ಗದಗ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ಪರಿಹಾರಕ್ಕೆ ಎಸ್‌ಎಫ್‌ಐ ಆಗ್ರಹ

Date:

Advertisements

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಾರ್ಯಕರ್ತರು ಗದಗ ಜಿಲ್ಲೆ ಗಜೇಂದ್ರಗಡ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು.

ಎಸ್‌ಎಫ್‌ಐ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ್ ಮಾತನಾಡಿ, “ರಾಜ್ಯದ ಶಾಲೆ ಕಾಲೇಜಿನಲ್ಲಿ ಶೈಕ್ಷಣಿಕ ವಾತಾವರಣ ಇಲ್ಲದೆ ನಲುಗುತ್ತಿವೆ. ನೂತನವಾಗಿ ಆಯ್ಕೆಗೊಂಡು ರಚನೆಗೊಂಡಿರುವ ರಾಜ್ಯದ ಸಿದ್ಧಾರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜ್ಯದ ಸರ್ಕಾರಿ ಶಾಲೆ ಕಾಲೇಜುಗಳಲ್ಲಿ ಶೈಕ್ಷಣಿಕ ವಾತಾವರಣ ನಿರ್ಮಾಣ ಮಾಡಲು ಮುಂದಾಗಬೇಕು. ಶೈಕ್ಷಣಿಕ ವಲಯದಿಂದ ಹೊರಗೆ ಇರುವ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಒದಗಿಸಲು ಮುಂದಾಗುವಂತೆ, ತಾವುಗಳು ಸರ್ಕಾರದ ಮೇಲೆ ಒತ್ತಡ ಹಾಕಬೇಕು” ಎಂದು ತಹಶೀಲ್ದಾರರಿಗೆ ಒತ್ತಾಯಿಸಿದರು.

“ಕಾಂಗ್ರೆಸ್ ಚುನಾವಣೆಯ ಪೂರ್ವ ನೀಡಿದ ಭರವಸೆಯನ್ನು ಈಡೇರಿಸುವ ಕಾರ್ಯಕ್ಕೆ ಮುಂದಾಗಲಿ. ತನ್ನ ಪ್ರಣಾಳಿಕೆಯಲ್ಲಿ ನೀಡಿದಂತೆ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) 2020ನ್ನು ಕೂಡಲೇ ಹಿಂಪಡೆಯಬೇಕು. ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಲ್ಲಿ ವಿದ್ಯಾರ್ಥಿಗಳ ನಡುವೆ ಕೋಮು ವಿಷ ಬೀಜ ಬಿತ್ತಲು ಹೊರಟ ಬಿಜೆಪಿ ನೀತಿಯನ್ನು ಕೈಬಿಟ್ಟು ತಕ್ಷಣ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಮುಂದಾಗಬೇಕು. ಇದಕ್ಕಾಗಿ ಒಂದು ಸಮಿತಿ ರಚಿಸಬೇಕು. ಶಾಂತಿಯ ನೆಲವಾದ ಕರ್ನಾಟಕದಲ್ಲಿ ಶೈಕ್ಷಣಿಕ ವಲಯವನ್ನು ಸೌಹಾರ್ದ ಸೋದರತ್ವದ ನೆಲೆಯಾಗಿ ಉಳಿಸಿಕೊಳ್ಳಬೇಕಿದೆ. ಇದಕ್ಕೆ ಪೂರಕವಾಗಿ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ಮುಂದಾಗಲಿ. ಡೊನೇಷನ್ ಹಾವಳಿ ನಿಯಂತ್ರಣಕ್ಕೆ ಸರ್ಕಾರ ಮುಂದಾಗಬೇಕು. ಅದಕ್ಕೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ತಾಲೂಕಿನಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಇರುವ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ (ಡೇರಾ) ಕಮಿಟಿಯನ್ನು ರಚಿಸಿ ಸಭೆ ಕರೆಯಬೇಕು” ಎಂದು ಒತ್ತಾಯಿಸಿದರು.

Advertisements

ಎಸ್‌ಎಫ್‌ಐ ಜಿಲ್ಲಾ ಮುಖಂಡ ಚಂದ್ರು ರಾಠೋಡ್ ಮಾತನಾಡಿ, “ಶೈಕ್ಷಣಿಕ ವಲಯವು ಮೂಲ ಸೌಲಭ್ಯಗಳ ಕೊರತೆಯಿಂದ ಗೊಂದಲದ ಗೂಡಾಗಿದೆ. ವಿದ್ಯಾರ್ಥಿಗಳಿಗೆ ನೀಡಬೇಕಾದ ಪಠ್ಯಪುಸ್ತಕ, ಒಳ್ಳೆಯ ಸಮವಸ್ತ್ರ, ಶ್ಯೂ, ವಿದ್ಯಾರ್ಥಿವೇತನ, ಸೈಕಲ್, ಬಸ್ ಪಾಸ್‌ಗಳನ್ನು ಈವರೆಗೂ ನೀಡಿಲ್ಲ” ಎಂದು ಆರೋಪಿಸಿದರು.

“ಹಾಸ್ಟೆಲ್‌ಗಳಿಗೆ ಸೇರಬಯಸುವವರಿಗೆ ಅರ್ಜಿ ಕರೆಯಬೇಕು. ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ನೀಡಬೇಕು. ಹಾಸ್ಟೆಲ್ ಇಲ್ಲದ ಕಡೆ ಹೊಸ ಹಾಸ್ಟೆಲ್ ಪ್ರಾರಂಭಿಸಬೇಕು. ಖಾಲಿ ಇರುವ ಎಲ್ಲ ಬೋಧಕ ಬೋಧಕೇತರ ಸಿಬ್ಬಂದಿಗಳನ್ನು ಭರ್ತಿ ಮಾಡಿಕೊಳ್ಳಬೇಕು ಸರ್ಕಾರವು ಕೂಡಲೇ ಈ ಎಲ್ಲ ಮೂಲ ಸೌಲಭ್ಯಗಳನ್ನು ಒದಗಿಸಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

“ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಕಲಾ ವಿಭಾಗದಲ್ಲಿ ಸಮಾಜಶಾಸ್ತ್ರ, ವಿಜ್ಞಾನ ವಿಷಯಕ್ಕೆ ಉಪನ್ಯಾಸಕರ ಭರ್ತಿ ಮಾಡಬೇಕು. ತಕ್ಷಣಕ್ಕೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಿರು ಉಪನ್ಯಾಸಕರನ್ನಾದರು ನೇಮಕ ಮಾಡಿಕೊಳ್ಳಬೇಕು. ವಾಣಿಜ್ಯ ವಿಭಾಗದಲ್ಲಿ Accountancy ಮತ್ತು Business study ವಿಷಯಕ್ಕೆ ಕೆವಲ ಒಬ್ಬರು ಅತಿಥಿ ಉಪನ್ಯಾಸಕರಿದ್ದು, ಖಾಯಂ ಉಪನ್ಯಾಸಕರನ್ನು ಭರ್ತಿ ಮಾಡಿಕೊಳ್ಳಬೇಕು” ಎಂದು ಆಗ್ರಹಿಸಿದರು.

“ವಿಜ್ಞಾನ ವಿಭಾಗದಲ್ಲಿ ಜೀವಶಾಸ್ತ್ರ ಉಪನ್ಯಾಸಕರ ವರ್ಗಾವಣೆ ಆಗಿದ್ದು, ಆ ಖಾಲಿ ಹುದ್ದೆಯನ್ನು ತಕ್ಷಣ ಭರ್ತಿ ಮಾಡಬೇಕು. ಗ್ರಂಥಾಲಯದಲ್ಲಿ ಸರಿಯಾದಂತಹ ಪುಸ್ತಕಗಳು ಇಲ್ಲ. ಹಾಗಾಗಿ ಹೆಚ್ಚಿನ ಪುಸ್ತಕಗಳನ್ನು ಒದಗಿಸಬೇಕು. ಗ್ರಂಥಾಲಯಕ್ಕೆ ಒಬ್ಬರನ್ನು ಖಾಯಂ ಗ್ರಂಥಪಾಲಕರನ್ನು ನೇಮಿಸಬೇಕು. ಪ್ರಯೋಗಾಲಯಗಳಿಗೆ ಬೇಕಾಗದಂತಹ ಸಿಬ್ಬಂದಿಗಳನ್ನು ಸೇವಿಸಬೇಕು. ಮೂಲ ಸೌಕರ್ಯಗಳು ಒದಗಿಸಬೇಕು. ಕಾಲೇಜಿನಲ್ಲಿ ಬಡಿಯುವ ನೀರಿನ ಸಮಸ್ಯೆ ಇದ್ದು, ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು” ಎಂದು ಒತ್ತಾಯಿಸಿದರು.

“ಕಾಲೇಜಿನಲ್ಲಿ ಬೋಧಕೇತರ ಸಿಬ್ಬಂದಿಗಳನ್ನು ನೇಮಿಸಬೇಕು. ಗಜೇಂದ್ರಗಡ, ರೋಣ ತಾಲೂಕಗಳಲ್ಲಿ ಒಂದೇ ಒಂದು ಸರ್ಕಾರಿ ಪದವಿ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಇದ್ದು, ಮೂಲ ಸೌಕರ್ಯಗಳನ್ನು ಒದಗಿಸದೇ ಹೋದಲ್ಲಿ ಮುಚ್ಚಿಹೋಗುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕುಡಿಯುವ ನೀರಿಗಾಗಿ ಜೈಲಿಗೆ ಹೋಗೋಣ, ನಿಮ್ಮೊಂದಿಗೆ ನಾವಿದ್ದೇವೆ: ರಾಜ್ಯ ಸರ್ಕಾರಕ್ಕೆ ಆಪ್ ಬೆಂಬಲ

“ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಖಾಯಂ ಉಪನ್ಯಾಸಕರನ್ನು ನೇಮಕ ಮಾಡಬೇಕು. ಮೂಲ ಸೌಲಭ್ಯ ಒದಗಿಸಬೇಕು. ಈ ಮೇಲಿನ ಎಲ್ಲ ಬೇಡಿಕೆ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಒಂದು ವೇಳೆ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮತ್ತು ಇಲಾಖೆಗಳು ಮುಂದಾಗದಿದ್ದರೆ ನಾವು ವಿದ್ಯಾರ್ಥಿಗಳ ಜೊತೆಗೂಡಿ ಸ್ಥಳೀಯ ಶಾಸಕರ ಮನೆಗೆ ಮುತ್ತಿಗೆ ಹಾಕಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರದೀಪ್, ಶರಣು, ಅರುಣ, ಮಾಹಾಂತೇಶ, ಪ್ರಭು, ಸುನಿಲ್, ವಿನಾಯಕ ಬಿ ಮಹಮ್ಮದ್ ಆರ್ ಸೇರಿದಂತೆ ಇತರರು ಇದ್ದರು.

ವರದಿ : ಮೀಡಿಯಾ ವಾಲೆಂಟಿಯರ್ ಚಂದ್ರು ರಾಠೋಡ್
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮುಶಿಗೇರಿ ವಸತಿ ನಿಲಯಕ್ಕೆ ಮೂಲ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಗೋಳು ಕೇಳೋರ್ಯಾರು?

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಸತಿ...

ಗದಗ : ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ ಆದೇಶ

ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈ ಸುದ್ದಿ...

ಗದಗ | ರಮೇಶ್ ಬೂದಿಹಾಳಗೆ ಸಿಎಂ ಸನ್ಮಾನ

ಇತ್ತೀಚೆಗೆ ನಡೆದ ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ...

ಲಕ್ಷ್ಮೇಶ್ವರ ರಸ್ತೆಯುದ್ಧಕ್ಕೂ ನೂರಾರು ತಗ್ಗು ಗುಂಡಿಗಳು: ರಸ್ತೆ ಅಭಿವೃದ್ಧಿಪಡಿಸಲು ಸಾರ್ವಜನಿಕರು ಒತ್ತಾಯ

ಒಂದು ಜಿಲ್ಲೆಯ ಅಭಿವೃದ್ಧಿ ಎಷ್ಟರ ಮಟ್ಟಿಗೆ ಆಗಿದೆ ಎಂಬುದನ್ನು ತಿಳಿದುಕೊಳ್ಳಲು ಅಲ್ಲಿಯ...

Download Eedina App Android / iOS

X