ಜನತಾ ದರ್ಶನಕ್ಕೆ ಉತ್ತಮ ಸ್ಪಂದನೆ; 6,684 ಅಹವಾಲು, ಮನವಿ ಸ್ವೀಕೃತ

Date:

Advertisements
  • ರಾಜ್ಯಾದ್ಯಂತ ಏಕ ಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲೂ ನಡೆದ ಜನತಾ ದರ್ಶನ
  • ಸ್ವೀಕರಿಸಿದ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು
  • ಮಾಜಿ ಸಿಎಂ ಬೊಮ್ಮಾಯಿ ಅವರ ಜಿಲ್ಲೆಯಲ್ಲಿ ಹೆಚ್ಚು ಅಹವಾಲು ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕ‌ಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ರಾಜ್ಯಾದ್ಯಂತ 6,684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡಿವೆ.

ಅನಿವಾರ್ಯ ಕಾರಣಗಳಿಂದ ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಜನತಾ ದರ್ಶನ ನಡೆಯಲಿಲ್ಲ. ಬೆಳಗಾವಿಯಲ್ಲಿ ಸೆ.26 ರಂದು ನಡೆಯಲಿದೆ. ಸೋಮವಾರ ರಾಜ್ಯಾದ್ಯಂತ ಸ್ವೀಕೃತಗೊಂಡಿರುವ 6,684 ಅಹವಾಲು ಮತ್ತು ಮನವಿಗಳ ಪೈಕಿ 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6,663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನಿಯಾಗಿವೆ.

ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು ಆಗಿವೆ. ಸಂಜೆ 6 ಗಂಟೆವರೆಗೂ ಸಿಕ್ಕಿರುವ ಅಂಕಿ ಅಂಶಗಳ ಪ್ರಕಾರ 2,100 ಕ್ಕೂ ಹೆಚ್ಚು ಅಹವಾಲುಗಳು ಕಂದಾಯ ಇಲಾಖೆಗೆ ಸೇರಿದ್ದಾಗಿವೆ. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ್ದಾಗಿದ್ದ ಸಾವಿರಕ್ಕೂ ಅಧಿಕ ಅಹವಾಲುಗಳು ಈ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಡಳಿತಕ್ಕೆ ಸಂಬಂಧಿಸಿದ್ದಾಗಿವೆ.

Advertisements

ಜಿಲ್ಲಾಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಎದುರಿಗೆ ಅತಿ ಹೆಚ್ಚು ಸಮಸ್ಯೆಗಳು ಮತ್ತು ಅಹವಾಲುಗಳು ಸಲ್ಲಿಕೆಯಾಗಿವೆ. ಉಳಿದಂತೆ ಜಿಲ್ಲಾಧಿಕಾರಿಗಳ ಮುಂದೆ ಸಲ್ಲಿಕೆಯಾದವುಗಳಾಗಿವೆ. ಜಿಲ್ಲಾ ರಕ್ಷಣಾಧಿಗಳ ಎದುರಿಗೆ ಕೆಲವು ಜಿಲ್ಲೆಗಳನ್ನು ಹೊರತು ಪಡಿಸಿದರೆ ಹೆಚ್ಚಿನ‌ ಕಡೆ ಅತಿ ಕಡಿಮೆ ಅಹವಾಲುಗಳು ಸಲ್ಲಿಕೆ ಆಗಿರುವುದು ಆಶ್ಚರ್ಯದ ಜತೆಗೆ ವಿಶ್ಲೇಷಣೆ ಮಾಡಬೇಕಾದ ಸಂಗತಿಯಾಗಿದೆ.

ಜನತಾ ದರ್ಶನ

ಹಾವೇರಿ ಜಿಲ್ಲೆಯಲ್ಲಿ ದಾಖಲೆ ಅಹವಾಲು

ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಹವಾಲುಗಳು ದಾಖಲಾಗಿವೆ. 774 ಅಹವಾಲುಗಳ ಮೂಲಕ ಹಾಸನ ಜಿಲ್ಲೆ ಮೊದಲ ಸ್ಥಾನದಲ್ಲಿದ್ದರೆ, 432 ಅಹವಾಲುಗಳ ಮೂಲಕ ಹಾಸನ ಎರಡನೇ ಸ್ಥಾನದಲ್ಲಿ, 423 ಅಹವಾಲುಗಳ ಮೂಲಕ ಕೋಲಾರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ.

ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.

ಮೌಖಿಕವಾಗಿ ದೂರು ಕೊಡಲು ಬಂದವರನ್ನು ಕುಳ್ಳಿರಿಸಿ ಅಧಿಕಾರಿ ಮತ್ತು ಸಿಬ್ಬಂದಿಯೇ ಅಹವಾಲುಗಳನ್ನು ಬರೆದು, ಬಳಿಕ ಅದನ್ನು ಓದಿಹೇಳಿ ಅರ್ಜಿದಾರರಿಂದ ಸಹಿ ಪಡೆದು ದಾಖಲಿಸಿಕೊಳ್ಳುವ ಪ್ರಯತ್ನಗಳೂ ನಡೆದಿವೆ.

ಮೈಸೂರು ಜಿಲ್ಲೆಯ ಜನತಾ ದರ್ಶನದಲ್ಲಿನ ಕುಂದುಕೊರತೆ ಮನವಿಗಳನ್ನು IPGRS ನಲ್ಲಿ upload ಮಾಡುವಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಎಲ್ಲಾ ಅರ್ಜಿಗಳನ್ನು Manually ಸ್ವೀಕರಿಸಲಾಗಿದ್ದು ಬಳಿಕ upload ಮಾಡಲಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರದ ಸಂಬಂಧ ಸಾವಿರಾರು ಅರ್ಜಿಗಳು ಬಂದಿವೆ. ಸ್ವೀಕರಿಸುವ ವೇಳೆ ಕೆಲವು ಅನಾನುಕೂಲಗಳು ಸಂಭವಿಸಿದ್ದರಿಂದ ಅವುಗಳನ್ನೂ upload ಮಾಡಲು ಸಾಧ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X