ಬೆಂಗಳೂರು | ಮುಸ್ಲಿಂ ಸಮುದಾಯ ಮತ ಕೊಡಲಿಲ್ಲವೆಂದು ಜೆಡಿಎಸ್ ಶಾಸಕರು ಹೇಳಲಿ: ಜಮೀರ್ ಅಹಮದ್ ಖಾನ್

Date:

Advertisements

ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ. ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲವೆಂದು ಹೇಳುವ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದರು ಎಂಬುದನ್ನು ಹೇಳಲಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, “ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡದಿದ್ದರೆ ಇವರು ಗೆಲ್ಲುತ್ತಿದ್ದರೆ ಎಂಬುದನ್ನು ಎದೆ ಮುಟ್ಟಿಕೊಂಡು ಹೇಳಲಿ. ಹಾಗೆಯೇ ಹೊಳೆನರಸೀಪುರದಲ್ಲಿ ಎಚ್‌ ಡಿ ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿಕ್ಕನಾಯಕನಹಳ್ಳಿ ಸುರೇಶ್ ಬಾಬು, ಗುರುಮಿಠಕಲ್ ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ, ಚನ್ನರಾಯಪಟ್ಟಣ ಬಾಲಕೃಷ್ಣ ಇವರೆಲ್ಲ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲವೆಂದು ಹೇಳಲಿ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲಲಿಲ್ಲ. ಅಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಕೊಟ್ಟಿದ್ದಕ್ಕೆ ಗೆದ್ದಿದ್ದು. ಇಲ್ಲದಿದ್ದರೆ ಸೋಲುತ್ತಿದ್ದರು. ಮುಸ್ಲಿಂ ಸಮುದಾಯ ಜೆಡಿಎಸ್‌ಗೆ ಮತ ಕೊಟ್ಟಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5ರಿಂದ 6 ಸ್ಥಾನಗಳು ಬರುತ್ತಿದ್ದವು” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

“ಹೆಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಜತೆ ಹೋಗುವ ಸಲುವಾಗಿ ಮುಸ್ಲಿಂ ಮತ ಕೊಡಲಿಲ್ಲವೆಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ. ಇದು ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ” ಎಂದು ಜಮೀರ್ ಅಹಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾನು ಅಪಾರವಾಗಿ ಗೌರವಿಸುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಇದ್ದವರು. ಆದರೆ, ಕುಮಾರಸ್ವಾಮಿ ತಮ್ಮ ರಾಜಕಾರಣಕ್ಕೆ ಗೌಡರ ತತ್ವ ಸಿದ್ಧಾಂತ ಬಲಿ ಕೊಟ್ಟಿದ್ದಾರೆ” ಎಂದು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X