ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ‘ಚಡ್ಡಿ’ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯದ ಬಿಜೆಪಿ ಕಚೇರಿಯಿಂದ ಚಡ್ಡಿ ಮೆರವಣಿಗೆ ಆರಂಭಿಸಿದ ಬಿಜೆಪಿಗರು ನಗರದ ಪ್ರಮುಖ ಬೀದಿಗಳಲ್ಲಿ ಜಾನುವಾರುಗಳೊಂದಿಗೆ ಚಡ್ಡಿ ಮೆರವಣಿಗೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮತ್ತು ಮಾಜಿ ಉಪಮುಖ್ಯಮಂತ್ರಿ ಅಶ್ವಥ ನಾರಾಯಣ ಭಾಗಿಯಾಗಿದ್ದರು.
“ಯಾವುದೇ ಆದೇಶ ಇಲ್ಲದಿದ್ದರೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾಂಗ್ರೆಸ್ ಸರ್ಕಾರ ದುಡುಕಿನ ನಿರ್ಧಾರ ತೆಗೆದುಕೊಂಡಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಧೋರಣೆಯಿಂದ ಕೆಆರ್‌ಎಸ್‌ನಲ್ಲಿ ನೀರಿಲ್ಲದೆ ಬರಿದಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್ ಎದುರು ವಾಸ್ತವ ಪರಿಸ್ಥಿತಿಯನ್ನು ಮುಂದಿಟ್ಟು, ಅರ್ಥ ಮಾಡಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರಾಧಿಕಾರದ ಅಧಿಕಾರಿಗಳು ರಾಜ್ಯದ ಭೇಟಿ ನೀಡಿ, ಪರಿಶೀಲನೆ ನಡೆಸದೇ ಆದೇಶ ನೀಡಿದ್ದಾರೆ. ಇದು ಸರಿಯಾದ ನಡೆಯಲ್ಲ” ಎಂದು ಕಿಡಿಕಾರಿದ್ದಾರೆ.
ಚಡ್ಡಿ ಮೆರವಣಿಗೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಸ್ ಉಮೇಶ್. ಸಿದ್ದರಾಮಯ್ಯ, ಸಚ್ಚಿದಾನಂದ, ಡಾ. ಇಂದ್ರೇಶ್, ಕೆ.ಕೃಷ್ಣಪ್ಪ, ಸಾದೊಳಲು ಸ್ವಾಮಿ ಇದ್ದರು.