ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣೆ ಮತ್ತು ಕುರುಗೋಡು ಪೊಲೀಸ್ ಠಾಣೆಯ ಸಿಬ್ಬಂದಿಗಳು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 43 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ರಂಜಿತ್ ಕುಮಾರ್ ಭಂಡಾರು ತಿಳಿಸಿದ್ದಾರೆ.
ಬಳ್ಳಾರಿ ಎಸ್‌ಪಿ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿದರು. “ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ರಫೀಕ್, ಮೊಹಮ್ಮದ್ ವಾಸಿಂ, ಅಬೂಬಕರ್, ನಜೀರ್ ನಜೀರ್ ಎಂಬ ಆರೋಪಿಗಳನ್ನು ಕೌಲ್ ಬಜಾರ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 37 ಬೈಕ್‌ಗಳು, 1 ಆಟೋ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಕುರುಗೋಡು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸುರ್ಪೀತ್ ನೇತೃತ್ವದಲ್ಲಿ ಮತ್ತೊಂದು ಕಾರ್ಯಾಚಾರಣೆ ನಡೆದಿದ್ದು, ಸುರೇಶ್ ಮತ್ತು ಕರೀಮ್ ಎಂಬ ಬೈಕ್ ಕಳ್ಳರನ್ನು ಬಂಧಿಸಲಾಗಿದ್ದು, ಅವರಿಂದ 25 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿದರು.
ಪೊಲೀಸರು ಕಾರ್ಯಾಚರಣೆಯನ್ನು ಶ್ಲಾಘಿಸಿದ ಎಸ್‌ಪಿ, ಕೌಲ್ ಬಜಾರ್ ಪೊಲೀಸ್ ಠಾಣೆ ಮತ್ತು ಕುರುಗೋಡು ಪೊಲೀಸ್ ಠಾಣೆಯ ಸಿಬ್ಬಂದಿಗೆ ಹತ್ತು ಸಾವಿರ ರೂ. ಬಹುಮಾನ ಘೋಷಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಎಸ್‌ಪಿ ರವಿಕುಮಾರ್ ಇದ್ದರು.