ಬನವಾಸಿ | ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ

Date:

ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33 ಚೀಲಗಳಲ್ಲಿ ತುಂಬಿದ್ದ ಒಟ್ಟು 1 ಟನ್ 750 ಕೆ.ಜಿ 4 ಗ್ರಾಂ (ಸುಮಾರು 17.5 ಕ್ವಿಂಟಲ್) ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

- Advertisement -

ಘಟನೆ ಜುಲೈ 26ರ ರಾತ್ರಿ ಬನವಾಸಿಯ ದಾಸನಕೊಪ್ಪ ಕ್ರಾಸ್ ಬಳಿ ನಡೆದಿದೆ. ತಹಶೀಲ್ದಾರರ ಸೂಚನೆಯ ಮೇರೆಗೆ ಆಹಾರ ಇಲಾಖೆಯ ಸಿಬ್ಬಂದಿ ಹಾಗೂ ಬನವಾಸಿ ಪೊಲೀಸ್ ಠಾಣೆಯ ಪಿಎಸ್‌ಐ ಮಹಾಂತಪ್ಪ ಕುಂಬಾರ್ ನೇತೃತ್ವದ ಪೊಲೀಸ್ ತಂಡ ಜಂಟಿ ಕಾರ್ಯಾಚರಣೆ ನಡೆಸಿ, ಮಹೇಂದ್ರ ಸುಪ್ರೊ ವಾಹನವನ್ನು ತಡೆದು ಪರಿಶೀಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಈ ಸುದ್ದಿ ಓದಿದ್ದೀರಾ? ಹಳಿಯಾಳ | ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಅಧಿಕಾರಿಗಳಿಗೆ ಶಾಸಕ ಆರ್.ವಿ. ದೇಶಪಾಂಡೆ ಸೂಚನೆ

ಈ ವೇಳೆ ವಾಹನದಲ್ಲಿ ಯಾವುದೇ ದಾಖಲೆ ಅಥವಾ ಪರವಾನಿಗೆ ಇಲ್ಲದೆ ಅನ್ನಭಾಗ್ಯ ಯೋಜನೆಯ 33 ಪ್ಲಾಸ್ಟಿಕ್ ಚೀಲಗಳಲ್ಲಿದ್ದ ಸರ್ಕಾರಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿರುವುದು ಪತ್ತೆಯಾಯಿತು. ವಾಹನ ಚಾಲಕ ಸಚಿನ್ ತಂದೆ ನಾಗರಾಜ ಗೌಡ (26), ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕೊರಕೋಡ-ಕುಪಗಡ್ಡೆ ನಿವಾಸಿಯಾಗಿದ್ದು,

ಬನವಾಸಿಯ ಕೋರ್ಲಕಟ್ಟ ಪ್ರದೇಶದಲ್ಲಿ ಸಾರ್ವಜನಿಕರಿಂದ ಕಡಿಮೆ ಬೆಲೆಗೆ ಪಡಿತರ ಅಕ್ಕಿಯನ್ನು ಸಂಗ್ರಹಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸೊರಬ ಕಡೆಗೆ ಸಾಗಿಸುತ್ತಿದ್ದ ಆರೋಪ ಕೇಳಿಬಂದಿದೆ. ಜಪ್ತಿ ಮಾಡಿದ 1 ಟನ್ 750 ಕೆ.ಜಿ 4 ಗ್ರಾಂ ತೂಕದ ಪಡಿತರ ಅಕ್ಕಿಯ ಮೌಲ್ಯ ₹59,501.36 ಎಂದು ಅಂದಾಜಿಸಲಾಗಿದ್ದು, ಸಾಗಾಟಕ್ಕೆ ಬಳಸಿದ್ದ ಮಹೇಂದ್ರ ಸುಪ್ರೊ ವಾಹನದ ಮೌಲ್ಯ ₹1.20 ಲಕ್ಷ ಎಂದು ಅಧಿಕಾರಿಗಳು ದಾಖಲಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಶಿರಸಿ ತಹಶೀಲ್ದಾರ ಕಚೇರಿಯ ಆಹಾರ ನಿರೀಕ್ಷಕಿ ಕವಿತಾ ಎಸ್. ಪಾಟಣಕರ ಅವರು ಪರಿಶೀಲನೆ ನಡೆಸಿ, ಜಪ್ತಿ ಮಾಡಿದ ಅಕ್ಕಿಯು ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯೇ ಎಂಬುದನ್ನು ಖಚಿತಪಡಿಸಿ ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಆರೋಪಿ ಸಚಿನ್ ನಾಗರಾಜ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಆನ್‌ಲೈನ್ : ದೇವಿ ದರ್ಶನಕ್ಕೆ ಟಿಕೆಟ್ ಹಾಗೂ ಪ್ರಸಾದ ಲಭ್ಯವಿದೆ 

₹300 ಮತ್ತು ₹1,000 ವಿಶೇಷ ದರ್ಶನ ಟಿಕೆಟ್ಭ ಕ್ತರಿಗೆ ತ್ವರಿತ ಹಾಗೂ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...

ಹಾಸನ | ಜನರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಶಾಸಕ ಎ.ಮಂಜು

ರಾಮನಾಥಪುರದ ಕಾವೇರಿ ನದಿಯ ವಹ್ನಿ ಪುಷ್ಕರಿಣಿಯಲ್ಲಿ ಮಂಗಳವಾರ ಹಾಸನ ಮತ್ತು ಕೊಡಗು...