- ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾದ ಸರ್ಕಾರ
- ಸಾರಾಯಿ ಮೂಲಕ ಸರ್ಕಾರದಿಂದ ಮನಿ ರಿಟರ್ನ್ ಪಾಲಿಸಿ
ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಸರ್ಕಾರಿ ಮದ್ಯದಂಗಡಿ ತೆರೆಯುತ್ತಿರುವುದಾಗಿ ಅಬಕಾರಿ ಸಚಿವರು ಹೇಳಿರುವುದು ಹಾಸ್ಯಾಸ್ಪದ. ಅಕ್ರಮ ತಡೆಯಲಾಗದಿದ್ದರೆ ನಿಮ್ಮ ಇಲಾಖೆ ಮಾಡುವುದಾದರೂ ಏನು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯದಂಗಡಿ ತೆರೆಯಲು ಮುಂದಾಗಿರುವುದು ಸರ್ಕಾರದ ನೈತಿಕ ದಿವಾಳಿತನ ತೋರಿಸುತ್ತದೆ. ಒಂದೆಡೆ ಗ್ಯಾರಂಟಿ ಹೆಸರಲ್ಲಿ ಮಹಿಳೆಯರಿಗೆ 2000 ರೂ. ನೀಡುವುದಾಗಿ ಹೇಳುವ ಸರ್ಕಾರ ಅದೇ ಹಣವನ್ನು ಅವರ ಗಂಡಂದಿರಿಂದ ವಸೂಲಿ ಮಾಡಲು ಮದ್ಯ ಮಾರಾಟದ ಮಾರ್ಗ ಹುಡುಕಿಕೊಂಡಂತಿದೆ. ಹೆಂಡತಿಯ ದುಡ್ಡು ಗಂಡಂದಿರಿಂದ ಪಡೆಯುವ ಮನಿ ರಿಟರ್ನ್ ಪಾಲಿಸಿ ಹಾಕಿಕೊಂಡ ಹಾಗಿದೆ” ಎಂದು ಟೀಕಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಪೌರಕಾರ್ಮಿಕರು ಪರಮಶೋಷಿತರು; ಸರ್ಕಾರ, ನಾವು-ನೀವು, ಎಲ್ಲರೂ ಕಾರಣ
“ಗ್ಯಾರಂಟಿ ಯೋಜನೆಯಲ್ಲಿ ಮನೆ ಯಜಮಾನಿ ಹುಡುಕುವ ಹೆಸರಲ್ಲಿ ಅತ್ತೆ ಸೊಸೆ ನಡುವೆ ಜಗಳ ಹಚ್ಚಿರುವ ಸರ್ಕಾರ ಇನ್ನು ಸಾರಾಯಿ ಕುಡಿಯಲು ಹಣಕ್ಕಾಗಿ ಗಂಡ ಹೆಂಡಿರ ನಡುವೆ ಜಗಳ ಹಚ್ಚಲು ಮುಂದಾಗಿದೆ. ಸರ್ಕಾರ ಆದಾಯ ಗಳಿಸಲು ಮದ್ಯ ಮಾರಾಟ ಮೊರೆ ಹೋದರೆ, ಸರ್ಕಾರದ ಗ್ಯಾರಂಟಿ ಪಡೆಯುವ ಮಹಿಳೆಯರೇ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ. ಬರಗಾಲದಲ್ಲಿ ನೀರು ಕೊಡದಿರುವ ಸರ್ಕಾರ ಸಾರಾಯಿ ಕುಡಿಸಲು ಮುಂದಾಗಿರುವುದು ದೊಡ್ಡ ದುರಂತ. ಇದು ಸಾರಾಯಿ ಗ್ಯಾರಂಟಿ ಸರ್ಕಾರ” ಎಂದು ಕಿಡಿಕಾರಿದ್ದಾರೆ.