ಭೀಮಾ ಕೋರೆಗಾಂವ್ ಪ್ರಕರಣ | ಹೋರಾಟಗಾರ ಮಹೇಶ್ ರಾವತ್‌ಗೆ ಬಾಂಬೆ ಹೈಕೋರ್ಟ್‌ ಜಾಮೀನು

Date:

Advertisements
  • 2018ರ ಜೂನ್‌ನಲ್ಲಿ ಬಂಧಿಸಲ್ಪಟ್ಟಿದ್ದ ಹೋರಾಟಗಾರ ಮಹೇಶ್ ರಾವುತ್‌
  • ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜಾಮೀನು ಪಡೆದ ಆರನೇ ವ್ಯಕ್ತಿ ರಾವತ್

2018ರ ಭೀಮಾ ಕೋರೆಗಾಂವ್ ಗಲಭೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಹೋರಾಟಗಾರ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಶರ್ಮಿಳಾ ದೇಶಮುಖ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಷ್ಟ್ರೀಯ ತನಿಖಾ ಪ್ರಾಧಿಕಾರ (ಎನ್‌ಐಎ) ಕಾಲಾವಕಾಶ ಕೋರಿದ ನಂತರ ನ್ಯಾಯಾಲಯವು ಜಾಮೀನು ಆದೇಶಕ್ಕೆ ಒಂದು ವಾರಗಳ ಕಾಲ ತಡೆ ನೀಡಿದೆ.

Advertisements

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜಾಮೀನು ಪಡೆದ ಆರನೇ ವ್ಯಕ್ತಿ ರಾವತ್ ಆಗಿದ್ದು, ಈ ಮೊದಲು ಸುಧಾ ಭಾರದ್ವಾಜ್, ವರವರ ರಾವ್, ಆನಂದ್ ತೇಲ್ತುಂಬ್ಡೆ, ವೆರ್ನಾನ್ ಗೊನ್ಸಾಲ್ವಿಸ್ ಮತ್ತು ಅರುಣ್ ಫೆರೇರಾ ಜಾಮೀನು ಪಡೆದವರು. ಈ ಪೈಕಿ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ನೀಡಲಾಗಿತ್ತು.

ಸುಪ್ರೀಂ ಕೋರ್ಟ್ ಆದೇಶದ ನಂತರ ಮತ್ತೊಬ್ಬ ಆರೋಪಿ ಸ್ಥಾನದಲ್ಲಿರುವ ಗೌತಮ್ ನವ್ಲಾಖಾ ಅವರನ್ನು ಜೈಲಿನಲ್ಲಿಡುವ ಬದಲು ಗೃಹಬಂಧನದಲ್ಲಿ ಇರಿಸಲಾಗಿದೆ.

ಈ ಪ್ರಕರಣದಲ್ಲಿ ರಾವತ್ ಅವರನ್ನು2018ರ ಜೂನ್‌ನಲ್ಲಿ ಬಂಧಿಸಲಾಗಿತ್ತು. ಎನ್‌ಐಎ ವಿಶೇಷ ನ್ಯಾಯಾಲಯವು ನವೆಂಬರ್ 2021ರಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ಹೈಕೋರ್ಟ್‌ಗೆ ಮೊರೆ ಹೋಗಿದ್ದರು.

ರಾವತ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮಿಹಿರ್ ದೇಸಾಯಿ ಮತ್ತು ವಕೀಲ ವಿಜಯ್ ಹಿರೇಮಠ ಅವರು ಸಹ ಆರೋಪಿಗಳಾದ ಆನಂದ್ ತೇಲ್ತುಂಬ್ಡೆ, ಅರುಣ್ ಫೆರೇರಾ ಮತ್ತು ವೆರ್ನಾನ್ ಗೊನ್ಸಾಲ್ವಿಸ್ ಅವರಂತೆಯೇ ಸಮಾನತೆಯ ಆಧಾರದ ಮೇಲೆ ಅವರಿಗೆ ಜಾಮೀನು ನೀಡಬೇಕೆಂದು ವಿನಂತಿಸಿದರು.

ರಾವತ್ ಅವರು ಈಗಾಗಲೇ 5 ವರ್ಷಗಳ ಕಾಲ ಜೈಲಿನಲ್ಲಿದ್ದಾರೆ ಮತ್ತು ವಿಚಾರಣೆ ಇನ್ನೂ ಪ್ರಾರಂಭವಾಗದ ಕಾರಣ ಬಿಡುಗಡೆಗೆ ಅರ್ಹರು ಎಂದು ಅವರು ವಾದಿಸಿದರು.

ರಾವತ್ ಅವರ ಮೇಲಿರುವ ಆರೋಪಗಳು ಬಹಳ ಗಂಭೀರವಾದದ್ದು. ಭಾರತದ ಏಕತೆ, ಸಮಗ್ರತೆ, ಭದ್ರತೆ ಮತ್ತು ಸಾರ್ವಭೌಮತೆಗೆ ವಿರುದ್ಧವಾಗಿದೆ. ಹಾಗಾಗಿ ಜಾಮೀನು ನೀಡದಂತೆ ಎನ್‌ಐಎ ಪರ ವಕೀಲ ಸಂದೇಶ್ ಪಾಟೀಲ್ ಅವರೊಂದಿಗೆ ಹೆಚ್ಚುವರಿ ಸಾಲಿಸಿಟರ್ ಜನರಲ್ ದೇವಾಂಗ್ ವ್ಯಾಸ್ ವಿರೋಧಿಸಿದರು. ಆದರೆ ಇದನ್ನು ಪುರಸ್ಕರಿಸದ ನ್ಯಾಯಾಲಯವು, ಜಾಮೀನು ಮಂಜೂರು ಮಾಡಿದೆ.

ಅದಾಗಿಯೂ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಒಂದು ವಾರಗಳ ಕಾಲ ಎನ್‌ಐಎಗೆ ಅವಕಾಶ ನೀಡಿದ್ದು, ಜಾಮೀನು ಆದೇಶಕ್ಕೆ ಒಂದು ವಾರಗಳ ಕಾಲ ತಡೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X