ಉದಯನಿಧಿ ಪೂರ್ವಜರು ಕೂಡ ಸನಾತನ ಧರ್ಮದ ಬಗ್ಗೆ ಮಾತನಾಡಿದ್ದರು: ನಟ ಕಮಲ್ ಹಾಸನ್

Date:

Advertisements
  • ಕೊಯಮತ್ತೂರಿನಲ್ಲಿ ಮಕ್ಕಳ್ ನೀಧಿ ಮೈಯಂ ಪಕ್ಷದ ಸಭೆಯಲ್ಲಿ ಹೇಳಿಕೆ ನೀಡಿದ ಸ್ಥಾಪಕ
  • ಪೆರಿಯಾರ್ ಅವರನ್ನು ತಮಿಳುನಾಡು ತಮ್ಮವರು ಎಂದು ಹೇಳಿಕೊಳ್ಳಲಿ ಎಂದ ನಟ

ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ಬಲಪಂಥೀಯ ಸಂಘಟನೆ ಹಾಗೂ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿರುವ ತಮಿಳುನಾಡಿನ ಯುವಜನ ಮತ್ತು ಕ್ರೀಡಾ ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯ ವಿಚಾರವಾಗಿ ಮಾತನಾಡಿರುವ ಮಕ್ಕಳ್ ನೀಧಿ ಮೈಯಂ ಪಕ್ಷದ ಸ್ಥಾಪಕಾಧ್ಯಕ್ಷ, ಖ್ಯಾತ ನಟ ಕಮಲ್ ಹಾಸನ್, “ಸನಾತನ’ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಪೂರ್ವಜರು ಕೂಡ ಈ ಹಿಂದೆಯೇ ಮಾತನಾಡಿದ್ದರು” ಎಂದು ಅಭಿಪ್ರಾಯಿಸಿದ್ದಾರೆ.

ಕೊಯಮತ್ತೂರಿನಲ್ಲಿ ಇಂದು ನಡೆದ ಮಕ್ಕಳ್ ನೀಧಿ ಮೈಯಂ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು,”ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಇಂದು ಚಿಕ್ಕ ಮಗು (ಉದಯನಿಧಿ ಸ್ಟಾಲಿನ್) ಅವರನ್ನು ಗುರಿಪಡಿಸಿ, ಬೇಟೆಯಾಡಲಾಗುತ್ತಿದೆ. ಆತನ ಪೂರ್ವಜರು ‘ಸನಾತನ’ದ ಬಗ್ಗೆ ಮಾತನಾಡಿದ್ದಾರೆ. ನಮಗೆಲ್ಲರಿಗೂ ‘ಸನಾತನ’ ಪದದ ಬಗ್ಗೆ ತಿಳಿದಿದ್ದು ಪೆರಿಯಾರ್ ಅವರಿಂದ” ಎಂದು ಹೇಳಿದರು.

“ಪೆರಿಯಾರ್ ಅವರು ದೇವಸ್ಥಾನದಲ್ಲಿಯೂ ಕೆಲಸ ಮಾಡುತ್ತಿದ್ದರು. ಹಣೆಯಲ್ಲಿ ತಿಲಕವಿಟ್ಟು ವಾರಣಾಸಿಯಲ್ಲಿ ಪೂಜೆ ಮಾಡುತ್ತಿದ್ದರು. ಅದನ್ನೆಲ್ಲ ದೂರ ಮಾಡಿದ್ದಲ್ಲದೇ, ಜನಸೇವೆಯೇ ಎಲ್ಲಕ್ಕಿಂತ ಅತಿದೊಡ್ಡ ಸೇವೆ ಎಂದು ಅರಿತು ಇಡೀ ಜೀವನಪೂರ್ತಿ ಅದನ್ನೇ ಮಾಡಿಕೊಂಡು ಬಂದವರು. ಅವರಿಗೆ ಎಷ್ಟು ಸಿಟ್ಟು ಬಂದಿರಬಹುದು ಊಹಿಸಿ” ಎಂದ ಕಮಲ್ ಹಾಸನ್, “ಡಿಎಂಕೆ ಅಥವಾ ಯಾವುದೇ ಪಕ್ಷವೇ ಆಗಲಿ ಪೆರಿಯಾರ್ ಅನ್ನು ತಮ್ಮವರು ಎಂದು ಹೇಳಿಕೊಳ್ಳಬೇಡಿ. ಪೆರಿಯಾರ್ ಅವರನ್ನು ತಮಿಳುನಾಡು ತಮ್ಮವರು ಎಂದು ಹೇಳಿಕೊಳ್ಳಲಿ” ಎಂದು ನಟ, ರಾಜಕಾರಣಿ ಹೇಳಿದ್ದಾರೆ.

Advertisements

ಇತ್ತೀಚೆಗೆ ತಮಿಳುನಾಡಿನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಉದಯನಿಧಿ ಸ್ಟಾಲಿನ್, “ಕೆಲವು ವಿಷಯಗಳನ್ನು ನಾವು ವಿರೋಧಿಸುವ ಬದಲು ಅವುಗಳನ್ನು ನಿರ್ಮೂಲನೆ ಮಾಡುವುದೇ ಸರಿ. ನಾವು ಕೊರೋನಾ, ಡೆಂಗ್ಯೂ, ಮಲೇರಿಯಾದಂಥ ಸೋಂಕುಗಳನ್ನು ವಿರೋಧಿಸಬಾರದು. ಆರೋಗ್ಯ ಜಾಗೃತಿಯ ಮೂಲಕ ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನೂ ನಾವು ವಿರೋಧಿಸುವ ಬದಲು ಸಾಮಾಜಿಕ ಜಾಗೃತಿಯ ಮೂಲಕ ನಿರ್ಮೂಲನೆ ಮಾಡಬೇಕು” ಎಂದು ಹೇಳಿಕೆ ನೀಡಿದ್ದರು. ಇದು ಬಲಪಂಥೀಯರು ಹಾಗೂ ಬಿಜೆಪಿಯವರ ಕಣ್ಣು ಕೆಂಪಗಾಗಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X