ಅಧಿಕಾರಿಗಳು ಹೃದವಂತಿಕೆಯಿಂದ ಜನರ ಸಮಸ್ಯೆ ಬಗೆಹರಿಸಬೇಕು. ಜನತಾದರ್ಶನದ ಎಲ್ಲ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದರು.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜನತಾದರ್ಶನ ಉದ್ಘಾಟಿಸಿ ಮಾತನಾಡಿದರು.
“ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು. ಕಾನೂನಿನನ್ವಯ ಯಾವ ಸಮಸ್ಯೆಗಳಿಗೆಲ್ಲ ಪರಿಹಾರ ನೀಡಲು ಸಾಧ್ಯವೋ ಅದೆಲ್ಲಕ್ಕೂ ಕೂಡಲೇ ಪರಿಹಾರ ಸೂಚಿಸುವ ಕೆಲಸವಾಗಬೇಕು” ಎಂದರು.
ಕಂದಾಯ, ಅರಣ್ಯ, ಪೊಲೀಸ್, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಸಾಕಷ್ಟು ಕಡತಗಳು ಬಾಕಿ ಇವೆ. ಕಡತವು ಒಂದು ಟೇಬಲ್‌ನಿಂದ ಇನ್ನೊಂದು ಟೇಬಲ್‌ಗೆ ಹೋಗುತ್ತಿರಬಾರದು. ಎಲ್ಲದಕ್ಕೂ ವಿಲೇವಾರಿ ಮೂಲಕ ಪರಿಹಾರ ನೀಡಬೇಕು” ಎಂದು ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾರ್ವಜನಿಕರ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಜನತಾ ದರ್ಶನ: ಸಚಿವ ಶರಣಪ್ರಕಾಶ ಪಾಟಿಲ್
ಈ ವೇಳೆ ಅಪರ ಜಿಲ್ಲಾಧಿಕಾರಿ ಮಮತಾದೇವಿ, ಜಿ.ಪಂ ಸಿಇಒ ಪ್ರಸನ್ನ ಎಚ್, ಎಸ್‌ಪಿ ಡಾ. ಅರುಣ್, ಉಪವಿಭಾಗ ಆಯುಕ್ತೆ ರಶ್ಮಿ ಸಹಿತ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಸಾರ್ವಜನಿಕರು ಇದ್ದರು.