ಯೋಗ್ಯತೆ ಇದ್ದರೆ ಕಾವೇರಿ ಸಮಸ್ಯೆ ಬಗೆಹರಿಸಿ, ಇಲ್ಲ ರಾಜೀನಾಮೆ ಕೊಟ್ಟು ಮನೆಗೆ ನಡೆಯಿರಿ: ಯಡಿಯೂರಪ್ಪ ಗುಡುಗು

Date:

Advertisements
  • ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ
  • ಸೋನಿಯಾ ಗಾಂಧಿ ಮಧ್ಯ ಪ್ರವೇಶಿಸಲಿ: ಬೊಮ್ಮಾಯಿ ಆಗ್ರಹ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಎಡವಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಶನಿವಾರ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆ ಮೂಲಕ ಬೃಹತ್‌ ಪ್ರತಿಭಟನೆ ನಡೆಸಿತು.

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ ಎಸ್‌ ಯಡಿಯೂರಪ್ಪ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಸಿ ಎನ್‌ ಅಶ್ವತ್ಥನಾರಾಯಣ, ಗೋಪಾಲಯ್ಯ ಸೇರಿದಂತೆ ಸಂಸತ್‌ ಸದಸ್ಯರು, ಶಾಸಕರು ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು‌ ಪ್ರತಿಭಟನೆಗೆ ಸಾಥ್ ನೀಡಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿ ಎಸ್‌ ಯಡಿಯೂರಪ್ಪ, “ಕಾಂಗ್ರೆಸ್‌ ಸರ್ಕಾರ ತಮಿಳುನಾಡಿನ ಏಜೆಂಟ್‌ರಂತೆ ವರ್ತಿಸುತ್ತಿದೆ. ಸುಪ್ರೀಂ ಕೋರ್ಟ್‌ ಹೇಳುವ ಮುಂಚೆಯೇ ನೀರು ಬಿಟ್ಟಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಯೋಗ್ಯತೆ ಇದ್ದರೆ ಕಾವೇರಿ ಸಮಸ್ಯೆ ಬಗೆಹರಿಸಿ, ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ನಡೆಯಿರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಸುಪ್ರೀಂ ಕೋರ್ಟ್‌ನಿಂದ ಒಂದು ಸಮಿತಿ ಬಂದು ಕಾವೇರಿ ಜಲಾನಯನ ಪ್ರದೇಶದ ಸಮೀಕ್ಷೆ ನಡೆಸಲಿ. ನೀರಿನ ಬಗ್ಗೆ ವಾಸ್ತವ ತಿಳಿದುಕೊಳ್ಳಲಿ. ಇಲ್ಲದಿದ್ದರೆ ಬರುವ ದಿನಗಳಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಆಗುತ್ತದೆ. ರಾಜ್ಯ ಸರ್ಕಾರದ ನಡೆಯಿಂದ ತಮಿಳುನಾಡಿಗೆ ಅನುಕೂಲವಾಗುತ್ತಿದೆ. ಕೂಡಲೇ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಾಸ್ತವ ಸಂಗತಿಯನ್ನು ಮನವರಿಕೆ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಕಾವೇರಿ ಕುರಿತು ನಮ್ಮ ಹೋರಾಟ ಬೆಂಗಳೂರು ಸುತ್ತಮುತ್ತಲೂ ನಡೆಯಲಿದೆ. ಸರ್ಕಾರದ ಆಡಳಿತ ವೈಖರಿ ಖಂಡಿಸಿ ಪ್ರತಿಭಟನೆ ಮುಂದುವರೆಸುತ್ತೇವೆ. ದೇವೇಗೌಡರು, ಕುಮಾರಸ್ವಾಮಿ ಈಗಾಗಲೇ ಈ ಬಗ್ಗೆ ಮಾತನಾಡಿದ್ದಾರೆ. ಕಾವೇರಿ ನೀರು ಖಾಲಿ ಆಗಿದೆ. ಕಾಂಗ್ರೆಸ್‌ ಮುಖಂಡರು ಮಾತ್ರ ತಮಿಳುನಾಡಿನ ಏಜೆಂಟ್‌ರಂತೆ ವರ್ತಿಸುವುದು ಬಿಡಬೇಕು” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಕಾವೇರಿ ಕೂಗಿಗೆ ಮಂಡ್ಯ ಸ್ತಬ್ದ; ಬಿಕೋ ಎನ್ನುತ್ತಿರುವ ನಗರ

ಸೋನಿಯಾ ಗಾಂಧಿ ಮಧ್ಯ ಪ್ರವೇಶಿಸಲಿ: ಬೊಮ್ಮಾಯಿ

“ರಾಜ್ಯದ ಅಭಿವೃದ್ಧಿ ಸಂಪೂರ್ಣ ನಾಶವಾಗಿದೆ. ನೆಲ, ಜಲ ರಕ್ಷಣೆಯಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ. ಕಾವೇರಿ ವಿಚಾರಕ್ಕೆ ರಾಜ್ಯ ಸರ್ಕಾರ ನಿರ್ಲಕ್ಯ ಮಾಡಿದ್ದರಿಂದ ನೀರು ಹರಿದು ಹೋಗುತ್ತಿದೆ. ಸರ್ಕಾರಕ್ಕೆ ಬದ್ಧತೆ ಎಂಬುದು ಇಲ್ಲ. ಬರುವ ದಿನಗಳಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾದರೆ ಅದರ ನೇರ ಜವಾಬ್ದಾರಿ ಸರ್ಕಾರ ಆಗಿರಲಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಹೋಗಬೇಕಾದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿಲ್ಲ. ಸರ್ವಪಕ್ಷದ ಸಭೆಯಲ್ಲಿ ನಮಗೆ ಸುಳ್ಳು ಹೇಳಿದ್ದಾರೆ. ಪದೇ ಪದೇ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ ಎಂದು ಕಾಂಗ್ರೆಸ್‌ ನವರು ಹೇಳುತ್ತಾರೆ. ಇದು ಕಾನೂನಿನಿಂದ ಬಗೆಹರಿಯಬೇಕಾದ ಸಮಸ್ಯೆ. ಕೇಂದ್ರ ಮಧ್ಯಸ್ಥಿಕೆ ವಹಿಸಲು ಬರುವುದಿಲ್ಲ. ಅಷ್ಟಕ್ಕೂ ಮಧ್ಯಸ್ಥಿಕೆ ಬೇಕಿದ್ದರೆ ಸೋನಿಯಾ ಗಾಂಧಿ ವಹಿಸಲಿ. ತಮಿಳುನಾಡು ಮತ್ತು ನಮ್ಮ ರಾಜ್ಯದ ಮುಖ್ಯಮಂತ್ರಿಗಳನ್ನು ಕರೆದು ಮಾತನಾಡಲಿ” ಎಂದರು.

“ತಮಿಳುನಾಡು ಅಕ್ರಮವಾಗಿ ನೀರಾವರಿ ಮಾಡುತ್ತಿದೆ. 32 ಟಿಎಂಸಿ ನೀರು ಬಳಸಬೇಕಿತ್ತು. ಆದರೆ, 62 ಟಿಎಂಸಿ ನೀರು ಬಳಕೆ ಮಾಡಿದ್ದಾರೆ. ನಮ್ಮ ವಕೀಲರು ಈ ಬಗ್ಗೆ ಹೇಳಬೇಕಿತ್ತು. ಆದರೆ, ಸಭೆಗಳಲ್ಲಿ ಈ ಬಗ್ಗೆ ಮಾತನಾಡಿಯೇ ಇಲ್ಲ. ಪದೇ ಪದೇ ರಾಜ್ಯ ಸರ್ಕಾರ ವಿಷಯ ಮನವರಿಕೆ ಮಾಡುವಲ್ಲಿ ಸೋತಿದೆ” ಎಂದು ಟೀಕಿಸಿದರು.

“ರೈತರು ಹೋರಾಟ ಮಾಡಿದರೆ ಅವರೇ ಸುಪ್ರೀಂ ಕೋರ್ಟ್‌ಗೆ ಹೋಗಲಿ ಎಂದು ಜಲಸಂಪನ್ಮೂಲ ಸಚಿವರು ಹೇಳುತ್ತಾರೆ. ಬ್ರ್ಯಾಂಡ್‌ ಬೆಂಗಳೂರು ಕನವರಿಕೆಯಲ್ಲಿರುವ ಸಚಿವರಿಗೆ ಮುಂದೆ ಅರಿವಾಗಲಿದೆ. ಸರ್ಕಾರದಲ್ಲಿ ತಾಳಮೇಳ ಇಲ್ಲ. ಡಿಕೆಶಿ ಮತ್ತು ಸಿದ್ದರಾಮಯ್ಯ ಅವರು ತಮಿಳುನಾಡಿನ ಹಿತಾಸಕ್ತಿ ಕಾಪಾಡಲು ನಮ್ಮ ರಾಜ್ಯದ ಹಿತಾಸಕ್ತಿ ಬಲಿಕೊಟ್ಟಿದ್ದಾರೆ. ಕಾವೇರಿ ವಿವಾದವನ್ನು ರಾಜಕೀಯವಾಗಿ ಪರಿವರ್ತನೆ ಮಾಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X