯೂಬ್​ ಚಾನೆಲ್
  • ನಟನ ದೂರಿನ ಹಿನ್ನೆಲೆಯಲ್ಲಿ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಜೀವ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಬಲಪಂಥೀಯ ವಿಚಾರಧಾರೆಯನ್ನು ಹರಡುತ್ತಿರುವ ಟಿವಿ ವಿಕ್ರಮ ಯೂಟ್ಯೂಬ್ ಚಾನೆಲ್ ವಿರುದ್ಧ ದೂರು ದಾಖಲಿಸಿದ್ದಾರೆ.

ಪ್ರಕಾಶ್ ರಾಜ್ (58) ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡಿರುವ ವಿಡಿಯೋಗಳನ್ನು ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ‘ವಿಕ್ರಮ ಟಿವಿ’ ಚಾನೆಲ್ ವಿರುದ್ಧ ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಕಾಶ್ ರಾಜ್ ಅವರು ನೀಡಿದ್ದ ದೂರು ಆಧರಿಸಿ ವಿಕ್ರಮ್ ಟಿವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Advertisements

“ನಟ ಹಾಗೂ ನಿರ್ದೇಶಕನಾಗಿರುವ ನಾನು, ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ವಿವಿಧ ವಿಷಯಗಳ ಚರ್ಚೆ–ಸಂವಾದದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಸೆ. 14ರಂದು ವಿಕ್ರಮ ಟಿವಿ ಯೂಟ್ಯೂಬ್ ಹಾಗೂ ಫೇಸ್‌ಬುಕ್‌ನಲ್ಲಿ ಎರಡು ವಿಡಿಯೊ ವೀಕ್ಷಣೆ ಮಾಡಿದೆ. ಎರಡೂ ವಿಡಿಯೋದಲ್ಲಿ ನನ್ನ ಜೀವಕ್ಕೆ ಅಪಾಯವಾಗುವ ಸಂಗತಿಗಳಿದ್ದವು” ಎಂದು ಪ್ರಕಾಶ್ ರಾಜ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಬೆದರಿಕೆ ಹಾಕುವ ಸ್ಟಾಲಿನ್, ಪ್ರಕಾಶ್ ರಾಜ್‌ನಂಥವರನ್ನು ಮುಗಿಸಬೇಕೆ…? ಹಿಂದೂಗಳು ಮಾಡಬೇಕಾಗಿರುವುದು ಏನು…? ಸನಾತನ ಧರ್ಮ, ಹಿಂದೂಗಳೇ ಮಲಗೇ ಇರ್ತಿರಾ…? ಎಂಬಿತ್ಯಾದಿ ಶಬ್ದಗಳನ್ನು ಬಳಸಿ ವಿಡಿಯೊ ಮಾಡಲಾಗಿದೆ. ಇದೇ ವಿಡಿಯೊವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ವಿಡಿಯೊದಲ್ಲಿರುವ ಅಂಶಗಳು ನನಗೆ ಹಾಗೂ ನನ್ನ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡುವಂತಿವೆ” ಎಂದು ನಟ ಪ್ರಕಾಶ್ ರಾಜ್ ತಿಳಿಸಿದ್ದಾರೆ.

“ಇಂಥ ವಿಡಿಯೊ ಮಾಡಿರುವ ವಿಕ್ರಮ ಟಿವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದು, ಈ ಹಿನ್ನೆಲೆಯಲ್ಲಿ ಅಶೋಕನಗರ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಜೀವ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 506, 504, 505(2) ಸೆಕ್ಷನ್ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯೂಟ್ಯೂಬ್ ಚಾನೆಲ್ ಮುಖ್ಯಸ್ಥ ಮತ್ತು ಸಿಬ್ಬಂದಿ ವಿರುದ್ಧ ತನಿಖೆ ಪ್ರಾರಂಭಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಇದೇ ಚಾನೆಲ್‌ನ ಮುಖ್ಯಸ್ಥ ಮಹೇಶ್ ವಿಕ್ರಮ ಹೆಗಡೆ ವಿರುದ್ಧ ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ಎಫ್‌ಐಆರ್ ದಾಖಲಾಗಿತ್ತು.

‘ಸೌಜನ್ಯಳಿಗಾದ ಗತಿಯೇ ನಿನ್ನ ಮಗಳಿಗೂ ಆಗುತ್ತೆ’ ಎಂದು ವ್ಯಕ್ತಿಯೋರ್ವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಮಹೇಶ್ ವಿಕ್ರಮ್ ಹೆಗಡೆ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X