ಬೀದರ್‌ | ಶಿಕ್ಷಕಿ ‘ದಲಿತೆ’ ಎಂಬ ಕಾರಣಕ್ಕೆ ಅಂಗನವಾಡಿ ಬಹಿಷ್ಕರಿಸಿದ ʼಪ್ರಬಲ ಜಾತಿʼ ಪೋಷಕರು

Date:

Advertisements
ಅಂಗನವಾಡಿ ಶಿಕ್ಷಕಿಯೊಬ್ಬರು ದಲಿತ ಸಮುದಾಯಕ್ಕೆ ಸೇರಿದ್ದಾರೆಂಬ ಕಾರಣಕ್ಕೆ ಗ್ರಾಮದ ಪ್ರಬಲ ಜಾತಿಯವರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸದೆ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವುದು ಬಸವಾದಿ ಶರಣರ ನಾಡಿನಲ್ಲಿ ಬೆಳಕಿಗೆ ಬಂದಿದೆ.

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ (ಡಬ್ಲ್ಯೂ) ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಕಳೆದ ಒಂದು ವರ್ಷದ ಹಿಂದೆ ದಲಿತ ಸಮುದಾಯದ ಅಂಬಿಕಾ ಎಂಬುವವರನ್ನು ಶಿಕ್ಷಕಿಯನ್ನಾಗಿ ನೇಮಕ ಮಾಡಿದ್ದರು. ಇದು ಆ ಗ್ರಾಮದ ಪ್ರಬಲ ಜಾತಿಯವರಲ್ಲಿ ಜಾತಿ ಅಸಹನೆ ಮೂಡಿಸಿದ್ದು, ಅಂದಿನಿಂದಲೂ ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸದೆ ಅಸ್ಪೃಶ್ಯತೆ ಆಚರಣೆ ಮಾಡುತ್ತಿದ್ದಾರೆ. ಗ್ರಾಮದಲ್ಲಿನ ಅಸ್ಪೃಶ್ಯತೆ ಆಚರಣೆ ತಡವಾಗಿ ಬೆಳಕಿಗೆ ಬಂದಿದೆ.

ಬ್ಯಾಲಹಳ್ಳಿ(ಡಬ್ಲ್ಯೂ) ಗ್ರಾಮದಲ್ಲಿ ಸುಮಾರು 200ಕ್ಕೂ ಅಧಿಕ ಮನೆಗಳಿವೆ. ತಾಲೂಕು ಕೇಂದ್ರದಿಂದ ಸುಮಾರು 15 ಕಿಮೀ ದೂರವಿರುವ ಈ ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಹಾಗೂ ದಲಿತ ಸಮುದಾಯದವರು ಇದ್ದಾರೆ. ಗ್ರಾಮದಲ್ಲಿ ಒಂದೇ ಅಂಗನವಾಡಿ ಕೇಂದ್ರವಿದೆ. ಅಂಗನವಾಡಿಯಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ಅಡುಗೆ ಸಹಾಯಕಿಯೊಬ್ಬರು ವರ್ಷದ ಹಿಂದೆ ನಿವೃತ್ತಿಯಾಗಿದ್ದಾರೆ. ನಂತರ ಹೊಸದಾಗಿ ನೇಮಕವಾದ ಶಿಕ್ಷಕಿ ಹಾಗೂ ಸಹಾಯಕಿ ಇಬ್ಬರೂ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಆದರೆ, ಹೊಸದಾಗಿ ಅಡುಗೆ ಸಹಾಯಕಿ ಹುದ್ದೆಗೆ ನೇಮಕವಾದವರು ನೇಮಕಾತಿ ಪ್ರಕ್ರಿಯೆಯಲ್ಲಿ ತಕರಾರು ಇದ್ದ ಕಾರಣಕ್ಕೆ ಅವರು ಸದ್ಯ ಕರ್ತವ್ಯದಲ್ಲಿ ಇಲ್ಲ. ಹೀಗಾಗಿ ಅಂಗನವಾಡಿ ಶಿಕ್ಷಕಿ ಅಂಬಿಕಾ ಅವರೇ ಅಡುಗೆ ಜವಬ್ದಾರಿಯನ್ನೂ ನಿಭಾಯಿಸುತ್ತಿದ್ದಾರೆ.

“ಕಳೆದ ವರ್ಷ ನೇಮಕವಾದ ನಂತರ ಶಿಕ್ಷಕಿಯ ಜವಾಬ್ದಾರಿಯೊಂದಿಗೆ ಅಡುಗೆ ಸಹಾಯಕಿ ಕೆಲಸವೂ ನಾನೇ ಮಾಡುತ್ತಿದ್ದೇನೆ. ಈಗ ಒಟ್ಟು 30-40 ಮಕ್ಕಳ ದಾಖಲಾತಿ ಇದೆ. ಪ್ರತಿದಿನ ಮಕ್ಕಳನ್ನು ಕರೆಯಲು ಮನೆ-ಮನೆಗೆ ಹೋಗುತ್ತೇನೆ. ಆದರೆ, ಪೋಷಕರು ತಮ್ಮ ಮಕ್ಕಳನ್ನು ಕಳಿಸುತ್ತಿಲ್ಲ. ದಲಿತ ಸಮುದಾಯಕ್ಕೆ ಸೇರಿದ 5-6 ಮಕ್ಕಳು ಮಾತ್ರ ಬರುತ್ತಾರೆ. ಒಂದು ವರ್ಷದಿಂದ ಹೀಗೆ ನಡೆಯುತ್ತಿದೆ. ಈ ಹಿಂದೆ ಅಡುಗೆ ಸಹಾಯಕಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದರು. ಆಗ ಎಲ್ಲ ಸಮುದಾಯದ ಮಕ್ಕಳು ಬರುತ್ತಿದ್ದರು. ನಾನು ಬಂದ ನಂತರ ಅಡುಗೆಯೂ ನಾನೇ ತಯಾರಿಸುವ ಕಾರಣಕ್ಕೆ ತಮ್ಮ ಮಕ್ಕಳನ್ನು ಕಳಿಸಲು ಪೋಷಕರು ನಿರಾಕರಿಸುತ್ತಿದ್ದಾರೆ” ಎಂದು ಶಿಕ್ಷಕಿ ಅಂಬಿಕಾ ಈ ದಿನ.ಕಾಮ್‌ ಜೊತೆ ಮಾತನಾಡಿ ಹೇಳಿದರು.

Advertisements

ಅಂಗನವಾಡಿಗೆ ಸ್ವಂತ ಕಟ್ಟಡವಿಲ್ಲ:

ಬ್ಯಾಲಹಳ್ಳಿ(ಡಬ್ಲೂ) ಗ್ರಾಮದಲ್ಲಿ ಒಂದೇ ಅಂಗನವಾಡಿ ಕೇಂದ್ರ ಇದೆ. ಆದರೆ ಸ್ವಂತ ಕಟ್ಟಡ ಇಲ್ಲದ ಕಾರಣಕ್ಕೆ ಸುಮಾರು 40 ವರ್ಷಗಳಿಂದ ಬೇರೆ ಇಲಾಖೆಯ ಕಟ್ಟಡವೊಂದರಲ್ಲಿ ನಡೆಯುತ್ತಿದೆ. ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯಗಳು ಇಲ್ಲ. ಈ ಬಗ್ಗೆ ಹಲವು ಬಾರಿ ಶಿಶು ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮ ಪಂಚಾಯತ್‌ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ ಸ್ಥಳದ ಕೊರತೆಯಿಂದ ಕಟ್ಟಡ ಆಗಲಿಲ್ಲ ಎಂದು ಹೇಳಿದ್ದಾರೆ. ಈಗಲಾದರೂ ಹೊಸ ಕಟ್ಟಡ ನಿರ್ಮಿಸಿ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡುವಂತೆ ಗ್ರಾಮದ ಸಾಮಾಜಿಕ ಕಾರ್ಯಕರ್ತ ವೈಜಿನಾಥ ಜಗದೇವ ಒತ್ತಾಯಿಸಿದ್ದಾರೆ.

ಈ ಬಗ್ಗೆ ಭಾಲ್ಕಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ತಾಲೂಕಾಧಿಕಾರಿ ಸತೀಷಕುಮಾರ ಸಂಗಮ ಈ ದಿನ.ಕಾಮ್‌ ಜೊತೆ ಮಾತನಾಡಿ, “ಈ ಬಗ್ಗೆ ನನ್ನ ಗಮನಕ್ಕೆ ಇಲ್ಲ, ತಾಲೂಕಿನ ಶಿಶು ಅಭಿವೃದ್ಧಿ ಇಲಾಖೆ, ತಹಸೀಲ್ದಾರ್‌, ತಾ.ಪಂ. ಇಒ ಹಾಗೂ ಪೊಲೀಸ್‌ ಇಲಾಖೆಯವರ ಗಮನಕ್ಕೆ ತಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು” ಎಂದು ಹೇಳಿದರು.

ಭಾಲ್ಕಿ ತಾಲೂಕು ಶಿಶು ಅಭಿವೃದ್ಧಿ ಇಲಾಖೆ ತಾಲೂಕಾಧಿಕಾರಿ ಶ್ರೀನಿವಾಸ ಬಾಳುವಾಲೆ ಈ ದಿನ.ಕಾಮ್‌ ಜೊತೆ ಮಾತನಾಡಿ, “ಈ ಬಗ್ಗೆ ನನ್ನ ಗಮನಕ್ಕೆ ಇದೆ, ಅಂಗನವಾಡಿ ಶಿಕ್ಷಕಿ ಒಬ್ಬರೇ ಎರಡು ಕರ್ತವ್ಯ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಆದರೆ ದಲಿತೆ ತಯಾರಿಸಿದ ಆಹಾರ ನಿರಾಕರಣೆ ಮಾಡುವ ಮೂಲಕ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆಯಿದೆ. ಹೀಗಾಗಿ ಹೆಚ್ಚಿನ ಮಕ್ಕಳು ಅಂಗನವಾಡಿಗೆ ಬರುವುದಿಲ್ಲ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಗ್ರಾಮಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಲಾಗುವುದು. ಹೊಸ ಅಂಗನವಾಡಿ ಕಟ್ಟಡ ಮಂಜೂರಾಗಿದೆ, ಜಾಗವೂ ಗುರುತಿಸಲಾಗಿದೆ, ಗ್ರಾಮೀಣಾಭಿವೃದ್ಧಿ ಇಲಾಖೆಯವರ ಗಮನಕ್ಕೆ ತರಲಾಗಿದೆ, ಕೂಡಲೇ ಕಟ್ಟಡ ಕಾಮಗಾರಿ ಶುರು ಮಾಡಲಾಗುವುದು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಕೆ: ಕೇಂದ್ರ ಸಚಿವ ಖೂಬಾ

“ಜಗತ್ತಿಗೆ ʼಸಮಾನತೆ ತತ್ವʼ ಸಾರಿದ ಕಲ್ಯಾಣ ನೆಲದಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದು ತುಂಬಾ ದುರಂತದ ಸಂಗತಿ. ಅಂದು ಭಾಲ್ಕಿ ಹಿರೇಮಠದ ಡಾ. ಚನ್ನಬಸವ ಪಟ್ಟದ್ದೇವರು ಅಸ್ಪೃಶ್ಯತೆ ನಿರ್ಮೂಲನೆಗೆ ಹಳ್ಳಿಗಳಿಗೆ ತೆರಳಿ ಅರಿವು ಮೂಡಿಸಿದ್ದರು. ಆದರೆ ಅದೇ ತಾಲೂಕಿನಲ್ಲಿ ಇಂದಿಗೂ ಜಾತಿಯತೆ ತಾಂಡವಾಡುತ್ತಿರುವುದು ವಿಷಾದನೀಯ. ಅಸ್ಪೃಶ್ಯತೆ ನಿರ್ಮೂಲನೆ ಕುರಿತು ಸರ್ಕಾರ ಹಲವು ಯೋಜನೆ ಜಾರಿಗೊಳಿಸಿ ಜಾಗೃತಿ ಮೂಡಿಸಲು ತಿಳಿಸಿದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಗ್ರಾಮೀಣ ಭಾಗದಲ್ಲಿ ಜಾತಿಯತೆ ಆಚರಣೆ ಜೀವಂತವಾಗಿರುವುದು ಖಂಡನೀಯ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಮಾಲೋಚನೆ ಸಭೆ ನಡೆಸಿ, ಎಲ್ಲರೂ ಸೌಹಾರ್ದತೆಯಿಂದ ಬದುಕುವಂತೆ ಮನವರಿಕೆ ಮಾಡಬೇಕು. ಈ ಕುರಿತು ತನಿಖೆ ಕೈಗೊಂಡು ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು” ಗ್ರಾಮದ ದಲಿತ ಸಮುದಾಯದ ಮುಖಂಡ ಗಗನ್‌ ಫುಲೆ ಈ ದಿನ.ಕಾಮ್‌ನೊಂದಿಗೆ ಮಾತನಾಡಿ ಒತ್ತಾಯಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X