ಮೂರನೇ ಬಾರಿಗೆ ಮುಖ್ಯಮಂತ್ರಿಯಾಗುವ ಉದ್ದೇಶ ನನಗಿಲ್ಲ: ಎಚ್‌ ಡಿ ಕುಮಾರಸ್ವಾಮಿ

Date:

Advertisements
  • ಹಾಸನದಲ್ಲಿ ಗೊಂದಲಗಳಿಲ್ಲ ಎಂದ ಕುಮಾರಸ್ವಾಮಿ
  • ಮಂಡ್ಯದಲ್ಲಿ ಜೆಡಿಎಸ್‌ ಸೋಲಿಗೆ ಷಡ್ಯಂತ್ರ ನಡೆಯುತ್ತಿದೆ

ಬಹಳ ಮಂದಿ ನಾನು ಮುಖ್ಯಮಂತ್ರಿಯಾಗಲು ಕಷ್ಟಪಡುತ್ತಿದ್ದೇನೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ, ನನಗೆ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗುವ ಯಾವ ಉದ್ದೇಶವೂ ಇಲ್ಲ ಎಂದು ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದ ಕೆ ಆರ್‌ ಪೇಟೆಯಲ್ಲಿ ಮಾತನಾಡಿರುವ ಎಚ್‌ ಡಿ ಕುಮಾರಸ್ವಾಮಿ, “ಈಗಾಗಲೇ ನನಗೆ 2 ಬಾರಿ ಹೃದಯ ಶಸ್ತ್ರಚಿಕಿತ್ಸೆಯಾಗಿದೆ. ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. 3ನೇ ಬಾರಿಗೆ ಮುಖ್ಯಮಂತ್ರಿ ಆಗುವ ಉದ್ದೇಶ ನನಗಿಲ್ಲ” ಎಂದು ಭಾವನಾತ್ಮಕವಾಗಿ ನುಡಿದಿದ್ದಾರೆ.

“ನಾನು 3ನೇ ಬಾರಿಗೆ ಮುಖ್ಯಮಂತ್ರಿಯಾಗಲು ಕಷ್ಟಪಡುತ್ತಿದ್ದೇನೆ ಎಂದು ಬಹಳಷ್ಟು ಮಂದಿ ಭಾವಿಸಿದ್ದಾರೆ. ಎಷ್ಟು ಬಾರಿ ಮುಖ್ಯಮಂತ್ರಿಯಾದರೂ ಮಣ್ಣಿಗೆ ಹೋಗುವಾಗ ನಾನು ಮಾಜಿ ಮುಖ್ಯಮಂತ್ರಿಯೇ. ನನ್ನ ಹೋರಾಟ ಮುಖ್ಯಮಂತ್ರಿ ಹುದ್ದೆಗಾಗಿ ಅಲ್ಲ. ನನ್ನ ಹೋರಾಟ ಬಡವರ ಪರ” ಎಂದು ಹೇಳಿದ್ದಾರೆ.

Advertisements

ತಮಗೆ ಜಾತಿ ವ್ಯಾಮೋಹ ಇಲ್ಲ ಎಂದಿರುವ ಕುಮಾರಸ್ವಾಮಿ, ಸಿಕ್ಕ ಅವಕಾಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಂದಿದ್ದಾರೆ.

ಜೆಡಿಎಸ್‌ ಎರಡನೇ ಪಟ್ಟಿ ಬಿಡುಗಡೆ ಕುರಿತು ಮಂಗಳವಾರ ಮಾತನಾಡಿರುವ ಅವರು, “ನೆನ್ನೆ ಕೆ ಆರ್‌ ಪೇಟೆಯಲ್ಲಿ ಕಾರ್ಯಕ್ರಮ ಇದ್ದ ಕಾರಣ ಎರಡನೇ ಪಟ್ಟಿ ಬಿಡುಗಡೆಯಾಗಿಲ್ಲ. ಇದರಲ್ಲಿ ಯಾವುದೇ ಗೊಂದಲ ಇಲ್ಲ” ಎಂದಿದ್ದಾರೆ.

ಹಾಸನ ಟಿಕೆಟ್‌ ಗೊಂದಲದ ಬಗ್ಗೆ ಮಾತನಾಡಿ, “ಹಾಸನ ವಿಷಯದಲ್ಲಿ ಯಾವುದೇ ಸಮಸ್ಯೆಯಿಲ್ಲ” ಎಂದು ಹೇಳಿದ್ದಾರೆ.

ಭವಾನಿ ರೇವಣ್ಣ ಅವರ ಜಟಾಪಟಿ ವಿಚಾರದಲ್ಲಿ ಅನಿತಾ ಕುಮಾರಸ್ವಾಮಿ ಅವರ ಹೆಸರು ಕೇಳಿಬಂದಿದೆ. ‘ಸೊಸೆಯಂದಿರ ಜಗಳ’ ಎನ್ನುವ ಮಟ್ಟಿಗೂ ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿವೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ಟಿಕೆಟ್‌ ಆಕಾಂಕ್ಷಿಗಳ ತಲೆ ಬಿಸಿ; ಅಭ್ಯರ್ಥಿಗಳ ಪಟ್ಟಿ ಶಿಫಾರಸಿಗೆ ಇನ್ನಿಲ್ಲದ ಕಸರತ್ತು

ಈ ಕುರಿತು ಮಾತನಾಡಿದ ಕುಮಾರಸ್ವಾಮಿ, “ದೇವೇಗೌಡರ ಸೊಸೆಯಂದಿರ ನಡುವೆ ಹೊಡೆದಾಟ ಇಲ್ಲ. ಹಾಸನ ಜಿಲ್ಲಾ ರಾಜಕಾರಣವೇ ಬೇರೆ ನನ್ನ ಹೆಂಡತಿಯ ರಾಜಕಾರಣವೇ ಬೇರೆ. ಪಕ್ಷ ಉಳಿಸುವ ಉದ್ದೇಶದಿಂದ ಅನಿತಾ ಅವರನ್ನು ರಾಜಕೀಯಕ್ಕೆ ಕರೆತಂದೆವು. ಈ ಎರಡಕ್ಕೂ ತಾಳೆ ಹಾಕಬೇಕಿಲ್ಲ” ಎಂದು ಹೇಳಿದ್ದಾರೆ.

“ಅನಿತಾ ಅವರನ್ನು ಎರಡು ಮೂರು ಬಾರಿ ಪಕ್ಷದ ಅಭ್ಯರ್ಥಿ ಇಲ್ಲದೇ ಇದ್ದಾಗ ನಿಲ್ಲಿಸಲಾಗಿತ್ತಷ್ಟೆ ಹೊರತು ಅವರಿಗೆ ಆಸಕ್ತಿಯಿರಲಿಲ್ಲ. ಕಾರ್ಯಕರ್ತರು ಮತ್ತು ದೇವೇಗೌಡರ ಸೂಚನೆ ಒತ್ತಡ ಮೇರೆಗೆ ಅನಿತಾ ಚುನಾವಣೆಗೆ ನಿಂತು ಗೆದ್ದರು” ಎಂದಿದ್ದಾರೆ.

“ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಆಸಕ್ತಿಯಿರಲಿಲ್ಲ. ಈಗ ತಮ್ಮ ಕ್ಷೇತ್ರವನ್ನು ನಿಖಿಲ್‌ಗೆ ಬಿಟ್ಟುಕೊಟ್ಟು ಅವರು ದೂರ ಉಳಿದಿದ್ದಾರೆ” ಎಂದು ಹೇಳಿದ್ದಾರೆ.

“ಮಂಡ್ಯದಲ್ಲಿ ಜೆಡಿಎಸ್‌ ಸೋಲಿಸಲು ಕಾಂಗ್ರೆಸ್, ರೈತ ಸಂಘಗಳು ಒಟ್ಟಾಗುತ್ತಿವೆ ಇದನ್ನು ನೋಡುತ್ತಿದ್ದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಡಿದ ಷಡ್ಯಂತ್ರ ನೆನಪಾಗುತ್ತದೆ. ಈ ಬಾರಿ ಕೂಡ ಮುಂದುವರಿಸಿದ್ದಾರೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X