ಗದಗ | ಸಪ್ಟೆಂಬರ್‌ 26ರಿಂದ ಜಾನುವಾರುಗಳಿಗೆ ಲಸಿಕೆ ಹಾಕಿಸಿ : ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್

Date:

Advertisements

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಪ್ಟೆಂಬರ್‌ 26ರಿಂದ ಅಕ್ಟೋಬರ್‌ 25ರವರೆಗೆ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮ ನಡೆಯಲಿದೆ. ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದ್ದಾರೆ.

ಸಪ್ಟೆಂಬರ್‌ 22ರಂದು ಜಿಲ್ಲಾಡಳಿತ ಭವನದಲ್ಲಿ ʼರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣʼ ಕಾರ್ಯಕ್ರಮದಡಿ, 4ನೇ ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮದ ನಿರ್ವಹಣಾ ಸಮಿತಿಯ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಾಲುಬಾಯಿ, ಬೇನೆ ಲಸಿಕೆ ಹಾಕಿಸಲು ಜಾನುವಾರು ಮಾಲೀಕರು ತಮ್ಮಲ್ಲಿರುವ ತಪ್ಪು ಕಲ್ಪನೆಗಳನ್ನು ಬದಿಗೊತ್ತಿ, ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು. ಕಾಲುಬಾಯಿ – ಬೇನೆ ಲಸಿಕಾ ಕಾರ್ಯಕ್ರಮಕ್ಕೆ ಪಶು ಇಲಾಖೆಗೆ ಜೊತೆಗೆ ಗದಗ ಹಾಲು ಒಕ್ಕೂಟ ವ್ಯಾಪ್ತಿಯ ಸಿಬ್ಬಂದಿ ಹಾಗೂ  ಸ್ಥಳೀಯ ಸಂಸ್ಥೆಗಳ ಸಮನ್ವಯದಿಂದ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಲಸಿಕಾ ಕಾರ್ಯಕ್ರಮದ ಬಗ್ಗೆ ವ್ಯಾಪಕ ಪ್ರಚಾರ ಮಾಡುವ ಮೂಲಕ ರೈತರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

Advertisements

ಈ ವೇಳೆ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಬಿತ್ತಿಪತ್ರ ಬಿಡುಗಡೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಎಚ್.ಬಿ.ಹುಲಗಣ್ಣವರ, ಸೆಪ್ಟೆಂಬರ್‌ 26ರಿಂದ ಅಕ್ಟೋಬರ್ 25 ರವರೆಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ ನಿಗದಿಪಡಿಸಲಾಗಿದೆ. ಜಿಲ್ಲೆಯಲ್ಲಿ ಅಂದಾಜು 1,92,109 ಜಾನುವಾರುಗಳಿವೆ. 4ನೇ ಸುತ್ತಿನ ಲಸಿಕಾ ಅಭಿಯಾನದಲ್ಲಿ ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ರೈತರ ಮನೆ ಬಾಗಿಲಿಗೆ ಹೋಗಿ ಕಾಲುಬಾಯಿ ಲಸಿಕೆ ಹಾಕಲಿದ್ದಾರೆ. ಎಂದು ಮಾಹಿತಿ ನೀಡಿದರು.

ಪ್ರತಿ ತಾಲೂಕಿನಲ್ಲಿ ಗ್ರಾಮವಾರು ಲಸಿಕಾ ವೇಳಾ ಪಟ್ಟಿ ಮತ್ತು ಜಾನುವಾರು ಹೊಂದಿರುವ ರೈತರ ಮಾಹಿತಿಯನ್ನು ತಯಾರಿಸಲಾಗಿದೆ. ಗ್ರಾಮಗಳ ಹೆಸರು, ಜಾನುವಾರುಗಳ ಸಂಖ್ಯೆ, ಜಾನುವಾರು ಮಾಲೀಕರ ಹೆಸರು, ಮೊಬೈಲ್ ಸಂಖ್ಯೆ, ಆಧಾರ ಸಂಖ್ಯೆ, ಲಸಿಕಾದಾರರ ವಿವರ ಹಾಗೂ ಜಾನುವಾರುವಿನ ಕಿವಿ ಓಲೆ ವಿವರಗಳು ಲಭ್ಯವಿರುತ್ತವೆ. ಪ್ರತಿ ಗ್ರಾಮ ಅಥವಾ ನಗರ ಪ್ರದೇಶ 100 ರಿಂದ 120 ಜಾನುವಾರುಗಳಿಗೆ ಒಂದು ಬ್ಲಾಕ್ ಎಂದು ವರ್ಗೀಕರಿಸಿ, ಒಟ್ಟು 2,598 ಬ್ಲಾಕ್‍ಗಳಲ್ಲಿ ಲಸಿಕೆ ಹಾಕಲಿದ್ದಾರೆ. ಜಿಲ್ಲೆಗೆ ಸರಬರಾಜಾದಂತಹ ಪೋಸ್ಟರ್, ಬ್ಯಾನರ್‍ ಹಾಗೂ ಅವಶ್ಯವಿರುವ ತುರ್ತು ಔಷಧಿ ಮತ್ತು ರಾಸಾಯನಿಕಗಳನ್ನು ಹಂಚಿಕೆ ಮಾಡಲಾಗುವುದು.

 ಸಭೆಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳು, ಪಶು ಸಂಗೋಪನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಎಲ್ಲ ತಾಲೂಕಿನ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X