ಬೆಳಗಾವಿ | ಮಲಪ್ರಭಾ ಅಚ್ಚುಕಟ್ಟು; 15 ದಿನಗಳ ಕಾಲ ಕುಡಿಯುವ ನೀರು ಪೂರೈಕೆ

Date:

Advertisements

ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಸೆಪ್ಟೆಂಬರ್‌ 22ರ ಶುಕ್ರವಾರದಿಂದ ಹದಿನೈದು ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.

ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ನೀರಾವರಿ ಹಿತಾಸಕ್ತಿ ಹಾಗೂ ಕುಡಿಯುವ ನೀರು ಒದಗಿಸುವುದು ಈ ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಸಲಹಾ ಸಮಿತಿಯ ನಿರ್ಧಾರ ಆಧರಿಸಿ ಅಧಿಕಾರಿಗಳು ಆದೇಶ ಮಾಡಲಿದ್ದಾರೆ. ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರದಿಂದ ಹದಿನೈದು ದಿನಗಳವರೆಗೆ ನೀರು ಹರಿಸಲಾಗುವುದು” ಎಂದು ತಿಳಿಸಿದರು.

Advertisements

ನವಲಗುಂದ ಶಾಸಕ ಎನ್ ಎಚ್ ಕೋನರಡ್ಡಿ ಮಾತನಾಡಿ, “ಮಳೆ ಕೊರತೆಯಿಂದ ಕುಡಿಯುವ ನೀರಿನ ತೊಂದರೆ ಉಂಟಾಗಿದೆ. ಹಾಗಾಗಿ ನೀರಾವರಿಗೆ ಬಿಡಲು ನೀರು ಉಳಿಸಿಕೊಂಡು ಕುಡಿಯುವ ನೀರನ್ನೂ ಬಿಡುಗಡೆಗೊಳಿಸಬೇಕು” ಎಂದು ತಿಳಿಸಿದರು.

ಸವದತ್ತಿ ಶಾಸಕ ವಿಶ್ವಾಸ್ ವೈದ್ಯ ಮಾತನಾಡಿ, “ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗಿದ್ದು, ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆಗೊಳಿಸುವುದು ಅವಶ್ಯವಾಗಿದೆ” ಎಂದು ಸಲಹೆ ನೀಡಿದರು.

ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟಿಲ್ ಮಾತನಾಡಿ‌, “ಮುಂದಿನ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಜಲಾಶಯದಿಂದ ನೀರು ನಿರ್ವಹಣೆ ಮಾಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ವಿವಾದ | ಸುಪ್ರೀಂಗೆ ಅರ್ಜಿ ಸಲ್ಲಿಸಿದ ಇಬ್ಬರು ರೈತರು

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖ್ಯ ಎಂಜಿನಿಯರ್ ಅಶೋಕ ವಾಸನದ, ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಎಂಜಿನಿಯರ್ ವಿ ಎಸ್ ಮಧುಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಸದುಗೌಡ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

Download Eedina App Android / iOS

X