ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ; ರಾಜ್ಯಾದ್ಯಂತ ಏಕ ಕಾಲಕ್ಕೆ ʼಜನತಾ ದರ್ಶನ’

Date:

Advertisements
  • ಪ್ರತಿ ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ
  • ಪ್ರತಿ ಹದಿನೈದು ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳಿಂದ ಜನತಾ ದರ್ಶನ

ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ರಾಜ್ಯದಾದ್ಯಂತ ಏಕ ಕಾಲಕ್ಕೆ ಪ್ರತಿ ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಮತ್ತು ಪ್ರತಿ ಹದಿನೈದು ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳಿಂದ ʼಜನತಾ ದರ್ಶನʼ ನಡೆಸಲು ಸೂಚಿಸಿದ್ದು, ಸೋಮವಾರ ಈ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ.

“ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯುತ್ ಕಂಬ ಅಳವಡಿಕೆಯಂತಹ ಸಣ್ಣ ಪುಟ್ಟ ಕೆಲಸಗಳಿಗೂ ಜನ ನನ್ನ ಬಳಿಗೆ ಬರುತ್ತಿದ್ದಾರೆ. ನಾನು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಜನರು ಇಷ್ಟು ಸಣ್ಣ ಪುಟ್ಟ ಕೆಲಸಗಳಿಗೂ ನನ್ನನ್ನು ಹುಡುಕಿಕೊಂಡು ಬರುವಂತಾಗಿದೆ ಎಂದರೆ ನೀವುಗಳಿದ್ದೂ ಏನು ಪ್ರಯೋಜನ” ಎಂದು ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಪ್ರಶ್ನಿಸಿದ್ದರು. ಬಳಿಕ ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲೂ ಜನತಾ ದರ್ಶನ ನಡೆಸಬೇಕು ಎನ್ನುವ ಸೂಚನೆ ನೀಡಿದ್ದರು.

ಜನತಾ ದರ್ಶನದ ಯಶಸ್ಸಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಹೇಳಿದ್ದಾರೆ.

Advertisements

ಕಾರ್ಯ ಹೇಗೆ?

ಪ್ರತಿ ಜಿಲ್ಲೆಯಲ್ಲೂ ಜನತಾ ದರ್ಶನ ನಡೆಯುವ, ನಡೆಸುವ ಬಗ್ಗೆ ಸಾರ್ವಜನಿಕರಿಗೆ ಈಗಾಗಲೇ ತಿಳಿವಳಿಕೆ ನೀಡಲಾಗಿದೆ. ನಿಗದಿತ ಸ್ಥಳದಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಜನತಾ ದರ್ಶನ ಆರಂಭವಾಗಬೇಕು ಎನ್ನುವ ಸೂಚನೆ ಸರ್ಕಾರದ ಕಡೆಯಿಂದ ಹೋಗಿದೆ. ಇಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಈ ಅಹವಾಲುಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವುದು ಪ್ರಥಮ ಆದ್ಯತೆಯಾಗಿರುತ್ತದೆ.

ತಾಂತ್ರಿಕ ಕಾರಣಗಳಿಂದ ಇದು ಸಾಧ್ಯವಾಗದಿದ್ದರೆ ಸಾರ್ವಜನಿಕರ ಅಹವಾಲುಗಳು ಸ್ಥಳದಲ್ಲೇ ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ವರ್ಗಾವಣೆಗೊಳ್ಳುತ್ತವೆ. ಎಲ್ಲದಕ್ಕೂ ಕಾಲ ಮಿತಿಯಲ್ಲಿ ಪರಿಹಾರ ಒದಗಿಸುವ ಮತ್ತು ಸಾರ್ವಜನಿಕರು ನೀಡಿದ ಅಹವಾಲಿನ ಸ್ಥಿತಿಗತಿಯನ್ನು ಅರ್ಜಿದಾರರಿಗೆ ಮನವರಿಕೆ ಮಾಡಿಸುವ ಜವಾಬ್ದಾರಿ ಕೂಡ ಜಿಲ್ಲಾಡಳಿತದ ಮೇಲೆ ಇರುತ್ತದೆ.

ಈ ಸುದ್ದಿಓದಿದ್ದೀರಾ? ಹೆಣ್ಣುಮಕ್ಕಳಿಗೆ ಟಿಕೆಟ್‌ ಕೊಡಲು ಕಾರ್ಯಕರ್ತರು ಒಪ್ಪಲ್ಲ; ನಯನಾ ಆರೋಪಕ್ಕೆ ಸಿದ್ದರಾಮಯ್ಯ ಉತ್ತರ

ಅಹವಾಲು ಎಲ್ಲಿ ದಾಖಲಾಗುತ್ತವೆ?

ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕರ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್‌ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಾಗುತ್ತದೆ ಮತ್ತು ಇಲ್ಲಿಂದಲೇ ಸಂಬಂಧಪಟ್ಟ ಇಲಾಖೆಯ ಟೇಬಲ್ಲಿಗೆ ಅರ್ಜಿಗಳ ವಿಲೇವಾರಿಯೂ ನಡೆಯುತ್ತದೆ. ಬಳಿಕ ಕಾಳಜಿ ವಹಿಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎನ್ನುವ ಸೂಚನೆ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ರವಾನೆಯಾಗಿದೆ.

ತಾಲ್ಲೂಕು ಮಟ್ಟದ ಜನತಾ ದರ್ಶನ

ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಜನತಾ ದರ್ಶನ ಸಭೆ ನಡೆದ ಬೆನ್ನಲ್ಲೇ ಪ್ರತಿ ಹದಿನೈದು ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ಒಂದು ತಾಲ್ಲೂಕನ್ನು ಆರಿಸಿಕೊಂಡು ತಾಲ್ಲೂಕು ಮಟ್ಟದ ಜನತಾ ದರ್ಶನ ಸಭೆ ನಡೆಸಬೇಕು ಎನ್ನುವ ಆದೇಶವನ್ನೂ ಈಗಾಗಲೇ ಮುಖ್ಯಮಂತ್ರಿಗಳ ಸೂಚನೆಯಂತೆ, ಅಪರ ಮುಖ್ಯ ಕಾರ್ಯದರ್ಶಿ ಆಗಿರುವ ರಜನೀಶ್ ಗೋಯಲ್ ಅವರು ಹೊರಡಿಸಿದ್ದಾರೆ.

ಸಾರ್ವಜನಿಕರು ಪದೇ ಪದೇ ಸಣ್ಣ ಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾ ಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದು ತಪ್ಪುತ್ತದೆ. ಅರ್ಜಿದಾರರ ದೂರು ಸತ್ಯವಾಗಿದ್ದು, ಯಾವುದೇ ದುರುದ್ದೇಶದಿಂದ ಕೂಡಿರದಿದ್ದರೆ ಅಂತಹ ಅರ್ಜಿಗಳಿಗೆ ಸೂಕ್ತ ಪರಿಹಾರ ಒದಗಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಯನ್ನು ಇದಕ್ಕೆ ಹೊಣೆಗಾರರನ್ನಾಗಿಸಿ ಸರ್ಕಾರ ಕ್ರಮ ಜರುಗಿಸಲಿದೆ ಎಂದು ಎಚ್ಚರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X