ಕಾವೇರಿ ವಿಚಾರದಲ್ಲಿ ನಾನು ಯಾವುದೇ ಸಲಹೆ ಕೊಡಲ್ಲ: ಹೆಚ್‌ ಡಿ ದೇವೇಗೌಡ

Date:

Advertisements
  • ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಅಧ್ಯಕ್ಷರು, ನನ್ನ ಬಾಯಲ್ಲಿ ಅವರ ಬಗ್ಗೆ ಮಾತು ಬೇಡ
  • ಸಮಸ್ಯೆ ತಿಳಿಯಲು ರಾಜ್ಯದ ಅಧಿಕಾರಿಗಳನ್ನು ಕಳಿಸುವಂತೆ ರಾಜ್ಯಸಭೆಯಲ್ಲೇ ಹೇಳಿದ್ದೇನೆ

ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಕಾವೇರಿ ನದಿ ವಿಚಾರದಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದೇನೆ. ಆದರೆ, ಈ ವಿಚಾರದಲ್ಲಿ ನಾನು ಯಾವುದೇ ಸಲಹೆ ಕೊಡಲ್ಲ. ಸುಪ್ರೀಂಕೋರ್ಟ್​ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಈಗ ನಾನು ಏನೂ ಮಾತಾಡಲ್ಲ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್‌ ವರಿಷ್ಠ ಹೆಚ್‌ ಡಿ ದೇವೇಗೌಡ ತಿಳಿಸಿದರು.

ದೆಹಲಿಯ ಸಫ್ದರ್​ಜಂಗ್ ಲೇನ್​ನಲ್ಲಿರುವ ನಿವಾಸದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ನೀರು ಬಿಟ್ಟಿದ್ದು ತಪ್ಪು ಅಂತಾ ಪಕ್ಷದ ಪರ ಹೆಚ್ ​​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕಾವೇರಿ ವಿಚಾರವಾಗಿ ವಸ್ತುಸ್ಥಿತಿ ಅರಿಯಲು ಬೇರೆ ರಾಜ್ಯದ ಅಧಿಕಾರಿಗಳನ್ನು ಕಳಿಸುವಂತೆ ರಾಜ್ಯಸಭೆಯಲ್ಲೇ ಸಲಹೆ ನೀಡಿದ್ದೇನೆ” ಎಂದರು.

“ಕಾವೇರಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಎಂಎಲ್​ಸಿ ಒಬ್ಬರನ್ನು ನನ್ನ ಬಳಿ ಕಳಿಸಿದ್ದರು. ನನ್ನ ಸಹಕಾರ ಇದೆ ಎಂದು ಹೇಳಿದ್ದೆ. ನಾನು ಸಂಸದರ ಸಭೆಯಲ್ಲಿ ಪಾಲ್ಗೊಳ್ಳಲು ಆಗಿಲ್ಲ. ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದರು” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಕಾವೇರಿ ಹೋರಾಟ | ಕಾವೇರಿ ನದಿಗಿಳಿದು ರೈತರ ಪ್ರತಿಭಟನೆ

“ರಾಜ್ಯಸಭೆಯಲ್ಲಿ ಕಾವೇರಿ ವಿಚಾರದಲ್ಲಿ ನಾನೊಬ್ಬನೆ ಮಾತನಾಡಿದೆ. ಮಲ್ಲಿಕಾರ್ಜುನ ಖರ್ಗೆ ಏಕೆ ಮಾತನಾಡಲಿಲ್ಲ ಎಂಬ ಪ್ರಶ್ನೆಗೆ ಈ ಬಗ್ಗೆ ನನ್ನ ಬಾಯಲ್ಲಿ ಏನೇನೋ ಹೇಳಿಸಬೇಡಿ. ಅವರೊಬ್ಬರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು” ಎಂದಷ್ಟೇ ಹೇಳಿದರು.

ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಮನಮೋಹನ್​ ಸಿಂಗ್ ಅವರ ಕೇಂದ್ರ​​ ಸರ್ಕಾರದಲ್ಲಿ ಕರ್ನಾಟಕದ ನಾಲ್ಕು ಜನ ಮಂತ್ರಿಗಳಿದ್ದರು. ಅವಾಗ ಕಾವೇರಿ ವಿಚಾರವಾಗಿ ಮಾತನಾಡಿದ್ರಾ” ಎಂದು ಪ್ರಶ್ನಿಸಿದರು.

ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, “ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರದ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಈ ಹಿಂದೆಯೇ ಹೇಳಿದ್ದೇನೆ. ಮೈತ್ರಿ ವಿಚಾರದ ಬಗ್ಗೆ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಮಾತನಾಡುತ್ತಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X