ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಸೆ.23 ರಂದು ಸ್ವಚ್ಛತಾ ಕಾರ್ಯ ಕೈಗೊಂಡಿರುವ ಹಿನ್ನಲೆ, ಗಣೇಶಮೂರ್ತಿ ವಿಸರ್ಜನೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಹೇಳಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, “ಪಾಲಿಕೆ ವ್ಯಾಪ್ತಿಯ ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಸಕಲ ಸಿದ್ಧತೆಯೊಂದಿಗೆ ವಾರ್ಡ್ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಅದರಂತೆ ಸೆ.18 ರಿಂದ ಅ.2 ರವರೆಗೆ ಸಾರ್ವಜನಿಕ ಗಣೇಶ ವಿಸರ್ಜನೆಗೆ ಕೆರೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಕೆರೆಯ ವಿಸರ್ಜನಾ ಕೊಳದ ಬಹುಪಾಲು ಭಾಗ ತುಂಬಿದೆ. ನಂತರದ ಗಣೇಶ ಮೂರ್ತಿ ವಿಸರ್ಜನೆಗೆ ಸ್ಥಳಾವಕಾಶವಿಲ್ಲ” ಎಂದು ಬಿಬಿಎಂಪಿ ಹೇಳಿದೆ.
“ಕೆರೆಯಲ್ಲಿ ಗಣೇಶ ವಿಸರ್ಜನೆ ಮಾಡಲು ಈಗ ಸ್ಥಳಾವಕಾಶ ಇಲ್ಲ. ಕೆರೆಯಲ್ಲಿ ತುಂಬಿರುವ ಮಣ್ಣು ಮತ್ತು ಇತರೆ ಗಣೇಶ ಮೂರ್ತಿಗಳ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಹೊಸದಾಗಿ ನೀರು ತುಂಬಿ ಸಾರ್ವಜನಿಕರಿಗೆ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು” ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ತುರ್ತಾಗಿ ಅಧಿವೇಶನ ಕರೆದು ನೀರು ಬಿಡಲಾಗದು ಎಂದು ಸುಗ್ರೀವಾಜ್ಞೆ ಹೊರಡಿಸಿ: ಚಿಂತನ ಮಂಥನ ಸಭೆಯ ಒತ್ತಾಯ
“ಹಾಗಾಗಿ, ಸೆ.23 ರಂದು ವಿಸರ್ಜನಾ ಕೆರೆಗೆ ಸಾರ್ವಜನಿಕರ ಪ್ರವೇಶವನ್ನು ಹಾಗೂ ಗಣೇಶ ಮೂರ್ತಿ ವಿಸರ್ಜನೆ ನಿರ್ಬಂಧಿಸಲಾಗಿದೆ. ಈ ಕಾರ್ಯಕ್ಕೆ ಸಾರ್ವಜನಿಕರು ಸಹಕರಿಸಬೇಕು” ಎಂದು ಬನಶಂಕರಿ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.