ಚುನಾವಣೆ 2023 | ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಶಾಸಕ ಶ್ರೀನಿವಾಸ್‌ ಶೆಟ್ಟಿ

Date:

Advertisements
  • ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಿದ ಶ್ರೀನಿವಾಸ್‌ ಶೆಟ್ಟಿ
  • ಐದು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಹಾಲಿ ಶಾಸಕ

ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರು ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವಯಸ್ಸಿನ ನೆಪವೊಡ್ಡಿ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಶ್ರೀನಿವಾಸ್‌ ಶೆಟ್ಟಿ ಅವರ ನಡೆಗೆ ಸಾಮಾಜಿಕ ಜಾಲಜಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಕುಂದಾಪುರ ಕ್ಷೇತ್ರದಿಂದ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ನಾಲ್ಕು ಬಾರಿ ಬಿಜೆಪಿಯಿಂದ ಮತ್ತು ಒಂದು ಬಾರಿ ಪಕ್ಷೇತರರಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು.

Advertisements

”ನಾನು ಸ್ವಇಚ್ಛೆಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ನಾನು ಶಾಸಕನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ಅತ್ಯಂತ ನಿಷ್ಠೆಯಿಂದ ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ” ಎಂದು ಶ್ರೀನಿವಾಸ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ನನ್ನನ್ನು ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕುಂದಾಪುರದ ಎಲ್ಲ ಸಮುದಾಯದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ‌ಗಾಂಧಿ ಪ್ರತಿಮೆ ಎದುರು ಪಶ್ಚಾತ್ತಾಪ ಸತ್ಯಾಗ್ರಹ ನಡೆಸಿದ ಅಡಗೂರು ಎಚ್‌ ವಿಶ್ವನಾಥ್; ಬಿಜೆಪಿ ವಿರುದ್ಧ ಕಿಡಿ

”ಕುಂದಾಪುರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು, ಎಲ್ಲ ವರ್ಗದ ಮತದಾರರ ನೋವು, ನಲಿವುಗಳಿಗೆ ಸ್ಪಂದಿಸಿ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ನನಗಿದೆ” ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

”ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ, ಪ್ರಮುಖರಿಗೆ ಅಭಿಮಾನಿಗಳಿಗೆ ನಾನು ಯಾವತ್ತೂ ಚಿರಋಣಿ. ಈ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಬೆನ್ನಲ್ಲೇ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ನಾಯಕರ ಪಕ್ಷಾಂತರ, ಸ್ವಪಕ್ಷೀಯರ ಟಿಕೆಟ್‌ ಗುದ್ದಾಟ, ಚುನಾವಣಾ ರಾಜಕೀಯ ನಿವೃತ್ತಿ ಸೇರಿದಂತೆ ಅನೇಕ ಬೆಳವಣಿಗೆಗೆ ರಾಜ್ಯ ಸಾಕ್ಷಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X