ಕುಡಿಯುವ ನೀರಿಗಾಗಿ ಜೈಲಿಗೆ ಹೋಗೋಣ, ನಿಮ್ಮೊಂದಿಗೆ ನಾವಿದ್ದೇವೆ: ರಾಜ್ಯ ಸರ್ಕಾರಕ್ಕೆ ಆಪ್ ಬೆಂಬಲ

Date:

Advertisements

“ಕರ್ನಾಟಕ ರಾಜ್ಯದಲ್ಲಿ ಬರಗಾಲವಿದೆ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಹೇಗೆ ಸಾಧ್ಯ? ಆದೇಶ ಪಾಲನೆ ಸಾಧ್ಯವಿಲ್ಲ ಎನ್ನೋಣ. ಇದಕ್ಕಾಗಿ ಜೈಲಿಗೆ ಹೋದರೂ ರಾಜ್ಯದ ಹಿತಕ್ಕಾಗಿ ಹೋದಂತಾಗುತ್ತದೆ. ನಿಮ್ಮ ಜೊತೆ ನಾವಿದ್ದೇವೆ” ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಖಾಲಿ ಬಿಂದಿಗೆ, ಖಾಲಿ ಬಕೆಟ್ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ಕಾವೇರಿ ನೀರಿನ ಸಮಸ್ಯೆ ಹಲವು ದಶಕಗಳಿಂದ ಇದೆ. ಈ ಸಮಸ್ಯೆಗೆ ಸರ್ಕಾರದ ಇಚ್ಛಾಶಕ್ತಿ ಕೊರತೆಯೇ ಕಾರಣವಾಗಿದೆ. ರಾಜ್ಯಕ್ಕೆ ನೀರಿಲ್ಲ ತಮಿಳುನಾಡಿಗೆ ಬಿಡಲು ಹೇಗೆ ಸಾಧ್ಯ? ತಕ್ಷಣ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲಿ. ಮುಂದೇ ಏನೆ ಬಂದರೂ ಎದುರಿಸಲಿ, ನಾವೂ ಜೊತೆಗೆ ಇರುತ್ತೇವೆ” ಎಂದರು.

Advertisements

“ತಮಿಳುನಾಡು ಕೆಳಗಿರುವ ರಾಜ್ಯವಾಗಿರುವುದರಿಂದ ಸಹಜವಾಗಿ ಹೆಚ್ಚುವರಿ ನೀರು ಸೇರುತ್ತದೆ. ಸಿಪಿಎಸ್‌ ನೀರು ಅಂದರೆ ಇಂಗಿದ ನೀರು ಕೂಡ ಅಲ್ಲಿಗೆ ಹೋಗುತ್ತದೆ. ಅವರು ಒಂದು ಬೆಳೆಗೆ ಬಳಸುವ ನೀರನ್ನು ನಮ್ಮ ರೈತರು ಮೂರು ಬೆಳೆಗೆ ಬಳಸಬಹುದು. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಂದರೆ ಕುಡಿಯುವ ನೀರಿನ ಸಮಸ್ಯೆಗೆ ಒಂದು ಹಂತದ ಪರಿಹಾರ ಕಂಡುಕೊಳ್ಳಬಹುದು. ಕಾವೇರಿ ವಿಚಾರದಲ್ಲಿ ಮೂರು ಪಕ್ಷಗಳು ಜನರ ಹಿತವನ್ನು ಮರೆತಂತೆ ವರ್ತಿಸುತ್ತಿವೆ” ಎಂದರು.

“ಕಾವೇರಿ ಹೋರಾಟಕ್ಕೆ ಎಲ್ಲರೂ ಕೈಜೋಡಿಸಬೇಕು. ಸಾಹಿತಿಗಳು, ಚಲನಚಿತ್ರ ನಟರು, ಗಣ್ಯರು, ಬೆಂಗಳೂರು ನಿವಾಸಿಗಳು ಕೂಡ ಕಾವೇರಿ ನೀರಿನ ಹೋರಾಟಕ್ಕೆ ಕೈಜೋಡಿಸಬೇಕು. ಕಾವೇರಿ ಇಲ್ಲದಿದ್ದರೆ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯಾಗಲಿದೆ. ಜನ ಈಗಲೇ ಎಚ್ಚೆತ್ತುಕೊಂಡು ಹೋರಾಟಕ್ಕೆ ಮುಂದಾಗಬೇಕು” ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.

ಡಿಕೆ ಶಿವಕುಮಾರ್ ನಿದ್ದೆ ಮಾಡುತ್ತಿದ್ದಾರೆ

“ಬೆಂಗಳೂರಿಗೆ ನೀರು ಬೇಕು. ಹೀಗಾಗಿ, ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಡಿಕೆ ಶಿವಕುಮಾರ್ ಮಲಗಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಒಪ್ಪಂದ ಮಾಡಿಕೊಂಡಿದ್ದು, ಮತಬ್ಯಾಂಕ್‌ಗೆ ತೊಂದರೆಯಾಗಲಿದೆ ಎಂಬ ಕಾರಣಕ್ಕಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯಶವಂತಪುರ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ; 2025ಕ್ಕೆ ಪೂರ್ಣ

ಮೈಸೂರು, ಬೆಂಗಳೂರು ಸಂಸದರು ಧ್ವನಿ ಎತ್ತಲಿ

ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಕುಮಾರ್ ಮಾತನಾಡಿ, “ಚುನಾವಣೆಗೆ ಮುನ್ನ ಬೆಂಗಳೂರು ನಗರಕ್ಕೆ ಕುಡಿಯುವ ನೀರು, ಮೇಕೆದಾಟು ಯೋಜನೆ ಬೇಕು ಎಂದು ಹೋರಾಟ ಮಾಡಿದ ಡಿಕೆ ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದಾರೆ. ಬೆಂಗಳೂರು ಉಸ್ತುವಾರಿ ಕೂಡ ಅವರದ್ದೇ ಆಗಿದೆ. ಆದರೆ, ನಮಗೇ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X