ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಬಂಧಿತನಾಗಿರುವ ಎ3 ಆರೋಪಿ ಹಾಲಶ್ರೀ ಸ್ವಾಮೀಜಿ ಅವರನ್ನು ನ್ಯಾಯಾಲಯವು ಸೆ.29ರವರೆಗೆ ಸಿಸಿಬಿ ವಶಕ್ಕೆ ನೀಡಿದೆ.
ಪ್ರಕರಣದ ಎ3 ಆರೋಪಿಯಾಗಿರುವ ಹಾಲಶ್ರೀ ಸ್ವಾಮೀಜಿ ಅವರಿಗೆ ಜಾಮೀನು ನೀಡುವಂತೆ ಅವರ ಪರ ವಕೀಲರು ಕೋರಿದರಾದರೂ, ಈ ಮನವಿಯನ್ನು ತಿರಸ್ಕರಿಸಿರುವ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯವು ಹೆಚ್ಚಿನ ತನಿಖೆಗಾಗಿ ಸಿಸಿಬಿ ಪೊಲೀಸರ ವಶಕ್ಕೆ ಒಪ್ಪಿಸಿದೆ.
ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಅಭಿನವ ಹಾಲಶ್ರೀ, ನಿನ್ನೆ(ಮಂಗಳವಾರ) ಒಡಿಶಾದ ಕಟಕ್ ರೈಲ್ವೆ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ಒಡಿಶಾ ಪೊಲೀಸರ ಸಹಕಾರದೊಂದಿಗೆ ಬಂಧಿಸಿ, ಬೆಂಗಳೂರಿಗೆ ಕರೆತಂದಿದ್ದರು.
ಬಂಧನ ಭೀತಿಯಿಂದ ತಪ್ಪಿಸಲು ತಾನು ಧರಿಸಿದ್ದ ಕಾವಿಯನ್ನು ತೆಗೆದು, ಟೀ ಶರ್ಟ್ ಧರಿಸಿ ಕಾಶಿಯತ್ತ ಪ್ರಯಾಣ ಬೆಳೆಸಿದ್ದರು.