ಬೆಂ.ಗ್ರಾ | ಗೋಮಾಂಸ ಸಾಗಾಟಗಾರರ ಮೇಲೆ ಸಂಘಪರಿವಾರದವರ ವಿಕೃತ ಹಲ್ಲೆ

Date:

Advertisements

ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ತಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರ(ಐಬಿ) ವೃತ್ತದಲ್ಲಿ ಒಂದು ಕಾರಿಗೆ ಬೆಂಕಿ ಹಚ್ಚಿರುವ ಪ್ರಕರಣ ಭಾನುವಾರ ಬೆಳಿಗ್ಗೆ 5.40ರ ಸುಮಾರಿಗೆ ನಡೆದಿದೆ.

ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದ್ದು, ಹೆಚ್ಚಿನ ಅನಾಹುತ ನಡೆಯದಂತೆ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಶ್ರೀರಾಮ ಸೇನೆ ಕಾರ್ಯಕರ್ತರು ಸಾಗಾಟ ಮಾಡುತ್ತಿದ್ದವರ ತಲೆಯ ಮೇಲೆ‌ ಹಸುಗಳ ರುಂಡಗಳನ್ನು ಇರಿಸಿದ್ದು, ಜೈ ಶ್ರೀರಾಮ್‌ ಎಂಬ ಘೋಷಣೆ ಕೂಗಿದ್ದಾರೆ. ಗೋಮಾಂಸ ಸಾಗಿಸುತ್ತಿದ್ದವನ ಮೇಲೆ ಶ್ರೀರಾಮಸೇನೆ ಕಾರ್ಯಕರ್ತ ಹಲ್ಲೆ ನಡೆಸಿದ್ದು, ಈ ವೇಳೆ ಮಧ್ಯಪ್ರವೇಶಿಸಿದ ಪೋಲೀಸರು ಹಲ್ಲೆ ಮಾಡದಂತೆ ಸೂಚನೆ ನೀಡಿದರು.

Advertisements

ಗೋಮಾಂಸ ಸಾಗಿಸುತ್ತಿದ್ದ ವಾಹನ ತಡೆದು ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಪೊಲೀಸರು ಶ್ರೀರಾಮ ಸೇನೆಯ ಸುಮಾರು 20 ಮಂದಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತೆಂದು ತಿಳಿದುಬಂದಿದೆ.

ಘಟನಾ ಸ್ಥಳದಲ್ಲೇ ಎಸ್‌ಪಿ, ಎಎಸ್‌ಪಿ, ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್‌ಗಳು ಮೊಕ್ಕಾಂ ಹೂಡಿ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತ ಹಾಗೂ ಗುಂಜೂರು ಟೋಲ್‌ಗಳ ಸಿಸಿಟಿವಿ ಪರಿಶೀಲನೆ ನಡೆಸಿದರು.

ಘಟ‌ನೆಯ ಬಗ್ಗೆ ಇಂಚಿಂಚೂ ಪರಿಶೀಲನೆ ನಡೆಸಿದ್ದು, ಕಾರ್ಯಕರ್ತರ ಪೋನ್‌ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಶ್ರೀರಾಮಸೇನೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಕ್ಕೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಗೋಮಾಂಸ ಸಾಗಿಸುತ್ತಿದ್ದ ವಾಹನ ಚಾಲಕರ ತಲೆಯ ಮೇಲೆ ಗೋಮಾಂಸವನ್ನು ಇಟ್ಟು ಪ್ರವಾಸಿ ಮಂದಿರ ವೃತ್ತದಲ್ಲಿ ಮೆರವಣಿಗೆ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಎರಡೂ ಕಡೆಯವರನ್ನು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಸಂಪರ್ಕಿಸಿದಾಗ, “ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ ಇಂಡಿಕಾ ಕಾರಿನಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು. ಇದನ್ನು ತಿಳಿದ ಶ್ರೀರಾಮಸೇನೆ ಕಾರ್ಯಕರ್ತರು ವಾಹನವನ್ನು ತಡೆದಿದ್ದು, ತಪಾಸಣೆ ನಡೆಸಿದ ವೇಳೆ ಗೋಮಾಂಸ ಪತ್ತೆಯಾಗಿದೆ” ಎಂದು ಹೇಳಿದರು.

“ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳು ಹಾಗೂ ಚಾಲಕರು ಸೇರಿದಂತೆ 19 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಇದರ ಹಿಂದಿನ ಜಾಲವನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಪೂರ್ಣ ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಪ್ರತಿಕ್ರಿಯಿಸಿದರು.

ಈ ಸುದ್ದಿ ಓದಿದ್ದೀರಾ? ಏನೇನಕ್ಕೋ ಜೈಲಿಗೆ ಹೋಗ್ತಿರಾ ರಾಜ್ಯದ ಹಿತಕ್ಕಾಗಿ ಜೈಲಿಗೆ ಹೋಗಲು ಆಗಲ್ಲವಾ?: ಮುಖ್ಯಮಂತ್ರಿ ಚಂದ್ರು

“ಬಂಧಿತ ಆರೋಪಿಗಳ ಪೈಕಿ ಇಬ್ಬರು ನಮ್ಮ ರಾಜ್ಯದವರಾಗಿದ್ದು, 17 ಮಂದಿ ಆಂಧ್ರಪ್ರದೇಶದ ಹಿಂದೂಪುರ ಮೂಲದವರೆಂದು ತಿಳಿದುಬಂದಿದೆ. ಪ್ರಕರಣದಲ್ಲಿ ಉಳಿದಂತೆ ಯಾರಿದ್ದಾರೆಂಬುದನ್ನು ತನಿಖೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಘಟನೆ ವೇಳೆ ಸ್ಥಳದಲ್ಲಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಗೆ ಸಂಬಂಧಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, “ಘಟನೆಯ ಆರಂಭದಲ್ಲಿ ಕೆಲವು ನಿಮಿಷ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಆದರೆ ನಮ್ಮ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಿ ಗುಂಪುಗೂಡಿದ್ದ ಜನರನ್ನು ಚದುರಿಸಿದ್ದಾರೆ. ಇದೀಗ ಯಾವುದೇ ಸಮಸ್ಯೆ ಇಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ ರೈತ ಹೋರಾಟ | ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಒಗ್ಗಟ್ಟು ಪ್ರದರ್ಶನ: ಭೂಮಿ ಕೊಡಲ್ಲ ಎಂದು ಸಹಿ

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ಹೋರಾಟ ಇಂದಿಗೆ(ಜುಲೈ14)...

ದೇವನಹಳ್ಳಿ ಭೂ ಸ್ವಾಧೀನ | ಎಕರೆಗೆ ₹3 ಕೋಟಿ ಕೊಟ್ಟರೆ ಜಮೀನು ಕೊಡಲು ಸಿದ್ಧ: ಭೂಸ್ವಾಧೀನ ಬೆಂಬಲ ಸಮಿತಿ

ಒಂದು ಕಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿ...

ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸ್ಥಳಕ್ಕೆ ದೆಹಲಿ ರೈತ ಹೋರಾಟಗಾರರ ಭೇಟಿ, ಚರ್ಚೆ

ದೇಶಾದ್ಯಂತ ಎಲ್ಲೆಡೆ ಕೃಷಿ ಭೂಮಿಯನ್ನು ಭೂ ಸ್ವಾಧೀನ ಮಾಡುತ್ತಿದ್ದಾರೆ. ಭೂಮಿಗಾಗಿ ಕೃಷಿಕರನ್ನು...

ನೈಸ್ ರಸ್ತೆ: 300 ಎಕರೆಗೂ ಹೆಚ್ಚು ಭೂ ಸ್ವಾಧೀನ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು-ಮೈಸೂರು ನಡುವಿನ 111 ಕಿ.ಮೀ ಉದ್ದದಲ್ಲಿ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ರ್ಪ್ರೈಸಸ್...

Download Eedina App Android / iOS

X